ಬೆಂಗಳೂರು:ಜನಾದೇಶವನ್ನು ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿಗಳು, ರಾಜ್ಯದ ಜನತೆ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ ಎಂದಿದ್ದಾರೆ.
ಇದೇ ವೇಳೆ ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಮಾಜಿ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಎಚ್.ಡಿ.ದೇವೇಗೌಡರು, ಎಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಧೈರ್ಯ ತುಂಬಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್​​ಗೆ ಹೀನಾಯ ಸೋಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + twelve =
Remember me
