ಹುಬ್ಬಳ್ಳಿ:ರಾಜ್ಯ ರಾಜಕಾರಣದಲ್ಲಿ ತೀವ್ರ ಗದ್ದಲ ಎಬ್ಬಿಸಿರುವ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಪೆನ್​​​​ಡ್ರೈವ್ ಹಂಚಿದ ಮಹಾನ್ ನಾಯಕ ಯಾರು ಎಂಬುದು ಬಹಿರಂಗವಾಗಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್​ಡಿಕೆ ಸತ್ಯಾಸತ್ಯತೆ ಹೊರಬರುವುದು ಒಂದು ಭಾಗವಾದರೆ, ಯಾವ ಕಾರಣಕ್ಕಾಗಿ ಪೆನ್ ಡ್ರೈವ್ ಸರಕ್ಯೂಲೇಟ್ ಮಾಡಿದರೂ ಎಂಬುದು ರಾಜ್ಯದ ಜನತೆಗೆ ತಿಳಿಯಬೇಕಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ನೇಹಾ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತೈಸಿದ ಬಿಜೆಪಿ ನಾಯಕರು; ಬಳಿಕ ಹೇಳಿದ್ದಿಷ್ಟು
ಘಟನೆಗೆ ಸಂಬಂಧಿಸಿದಂತೆ ಪ್ರಜ್ವಲ್​ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ನಾವು ಯಾವುದೇ ಕಾರಣಕ್ಕೂ ಪಲಾಯನ ಮಾಡುವುದಿಲ್ಲ. ಕರಣದ ತನಿಖೆ ನಡೆಸುವುದರ ಜತೆಗೆ ಅಶ್ಲೀಲ ವಿಡಿಯೋಗಳನ್ನು ಪೆನ್​​ಡ್ರೈವ್ ಹಂಚಿದ ಮಹಾನ್ ನಾಯಕ ಯಾರು ಎಂಬುದರ ಬಗ್ಗೆಯೂ ತನಿಖೆ ಆಗಬೇಕಿದೆ.
ಈ ಪ್ರಕರಣದಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ಆರೋಪಿ ಸ್ಥಾನದಲ್ಲಿ ಇದ್ದಾರೆ. ಇದರಲ್ಲಿ ಸತ್ಯಾಸತ್ಯತೆ ಹೊರಬರುವುದು ಒಂದು ಭಾಗವಾದರೆ, ಯಾವ ಕಾರಣಕ್ಕಾಗಿ ಪೆನ್​ಡ್ರೈವ್​ ಸರ್ಕ್ಯೂಲೇಟ್​ ಮಾಡಲಾಗುತ್ತಿದೆ ಎಂಬುದರ ಬಗ್ಗೆ ತಿಳಿಯಬೇಕಿದೆ. ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಕಾರ್ಯಕರ್ತರ ಮೂಲಕ ಪೆನ್​ಡ್ರೈವ್​ ಹಂಚಿ ನೂರಾರು ಮಹಿಳೆಯರ ಮಾನವನ್ನು ಬೀದಿಗೆ ತಂದಿದ್ದಾರೆ. ಮಹಿಳೆಯರ ಮಾನ ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ ಅಲ್ಲವೇ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 9 =
Remember me
