ಬೆಂಗಳೂರು:ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಮತ್ತು ಹಾಲಿ ಸಿಎಂ ಸಿದ್ದರಾಮಯ್ಯ ನಡುವೆ ನೈಸ್​ ಅಕ್ರಮ ವಿಚಾರದಲ್ಲಿ ಮಾತಿನ ಸಮರ ಮುಂದುವರಿದಿದೆ. ನೈಸ್​ ಹಗರಣದ ತನಿಖೆ ನಡೆಸಲು ಕಾಂಗ್ರೆಸ್​ ನಾಯಕರು ಕೈ ಕಟ್ಟಿಹಾಕಿದ್ದರು ಎಂಬ ಎಚ್​ಡಿಕೆ ಆರೋಪ ಸುಳ್ಳು ಎಂದು ನಿನ್ನೆ ಸಿದ್ದರಾಮಯ್ಯ ಅವರು ಹೇಳಿದ್ದರು. ಇದೀಗ ಎಚ್​ಡಿಕೆ ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಮಾನ್ಯ ಸಿದ್ದರಾಮಯ್ಯ ಅವರೇ ನೀವು ಈಗ ಕರ್ನಾಟಕದ ಮುಖ್ಯಮಂತ್ರಿ. ನನಗೂ ಮುಖ್ಯಮಂತ್ರಿ, ಮಹಾದೇವಪ್ಪ ಅವರಿಗೂ ಮುಖ್ಯಮಂತ್ರಿ, ಕಾಕಾ ಪಾಟೀಲರಿಗೂ ಮುಖ್ಯಮಂತ್ರಿ. ಇಂಥಾ ನಿಮ್ಮನ್ನು ‘ಸುಳ್ಳುರಾಮಯ್ಶ’ ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ ‘ರಾಮ’ರಿದ್ದಾರೆ. ತಾವು ‘ಸತ್ಯರಾಮಯ್ಯ’ನವರೇ ಆಗಿದ್ದರೆ, ಸ್ವತಃ ತಾವುಗಳೇ ನೇಮಿಸಿದ್ದ, ತಮ್ಮದೇ ಸರ್ಕಾರದ ಕಾನೂನು ಸಚಿವರೇ ಮುಖ್ಯಸ್ಥರಾಗಿದ್ದ ಸದನ ಸಮಿತಿ ನೀಡಿದ್ದ ನೈಸ್ ಕರ್ಮಕಥೆಯನ್ನು ನೀವು ದಯಮಾಡಿ ಪುರುಸೊತ್ತು ಮಾಡಿಕೊಂಡು ಪಾರಾಯಣ ಮಾಡಿ.
ಇದನ್ನೂ ಓದಿ:ಜೀವನದಲ್ಲಿ ಜಿಗುಪ್ಸೆ ಹೊಂದಿ ಕೆರೆಗೆ ಹಾರಿದ ಮಹಿಳೆ: ಪ್ರಾಣ ಪಣಕ್ಕಿಟ್ಟು ರಕ್ಷಣೆ ಮಾಡಿದ ಬೆಳಗಾವಿ ಕಾನ್ಸ್​ಟೆಬಲ್​
ನೈಸ್ ಅಕ್ರಮ ತನಿಖೆಗೆ ನಾನೇನು ಮಾಡಿದ್ದೆ ಎಂದು ಸಿಎಂ ಸಾಹೇಬರು ಕೇಳಿದ್ದಾರೆ. ಈ ಬಾಲಿಶ ಪ್ರಶ್ನೆಗೆ ಗೌರವದಿಂದಲೇ ಉತ್ತರಿಸುವೆ. ನಾನು ಸಿಎಂ ಆಗಿದ್ದಾಗ ನನ್ನ ಜತೆಗಿದ್ದ ಅಡ್ವೋಕೇಟ್ ಜನರಲ್, ಅವರ ಕಾನೂನು ತಂಡ ನೈಸ್ ದೌಲತ್ತಿನ ಹುಟ್ಟಡಗಿಸಿತ್ತು. ಅದುವರೆಗೆ ಅಧಿಕಾರಿಗಳನ್ನು ಬೆದರಿಸಿಟ್ಟುಕೊಂಡಿದ್ದ ಆ ಕಂಪನಿಗೆ ಬೊಂಬೆ ತೋರಿಸಿದ್ದೆವು. ವಿವಿಧ ನ್ಯಾಯಾಲಯಗಳಲ್ಲಿ ಹೂಡಲಾಗಿದ್ದ ಎಲ್ಲಾ ನಿಂದನಾ ಅರ್ಜಿಗಳನ್ನು 2019ರ ಜುಲೈನಲ್ಲಿ ಗೌರವಾನ್ವಿತ ಸುಪ್ರೀಂಕೋರ್ಟ್ ವಜಾ ಮಾಡಿತ್ತು. ಅದಕ್ಕಾಗಿ ಅಂದಿನ ಅಡ್ವೋಕೇಟ್ ಜನರಲ್, ಮತ್ತವರ ಕಾನೂನು ತಂಡವನ್ನು ನಾನು ಅಭಿನಂದಿಸಲೇಬೇಕು.
