ಹುಬ್ಬಳ್ಳಿ:ಈ ಬಾರಿ ರಾಜ್ಯದಲ್ಲಿ ಜೆಡಿಎಸ್​ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂಬ ಹಠಕ್ಕೆ ಬಿದ್ದಿರುವ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ನಾನಾ ಕಸರತ್ತು ಹಾಗೂ ತಂತ್ರಗಳನ್ನು ಮಾಡುತ್ತಿದ್ದಾರೆ. ಈ ಬಾರಿ ಉತ್ತರ ಕರ್ನಾಟಕದತ್ತ ತಮ್ಮ ಗಮನ ಹರಿಸಿರುವ ಎಚ್​ಡಿಕೆ ಆಪರೇಷನ್ ಜೆಡಿಎಸ್​ಗೆ ಕೈ ಹಾಕಿದ್ದಾರೆ.
ಉತ್ತರ ಕರ್ನಾಟಕದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರನ್ನು ದಳಪತಿ ಟಾರ್ಗೆಟ್ ಮಾಡಿದ್ದಾರೆ. ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ ಹಾಗೂ ವಿಧಾನ ಪರಿಷತ್​ ಸ್ಪೀಕರ್ ಬಸವರಾಜ ಹೊರಟ್ಟಿ ಜಾಗಕ್ಕೆ ಬೇರೆ ಪ್ರಭಾವಿ ನಾಯಕರನ್ನು ಕರೆತರಲು ಮುಂದಾಗಿದ್ದಾರೆ. ಅದರಲ್ಲೂ ಟಿಕೆಟ್ ತಪ್ಪುವ ಭೀತಿಯಲ್ಲಿರುವ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಜೊತೆ ದಳಪತಿ ಕುಮಾರಸ್ವಾಮಿ ರಹಸ್ಯ ಮೀಟಿಂಗ್ ಮಾಡಿದ್ದಾರೆ.
ಒಂದೇ ತಿಂಗಳ ಅವಧಿಯಲ್ಲಿ ಬಿಜೆಪಿ ಮಾಜಿ ಶಾಸಕರನ್ನು ಎಚ್​ಡಿಕೆ ಎರಡು ಬಾರಿ ಭೇಟಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಬಿಜೆಪಿಯ ಒಂದು ವಿಕೆಟ್ ಪತನ ಆಗುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿಗೆ ಜೆಡಿಎಸ್​ ಗಾಳ ಹಾಕಿದೆ. ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಹಾಲರವಿ ಜೊತೆ ಎಚ್​ಡಿಕೆ ಮಾತುಕತೆ ನಡೆಸಿದ್ದಾರೆ.
2103ರಲ್ಲಿ ಬಿಜೆಪಿಯಿಂದ ಗೆದ್ದು ಹಾಲರವಿ ಶಾಸಕರಾಗಿದ್ದರು. ಕಳೆದ ಬಾರಿ ಹು-ಧಾ ಪಶ್ಚಿಮ ಕ್ಷೇತ್ರದ ಕೈ ಅಭ್ಯರ್ಥಿ ಇಸ್ಮಾಯಿಲ್​ ತಮಾಟಗಾರ ಅವರನ್ನೂ ಎಚ್​ಡಿಕೆ ಭೇಟಿ ಆಗಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ನಿಷ್ಟಾವಂತ ಕಾರ್ಯಕರ್ತರು ಮತ್ತು ಮುಖಂಡರೇ ಜೆಡಿಎಸ್​ ಟಾರ್ಗೆಟ್ ಆಗಿದ್ದು, ಉತ್ತರ ಕರ್ನಾಟಕದಲ್ಲಿ ಕಮಲ ಮತ್ತು ಕೈ ಬಗ್ಗು ಬಡೆಯಲು ಎಚ್​ಡಿಕೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಮಕ್ಕಳ ಪರೀಕ್ಷೆ; ತಾಯಂದಿರ ಅಗ್ನಿಪರೀಕ್ಷೆ

ಪೊಲೀಸರ ಕೈಗೆ ಸಿಕ್ಕಿಬಿದ್ದ 16 ಪಾನಮತ್ತ ಬಸ್​ ಚಾಲಕರಿಗೆ ವಿಚಿತ್ರ ಶಿಕ್ಷೆ! 1000 ಬಾರಿ ಬರೆದ ಬಳಿಕ ಸಿಕ್ತು ಜಾಮೀನು

ಬೆಂಗ್ಳೂರಿಂದ ಕೆ.ಎಂ ದೊಡ್ಡಿಗೆ ಬಂದು ದ್ವಿಚಕ್ರ ವಾಹನ ಸವಾರರಿಂದ ಹಣ ವಸೂಲಿ: ನಕಲಿ PSI ಅರೆಸ್ಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
