ಮಂಡ್ಯ:ಜಿಲ್ಲೆಯ ಜನರು ಮೊದಲಿನಿಂದಲೂ ಜೆಡಿಎಸ್​ಗೆ ಆಶೀರ್ವಾದ ಮಾಡಿದ್ದಾರೆ. ಈ ಬಾರಿಯೂ ರಾಜ್ಯದಲ್ಲಿ ಮಣ್ಣಿನ ಮಕ್ಕಳ ಸರ್ಕಾರವನ್ನು ಆಡಳಿತಕ್ಕೆ ತರಲು ಜಿಲ್ಲೆಯ ಜನತೆ ತೀರ್ಮಾನ ಮಾಡಿದ್ದಾರೆ. ಹೀಗಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯದ ಏಳೂ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಜಯ ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹಲಗೂರಿನಲ್ಲಿ ಹೇಳಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಇತ್ತೀಚೆಗೆ ಬಿಡುಗಡೆಯಾಗಿತ್ತು. ಈ ವಿಚಾರವಾಗಿ ಕುಮಾರಸ್ವಾಮಿ ಮಾತನಾಡುತ್ತಾ, ಯಾವುದೇ ಅಭ್ಯರ್ಥಿಗಳು ಬದಲಾವಣೆಗೆ ಆಗುವುದಿಲ್ಲ. ಕೊನೆಯ ಕ್ಷಣದಲ್ಲಿ 7-8 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಬದಲಾವಣೆ ಆಗಬಹುದು. ಗುರ್ಮಿಟ್ಕಲ್ ಕ್ಷೇತ್ರದ ನಾಗನಗೌಡ ಕಂತ್ಕೂರ್ ನನಗೆ ಬೇಡಾ, ನನ್ನ ಮಗನಿಗೆ ಟಿಕೆಟ್ ಕೊಡಿ ಎಂದು ಹೇಳಿದ್ದಾರೆ. ಅಂತಹ ಕ್ಷೇತ್ರಗಳಲ್ಲಿ ಮಾತ್ರ ಬದಲಾವಣೆ ಆಗುತ್ತದೆ ಎಂದು ಹೇಳಿದರು.
ಎಚ್​.ಡಿ. ಕುಮಾರಸ್ವಾಮಿ ಕೈಗೊಂಡಿರುವ ಪಂಚರತ್ನ ರಥಯಾತ್ರೆ ಮಂಡ್ಯದ ಹಲಗೂರಿಗೆ ತಲುಪಿದೆ. ಈ ವೇಳೆ ಅಲ್ಲಿನ ಕಾರ್ಯಕರ್ತರು ಬೃಹತ್ ಗಾತ್ರದ ಬೆಲ್ಲದ ಹಾರವನ್ನು ಹಾಕಿ ಸ್ವಾಗತಿಸಿದ್ದಾರೆ. ನಂತರ ಜನರನ್ನು ಉದ್ಧೇಶಿಸಿ ಮಾತನಾಡುತ್ತಾ, ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ‌ ನಡೆಸಿದರು. ಒಂದು ಬಾರಿ ಮನೆ ಮಗನ ಮೇಲೆ ನಂಬಿಕೆಯಿಡಿ. 2023ರಲ್ಲಿ ಕನ್ನಡಿಗರ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಪಂಚರತ್ನ‌ ಯೋಜನೆ ಜಾರಿ ಮಾಡುತ್ತೇವೆ ಎಂಬ ಭರವಸೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 6 =
Remember me