ಹಿಂದಿನ ಬಿಜೆಪಿ ಸರ್ಕಾರವೂ ಈ ಲೂಟಿ ಕಂಪನಿಯ ರೆಕ್ಕೆಪುಕ್ಕ ಕತ್ತರಿಸಿ ಹಾಕಿತ್ತು. ಅಂದಿಗೇ (2018) ನೈಸಿನ ಕೊಚ್ಚೆಯಲ್ಲಿ ಹೊರಳಾಡಿ ಪೊಗದಸ್ತಾಗಿ ಮೇಯ್ದು ಬಲಿತಿದ್ದ ಪ್ರಾಣಿಗಳನ್ನು ಎದುರು ಹಾಕಿಕೊಂಡು ನಾನು ತೆಗೆದುಕೊಂಡ ರಿಸ್ಕ್ ಸಣ್ಣದೇನಲ್ಲ ಸಿದ್ದರಾಮಯ್ಯನವರೇ. ನನ್ನ ಮೇಲೆ ಬಂದ ಒತ್ತಡಗಳ ಬಗ್ಗೆ ನಿಮಗೂ ಮಾಹಿತಿ ಇರಬಹುದು. ಆಗ ನೀವು ಮತ್ತು ನಿಮ್ಮ ಟೀಮು ನನಗೆ ಕೊಟ್ಟ ನಿತ್ಯ ಕಿರುಕುಳವನ್ನು ಮರೆಯಲಾದೀತೆ?
ನಿಮ್ಮ ಹಂಗಿನಲ್ಲಿದ್ದ ನನಗೆ, ನಿಮ್ಮದೇ ಪಕ್ಷದವರ ವಿರುದ್ಧ ತನಿಖೆ ನಡೆಸಿ, ನೈಸ್ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆಯುವ ದಮ್ಮು ತಾಕತ್ತು ಇರಲಿಲ್ಲ. ನಿಜ ಒಪ್ಪಿಕೊಳ್ಳುತ್ತೇನೆ. ಆದರೆ, ನಿಮ್ಮದು ಪೂರ್ಣ ಬಹುಮತದ ಬಲಿಷ್ಠ ಸರಕಾರ, ನುಡಿದಂತೆ ನಡೆಯುವ ‘ಅಪರ ಹರಿಶ್ಚಂದ್ರ’ನ ಸರಕಾರ! ಹೌದಲ್ಲವೇ? ಹಾಗಿದ್ದರೆ ಏಕೆ ತಡ? ಸ್ವತಃ ನೀವೇ ನೇಮಿಸಿದ್ದ ಸದನ ಸಮಿತಿ (2014-2016) ವರದಿಯ ಮೇಲೆ ಖಡಕ್ ಕ್ರಮ ಜರುಗಿಸಿ. ವರದಿಯಲ್ಲಿ ನೈಸ್ ಅಕ್ರಮಗಳ ಭಾಗವತವೇ ತೆರೆದುಕೊಂಡಿದೆ. ಇಡೀ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆಯಲು ದಿಟ್ಟಹೆಜ್ಜೆ ಇಡಿ. ‘ಸಿದ್ದನೆಪ’ ಹೇಳಿ ಸಮಯವನ್ನು ಕೊಲ್ಲಬೇಡಿ? ಬಹುಮತ ಇದ್ದರೆ ಸಾಲದು, ಬದ್ಧತೆಯೂ ಇರಬೇಕು. ಅಲ್ಲವೇ?
ಇದನ್ನೂ ಓದಿ:ಕೊರಳಪಟ್ಟಿಯೇ ಉರುಳು?: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಎಂಟು ಚಿರತೆ ಸಾವು
ನಾನು ರೈತರ ಸಾಲಮನ್ನಾ ಮಾಡಿದೆ ಎನ್ನುವುದು ಎಷ್ಟು ಸತ್ಯವೋ, ಅದಕ್ಕೆ ನೀವು ಹೆಜ್ಜೆಹೆಜ್ಜೆಗೂ ಅಡ್ಡಿ ಮಾಡಿದ್ದೂ ಅಷ್ಟೇ ಸತ್ಯ. ಭಾಗ್ಯಗಳಿಗೆ ನಯಾಪೈಸೆ ಕಡಿಮೆ ಆಗಬಾರದು ಎಂದು ನನಗೆ ಕೊಟ್ಟ ಚಿತ್ರಹಿಂಸೆ ಅಸತ್ಯವೇ? ಗಟ್ಟಿ ದನಿಯಲ್ಲಿ ಅಬ್ಬರಿಸಿ ಹೇಳಿದರೆ ಸುಳ್ಳು ಸತ್ಯವಾಗುವುದಿಲ್ಲ. ಸತ್ಯರಾಮಯ್ಯರಾಗಿ ಇತಿಹಾಸದಲ್ಲಿ ದಾಖಲಾಗಿ ಎಂದು ಸರಣಿ ಟ್ವೀಟ್​ ಮೂಲಕ ಸಿದ್ದರಾಮಯ್ಯ ಅವರಿಗೆ ಎಚ್​​ಡಿಕೆ ತಿರುಗೇಟು ನೀಡಿದ್ದಾರೆ.
ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಯ ವಿರುದ್ಧವೇ ತಿರುಗಿಬಿದ್ದ ಪೇದೆ: ಹೆದ್ದಾರಿಯಲ್ಲಿ ಮಲಗಿ ಹೈಡ್ರಾಮ!

ಗ್ರೆನೇಡ್ ರಹಸ್ಯದ ಬೆನ್ನತ್ತಿದ ಸಿಸಿಬಿ ಪೊಲೀಸರು: ಶಂಕಿತ ಉಗ್ರರ ಮೊಬೈಲ್ ರಿಟ್ರೖೆವ್​ಗೆ ರವಾನೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 − ten =
Remember me
