ಬೆಂಗಳೂರು:ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು, ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್​ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರಣಿ ಟ್ವೀಟ್​ ಮಾಡಿರುವ ಎಚ್​ಡಿಕೆ, ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ. ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಮಂಡ್ಯದ ಸಭೆಯೊಂದರಲ್ಲಿ, ಗುಜರಾತಿನ ಅಮುಲ್ ಜತೆ ನಂದಿನಿಯನ್ನು ವಿಲೀನ ಮಾಡುವುದಾಗಿ ಹೇಳಿದ್ದರು. ಹಿಂದಿ ಪದ ಮುದ್ರಣ ನಂದಿನಿ ಹೈಜಾಕಿನ ಅರಂಭವಾ? ಶಾ ಅವರ ಹೇಳಿಕೆಯನ್ನು ಕನ್ನಡಿಗರು ಖಂಡಿಸಿದ್ದರು. ನಾನೂ ವಿರೋಧಿಸಿದ್ದೆ. ಆಮೇಲೆ ಸುಮ್ಮನಾಗಿದ್ದ ಬಿಜೆಪಿ ಸರ್ಕಾರ ಈಗ ಆಹಾರ ಸುರಕ್ಷತಾ ಪ್ರಾಧಿಕಾರದ ಮೂಲಕ ಹಿಂಬಾಗಿಲಿನಿಂದ ಮೊಸರಿನ ಪಕ್ಕ ದಹಿ ಸೇರಿಸಿ ಕನ್ನಡಿಗರ ಸ್ವಾಭಿಮಾನಕ್ಕೆ ಸಡ್ಡು ಹೊಡೆದಿದೆ. ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ಇದನ್ನೂ ಓದಿ:SSLC ವಿದ್ಯಾರ್ಥಿಗಳಿಗೆ ಈ ಬಾರಿಯೂ ಸಿಗಲಿದೆ 10% ಗ್ರೇಸ್ ಮಾರ್ಕ್ಸ್: ಯಾವೆಲ್ಲ ವಿಷಯಕ್ಕೆ ಸಿಗಲಿದೆ?
ಕನ್ನಡಕ್ಕೆ ಕೊಕ್ಕೆ ಹಾಕಿ ಹಿಂದಿಯನ್ನು ಮೆಲ್ಲಗೆ ಹೇರಿ ಇಡೀ ನಂದಿನಿ ಪದಾರ್ಥಗಳನ್ನು ಹಳ್ಳ ಹಿಡಿಸುವುದು ಇದರ ಹಿಂದಿರುವ ಘೋರ ಷಡ್ಯಂತ್ರ. ಆಮೇಲೆ, ನಂದಿನಿ ಉತ್ಪನ್ನಗಳು ಮಾರಾಟವಾಗುತ್ತಿಲ್ಲ ಎಂದು ಕಥೆ ಕಟ್ಟಿ, ಅದನ್ನು ಉಳಿಸುವ ನಾಟಕವಾಡಿ ನಂದಿನಿಯನ್ನು ಸಲೀಸಾಗಿ ಅಮುಲ್ ಜತೆಗೆ ವಿಲೀನ ಮಾಡುವ ಹುನ್ನಾರವಷ್ಟೇ ಇದು.
ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿದ್ದೇವೆ ಎಂದರೆ ಇಷ್ಟ ಬಂದಹಾಗೆ ಒಳ ನುಸುಳುವುದಲ್ಲ. ಸೌಮ್ಯವಾಗಿದ್ದೇವೆ ಎಂದರೆ ಸುಮ್ಮನಿದ್ದೇವೆ ಎಂದಲ್ಲ. ನಂದಿನಿ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್ ಅಡಿಯಾಳಲ್ಲ. ಕರ್ನಾಟಕ ಭಾರತ ಗಣರಾಜ್ಯದ ಒಂದು ಭಾಗವೇ ಹೊರತು ಗುಜರಾತಿನ ವಸಾಹತುವಲ್ಲ. ಈಚೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್​ ಷಾ, ಅವರಿಬ್ಬರೂ ಕರ್ನಾಟಕಕ್ಕೆ ಬಲು ಬಿಡುವಾಗಿ ಬಂದರು ಎಂದರೆ, ಕೇವಲ ಚುನಾವಣೆ ಉದ್ದೇಶಕ್ಕೇ ಎಂದುಕೊಂಡಿದ್ದೆ. ಆದರೆ, ಕರ್ನಾಟಕದಲ್ಲಿ ನಡೆದ ಅವರಿಬ್ಬರ ಶೋಗಳ ಸವಾರಿ ನಮ್ಮ ನಂದಿನಿಯ ಹೆಸರಿಗೇ ಕುತ್ತು ತರುತ್ತದೆ ಎಂದು ಭಾವಿಸಿರಲಿಲ್ಲ.
