ಮೈಸೂರು:ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ನೇತೃತ್ವದ ಆಡಳಿತವನ್ನು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಪ್ರಶಂಸಿಸಿದ್ದು, ಅವರೊಬ್ಬ ರೈತನ ಮಗ ಎಂದಿದ್ದಾರೆ.
ಕುಮಾರಸ್ವಾಮಿ 20-20 ಸರ್ಕಾರದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ರೈತರ ಸಾಲ ಮನ್ನಾದಂತಹ ರೈತಪರ ಕಾರ್ಯಕ್ರಮ ನೀಡಿದ್ದಾರೆ. ಕುಮಾರಸ್ವಾಮಿ ಒಬ್ಬ ರೈತನ ಮಗ ಎಂದು ಸಂಸದರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಗೋಹತ್ಯೆ ನಿಷೇಧಿಸುವ ಕಠಿಣ ನಿಯಮವನ್ನೊಳಗೊಂಡ ಕರ್ನಾಟಕ ಜಾನುವಾರು ವಧೆ, ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ ಜೆಡಿಎಸ್​ ಬೆಂಬಲ ಕುರಿತು ಜೆಡಿಎಸ್​ ನಿಲುವಿನ ವಿರುದ್ಧ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ ಎಚ್​ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಇದರ ಬೆನ್ನಲ್ಲೇ ಎಚ್​ಡಿಕೆ ಪರ ಬ್ಯಾಟಿಂಗ್​ ಮಾಡಿದ ಪ್ರತಾಪ್​ ಸಿಂಹ, ಬಿಜೆಪಿ ಸರ್ಕಾರ ಕೈಗೊಂಡ ಒಳ್ಳೆಯ ಕೆಲಸವನ್ನು ಕುಮಾರಸ್ವಾಮಿ ಬೆಂಬಲಿಸಿದ್ದಾರೆ. ಅವರನ್ನು ರಾಜಕೀಯ ಕಾರಣಕ್ಕೆ ಟೀಕಿಸುವುದು ಸಣ್ಣತನ. ರೈತರು ಹಾಗೂ ಗೋವಿನ ಬಗ್ಗೆ ಎಚ್​ಡಿಕೆಗೆ ಗೊತ್ತಿದೆ. ಹೀಗಾಗಿ ಅವರು ಕಾಯ್ದೆಯನ್ನು ಬೆಂಬಲಿಸಿದ್ದಾರೆ ಎಂದರು.
ಗೋಹತ್ಯೆ ನಿಷೇಧ ಕಾಯ್ದೆ ಪರಾಮರ್ಶೆಯಲ್ಲಿ ಮೂಡಿವೆ ಹಲವು ಪ್ರಶ್ನೆ! 13 ಅಂಶ ಪ್ರಸ್ತಾಪಿಸಿದ ಜೆಡಿಎಸ್​

ಮದ್ವೆಗೆ 2 ದಿನ ಇದ್ದಂತೆ ವಧುಗೆ ಕೈಕೊಟ್ಟ ವರ​! ಮದ್ವೆ ದಿನ ವಾಪಸ್​ ಬಂದವನಿಂದ ಮತ್ತೊಂದು ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 6 =
Remember me
