ಬೆಂಗಳೂರು:ಕರ್ನಾಟಕಕ್ಕೆ ನಿತ್ಯ 1200 ಟನ್​ ಆಮ್ಲಜನಕ ಪೂರೈಸುವಂತೆ ಹೈಕೋರ್ಟ್​ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿರುವ ಕೇಂದ್ರ ಸರ್ಕಾರದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್​​.ಡಿ. ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.
ಈ ಬಗ್ಗೆ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದು, ಕರ್ನಾಟಕಕ್ಕೆ ಆಮ್ಲಜನಕ ಪೂರೈಕೆ ಹೆಚ್ಚಿಸಿದರೆ ಆರೋಗ್ಯ ವ್ಯವಸ್ಥೆ ಕುಸಿಯಲಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ. ಕರ್ನಾಟಕದಿಂದ ಎಲ್ಲವನ್ನೂ ಪಡೆದ ಕೇಂದ್ರ ಕರ್ನಾಟಕವನ್ನು ಇನ್ನೆಷ್ಟು ವಂಚಿಸಬೇಕೆಂದಿದೆ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯಕ್ಕೆ ನಿತ್ಯ 1700 ಟನ್‌ ಆಮ್ಲಜನಕದ ಅಗತ್ಯವಿದೆ. ಆದರೂ, 1200 ಟನ್‌ ಆಮ್ಲಜನಕ ಇದ್ದರೆ ಪರಿಸ್ಥಿತಿ ಹೇಗೋ ನಿಭಾಯಿಸಬಹುದು. ಕರ್ನಾಟಕದಲ್ಲಿ ಹೆಚ್ಚು ಕಡಿಮೆ 1200 ಟನ್‌ಗೂ ಅಧಿಕ ಪ್ರಮಾಣದ ಆಮ್ಲಜನಕವೂ ಉತ್ಪಾದನೆಯಾಗುತ್ತಿದೆ. ಆದರೆ, ನಮ್ಮಿಂದ ಆಮ್ಲಜನಕ ಕಿತ್ತುಕೊಳ್ಳುತ್ತಿರುವ ಕೇಂದ್ರ, ನಮಗೆ ಪೂರೈಸುತ್ತಿರುವುದು 865-965 ಟನ್‌ ಮಾತ್ರ.
ಅನುದಾನದಲ್ಲಿ ತಾರತಮ್ಯ, ಜಿಎಸ್‌ಟಿ ಬಾಕಿಯಲ್ಲಿ ತಾರತಮ್ಯ, ನೆರೆ-ಬರ ಪರಿಹಾರದಲ್ಲಿ ಮಾಡಲಾದ ತಾರತಮ್ಯವನ್ನು ಕರ್ನಾಟಕ, ಕನ್ನಡಿಗರು ಹೇಗೋ ಸಹಿಸಿದ್ದಾರೆ. ಆದರೆ, ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಈ ಮಾರಕ ತಾರತಮ್ಯವನ್ನು ಸಹಿಸುವುದಾದರೂ ಹೇಗೆ. ಇದು ಕನ್ನಡಿಗರ ಜೀವ, ಜೀವನದ ಪ್ರಶ್ನೆ ಎಂಬುದನ್ನು ಕೇಂದ್ರ ಸರ್ಕಾರ ಅರಿಯುತ್ತಿಲ್ಲ ಏಕೆ?
ಅಷ್ಟಕ್ಕೂ ನಾವು ಅಧಿಕವಾಗಿ ಏನೂ ಕೇಳುತ್ತಿಲ್ಲ. ನಮ್ಮಲ್ಲಿ ಉತ್ಪಾದನೆಯಾಗುತ್ತಿರುವ ಆಮ್ಲಜನಕವನ್ನು ನಮಗೇ ನೀಡಿ ಎಂಬುದು ನಮ್ಮ ಬೇಡಿಕೆ. ನಮ್ಮವರ ಜೀವವನ್ನೇ ಕಿತ್ತು ಗುಜರಾತ್‌ ಮತ್ತಿತರ ರಾಜ್ಯಗಳ ಜನರ ಜೀವ ಉಳಿಸಬೇಕಾದ ಅನಿವಾರ್ಯತೆ, ತ್ಯಾಗ ಮಾಡಬೇಕಾದ ಸಂದಿಗ್ಧತೆಯಲ್ಲಿ ನಮ್ಮನ್ನು ಸಿಲುಕಿಸಬಾರದು. ಕೇಂದ್ರ ನಮ್ಮ ಪಾಲನ್ನು ನಮಗೆ ನೀಡಲಿ ಎಂದು ಒತ್ತಾಯಿಸಿದ್ದಾರೆ.
ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಕೇಂದ್ರದ ಇಂಥ ತಾರತಮ್ಯವನ್ನು ಪ್ರಶ್ನಿಸಬೇಕು. ಇಲ್ಲಿವರೆಗೆ ಬಾಯಿಗೆ ಬೀಗ ಹಾಕಿಕೊಂಡಿರುವ ಬಿಜೆಪಿ ಸಂಸದರು ಈಗ ಜನರ ಜೀವ ಉಳಿಸುವುದಕ್ಕಾದರೂ ಬಾಯಿ ಬಿಡಲಿ. ರಾಜ್ಯದಿಂದ ಶಕ್ತಿ ಪಡೆದಿರುವ ಕೇಂದ್ರ ಅದೇ ಶಕ್ತಿಯನ್ನು ಬಳಸಿಕೊಂಡು ರಾಜ್ಯದ ಮೇಲೆ ಗದಾಪ್ರಹಾರ ನಡೆಸುತ್ತಿರುವುದನ್ನು ಜನ ಗಮನಿಸಲಿ ಎಂದು ಹೇಳಿದರು.
ಇಷ್ಟವಿಲ್ಲದ ಮದುವೆಯಿಂದ ತಪ್ಪಿಸಿಕೊಳ್ಳಲು ಕಲ್ಯಾಣ ಮಂಟಪದಲ್ಲೇ ವಧುವಿನಿಂದ ಹೈಡ್ರಾಮ..!

ಕಾರಿನಲ್ಲೇ ಕೂತು ಲಸಿಕೆ ಪಡೆಯಿರಿ ! ಪ್ರತಿ ವಲಯದಲ್ಲೂ ಡ್ರೈವ್​ಇನ್ ಲಸಿಕಾ ಕೇಂದ್ರಗಳ ಸ್ಥಾಪನೆ

ಮಾಧ್ಯಮ ನಿರ್ಬಂಧ ಅಸಾಧ್ಯ: ಚುನಾವಣಾ ಆಯೋಗದ ಅರ್ಜಿಗೆ ಸುಪ್ರೀಂ ಪ್ರತಿಕ್ರಿಯೆ

HDK
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 16 =
Remember me