ಆರೂವರೆ ಕೋಟಿ ಕನ್ನಡಿಗರ ಮನೋಭಾವಕ್ಕೆ ವಿರುದ್ಧವಾಗಿ ದಹಿ ಎನ್ನುವ ಪದವನ್ನು ಮುದ್ರಿಸಿದ್ದೇ ಕೆಎಂಎಫ್ ಮಾಡಿರುವ ದೊಡ್ದ ತಪ್ಪು. ಇದು ರಾಜ್ಯ ಬಿಜೆಪಿ ಸರ್ಕಾರದ ಗಮನಕ್ಕೆ ಬಾರದೆ ಆಗಿರುವ ಕೃತ್ಯವಲ್ಲ. ಕಾಣದ ಕೈಗಳ ಕಳ್ಳಾಟ ಇಲ್ಲಿ ಸ್ಪಷ್ಟ. ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ ಹಿಂದಿ ಹೇರಿಕೆ ಆಗಿದೆ. ಅದನ್ನು ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಹಾಗೂ ಅದರ ಕೀಲುಗೊಂಬೆ ಕೆಎಂಎಫ್ ಸದ್ದಿಲ್ಲದೆ ಒಪ್ಪಿಕೊಂಡಿವೆ. ಇದು ಕನ್ನಡ ವಿರೋಧಿ ಕೆಲಸ. ತಕ್ಷಣವೇ ದಹಿ ಪದ ಮುದ್ರಿಸುವುದನ್ನು ನಿಲ್ಲಿಸಬೇಕು.
ಇದನ್ನೂ ಓದಿ:ರಾಹುಲ್​ ಗಾಂಧಿ ಅನರ್ಹ ಪ್ರಕರಣದಲ್ಲಿ ಪ್ರಜಾಪ್ರಭುತ್ವ ತತ್ವಗಳು ಅನ್ವಯಿಸಬೇಕು: ಜರ್ಮನಿ ಅಭಿಪ್ರಾಯ
ಯಶವಂತಪುರದಲ್ಲಿ ಪಂಚರತ್ನ ರಥಯಾತ್ರೆ ನಡೆಯುವ ವೇಳೆ ಅಭಿಮಾನಿಗಳು, ಜೆಡಿಎಸ್​ ಕಾರ್ಯಕರ್ತರು ‘ನಂದಿನಿ ಉಳಿಸಿ’ ಎಂದು ಮೊಸರು, ಹಾಲಿನ ಹಾರ ಹಾಕಿ ನನ್ನ ಗಮನ ಸೆಳೆದಿದ್ದರು. ನಂದಿನಿಗೆ ಕುಣಿಕೆ ಬಿಗಿಯುವ ಯಾವುದೇ ದುಷ್ಕೃತ್ಯ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಸರಣಿ ಟ್ವೀಟ್​ ಮೂಲಕ ಬಿಜೆಪಿ ಸರ್ಕಾರವನ್ನು ಮಾಜಿ ಸಿಎಂ ಎಚ್​ಡಿಕೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು,ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು.ಇದನ್ನು ಒಪ್ಪಲು ಸಾಧ್ಯವಿಲ್ಲ.1/9#StopHindiImpositionpic.twitter.com/fgAAeZURPQ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)March 30, 2023

ಮೊಸರಿನ ಪ್ಯಾಕೆಟ್​ಗಳಲ್ಲಿ ಹಿಂದಿಯ ‘ದಹಿ’ ಪದ ಬಳಕೆಗೆ FSSAI ಸೂಚನೆ: ಸಾಧ್ಯವಿಲ್ಲ ಎಂದ ತಮಿಳುನಾಡು

ಈ ಬಾರಿಯಾದ್ರೂ ಅರ್ಜುನ್​ ತೆಂಡೂಲ್ಕರ್​ಗೆ ಅವಕಾಶ ಕೊಡ್ತೀರಾ? ರೋಹಿತ್ ಕೊಟ್ಟ​ ಉತ್ತರ ವೈರಲ್​

ನಾನು ಕಳ್ಳತನ ಮಾಡಲು ಐಶ್ವರ್ಯಾ ಕಾರಣ! ಪೊಲೀಸರ ಮುಂದೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸೇವಕಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − four =
Remember me
