ಬೆಂಗಳೂರು:ರಾಜ್ಯ ಕಾಂಗ್ರೆಸ್​ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿರುವ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿ ಮೈಸೂರಿಗೆ ಪಾದಯಾತ್ರೆ ನಡೆಸಲು ಸಜ್ಜಾಗಿದ್ದು, ಈ ಸಂಬಂಧ ಸರಣಿ ಸಭೆಗಳನ್ನು ನಡೆಸುತ್ತಿದೆ. ಆದರೆ, ಈ ಪಾದಯಾತ್ರೆಯಲ್ಲಿ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂಗೌಡ ಭಾಗಿಯಾಗುತ್ತಿರುವ ಕಾರಣ ಜೆಡಿಎಸ್​ನ ಯಾವೊಬ್ಬ ನಾಯಕರು ಭಾಗಿಯಾಗುವುದಿಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ ತಮ್ಮ ಮಿತ್ರ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿತ್ತು.
ಇತ್ತ ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ ಅಸಮಾಧಾನ ಹೊರಹಾಕುತ್ತಿದ್ದಂತೆ ಎಚ್ಚೆತ್ತ ಬಿಜೆಪಿ ಹೈಕಮಾಂಡ್​ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರು ಒಪ್ಪಿಕೊಂಡಿರುವುದಾಗಿ ತಿಳಿದು ಬಂದಿದೆ. ಆದರೆ, ಒಂದು ಷರತ್ತನ್ನು ವಿಧಿಸಿದ್ದಾರೆ.
ಪಾದಯಾತ್ರೆ ಸಂಬಂಧ ಅಸಮಾಧಾನ ಮೂಡಿದ ಬೆನ್ನಲ್ಲೇ ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಪ್ರಲ್ಹಾದ್​ ಜೋಶಿ ಎಚ್​ಡಿಕೆ ಮನವೊಲಿಸುವುದರಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ನಾಯಕರ ಬಳಿ ಎಚ್​.ಡಿ. ಕುಮಾರಸ್ವಾಮಿ ಷರತ್ತೊಂದನ್ನು ವಿಧಿಸಿದ್ದಾರೆ. ಅದೇನೆಂದರೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಬಾರದು ಎಂಬ ಕಂಡೀಷನ್​ ಹಾಕಿದ್ದಾರೆ. ಈ ವಿಚಾರವಾಗಿ ಬಿಜೆಪಿ ಇನ್ನಷ್ಟೇ ಪ್ರತಿಕ್ರಿಯಿಸಬೇಕಿದೆ.
ಇದನ್ನೂ ಓದಿ:ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅವಕಾಶ ಕೊಟ್ಟರೆ ರಾಜ್ಯದಲ್ಲಿ ರಕ್ತ ಕ್ರಾಂತಿಯಾಗುತ್ತೆ: ಕೈ ಶಾಸಕ ಎಚ್ಚರಿಕೆ
ಪಾದಯಾತ್ರೆ ಸಂಬಂಧ ಈ ಹಿಂದೆ ನಡೆದಿದ್ದ ಬಿಜೆಪಿ ಕೋರ್​ ಕಮಿಟ ಸಭೆ ನಡೆಸಿತ್ತು. ಸಭೆಯಲ್ಲಿ ಮಾಜಿ ಶಾಸಕರಾದ ಪ್ರೀತಂ ಗೌಡ ಮತ್ತು ಪಿ. ರಾಜೀವ್ ಹಾಜರಿದ್ದರು.  ಈ ವಿಚಾರವಾಗಿ ಕಿಡಿಕಾರಿದ್ದ ಕೇಂದ್ರ ಎಚ್​ಡಿಕೆ ಪಾದಯಾತ್ರೆಯ ಬಗ್ಗೆ ನಮ್ಮನ್ನು ಸಭೆಗೆ ಕರೆಯುವ ಮುನ್ನವೇ ಬಿಜೆಪಿ ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಂಡಿದೆ. ಹಾಗಾಗಿ ಇದಕ್ಕೆ ನಮ್ಮ ಪಕ್ಷದಿಂದ ನೈತಿಕ ಬೆಂಬಲವಿಲ್ಲ.
ಅಲ್ಲದೇ ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವರ ಜೊತೆ ಕೂರಿಸಿಕೊಂಡು ಸಭೆ ನಡೆಸುತ್ತೀರಾ. ಚುನಾವಣಾ ಮೈತ್ರಿಯೇ ಬೇರೆ, ರಾಜಕೀಯವೇ ಬೇರೆ. ಸ್ತೆ ರಸ್ತೆಗಳಲ್ಲಿ ಪೆನ್​ಡ್ರೈವ್ ಲಭ್ಯವಾಗುವಂತೆ ಮಾಡಿದ ವ್ಯಕ್ತಿ. ಆತನೊಂದಿಗೆ ನಾನು ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ನನ್ನ ಕುಟುಂಬಕ್ಕೆ ವಿಷಯಿಟ್ಟವರ ಜತೆ ಪಾದಯಾತ್ರೆಯಲ್ಲಿ ನಾನು ಭಾಗಿಯಾಗಲು ಸಾಧ್ಯವೇ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಪ್ರೀತಂ ಗೌಡ ವಿರುದ್ಧ ಗುಡುಗಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 − sixteen =
Remember me
