ನೋಯ್ಡಾ:18ನೇ ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರು ಮಂಡ್ಯದಿಂದ ಸ್ಪರ್ಧಿಸಿ ಭರ್ಜರಿ ಜಯ ಗಳಿಸಿ ಕೇಂದ್ರ ಸಚಿವರಾಗಿ ಆಯ್ಕೆಯಾಗಿದ್ದಾರೆ.  ಚನ್ನಪಟ್ಟಣ್ಣ ಕ್ಷೇತ್ರದ ಶಾಸಕರಾಗಿದ್ದ ಅವರು ಇದೀಗ ಸಂಸದರಾಗಿ ಆಯ್ಕೆಯಾಗಿದ್ದು, ಎಂಎಲ್​ಎ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇತ್ತ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಚನ್ನಪಟ್ಟಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲುಂಡ ಡಿ.ಕೆ. ಸುರೇಶ್​ ಚನ್ನಪಟ್ಟಣ್ಣದ ಕಾಂಗ್ರೆಸ್​ ಅಭ್ಯರ್ಥಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಈ ನಡುವೆ ಕಾಂಗ್ರೆಸ್​ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಸಲಿದೆ ಎಂದು ಹೇಳಲಾಗುತ್ತಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್​ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಇದಕ್ಕೆ ಪೂರಕವೆಂಬಂತೆ ಡಿ.ಕೆ. ಶಿವಕುಮಾರ್​ ಚನ್ನಪಟ್ಟಣದ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.
ಇದನ್ನೂ ಓದಿ:ವಿರಾಟ್​ ತಂಡಕ್ಕಿಂತ ತನ್ನ ಸ್ವಾರ್ಥಕ್ಕಾಗಿ ಕ್ರಿಕೆಟ್​ ಆಡುತ್ತಾರೆ; ಕೊಹ್ಲಿ ಕುರಿತು ಮತ್ತೊಮ್ಮೆ ನಾಲಿಗೆ ಹರಿಬಿಟ್ಟ ಪಾಕ್​ ಮಾಜಿ ಆಟಗಾರ
ಇನ್ನೂ ಚನ್ನಪಟ್ಟಣದಲ್ಲಿ ಡಿ.ಕೆ. ಶಿವಕುಮಾರ್​ ಸ್ಪರ್ಧೆ ಕುರಿತು ಮಾತನಾಡಿದ ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ, ಡಿಸಿಎಂ ಒಂದೂವರೆ ವರ್ಷದಿಂದ ಚನ್ನಪಟ್ಟಣಕ್ಕೆ ಹೋಗಿರಲಿಲ್ಲ. ಈಗ ಚನ್ನಪಟ್ಟಣದ ಬಗ್ಗೆ ಮಮತೆ ಬಂದಿದೆ. ಇಲ್ಲಿಯವರೆಗೆ ಚನ್ನಪಟ್ಟಣ ಅಭಿವೃದ್ಧಿ ಮಾಡಬೇಡಿ ಎಂದು ಡಿಕೆ ಶಿವಕುಮಾರ್​ರನ್ನು ತಡೆದಿದ್ದು ಯಾರು ಸಂಸದರಾಗಿ ಡಿಕೆ ಸುರೇಶ್​ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಅಭ್ಯರ್ಥಿ ಆಗಬಹುದು. ನಮ್ಮ ಕಡೆಯಿಂದ ಅಭ್ಯರ್ಥಿ ಯಾರು ಎಂದು ಕಾಲ ನಿರ್ಧರಿಸುತ್ತದೆ.
ಲೋಕಸಭಾ ಚುನಾವಣೆಯಲ್ಲಿ ಕರ್ನಾಟದಲ್ಲಿ ಕಾಂಗ್ರೆಸ್ ಕಡಿಮೆ ಸೀಟು ಬರಲು ಇವಿಎಂ ಕಾರಣ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಎಚ್​ಡಿಕೆ ಕರ್ನಾಟಕದ ಲೋಕಸಭಾ ಫಲಿತಾಂಶಕ್ಕೆ ಇವಿಎಂ ಕಾರಣವಾದರೆ, 2023 ರ ವಿಧಾನಸಭೆ ವಿಧಾನ ಸಭೆಯಲ್ಲಿ ಕಾಂಗ್ರೆಸ್ 136 ಕ್ಷೇತ್ರಗೆದ್ದಿತ್ತಲ್ಲ, ಆಗ ಇವಿಎಂ ದೋಷವಿತ್ತಾ ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್​ ನಾಯಕರಿಗೆ ತಿರುಗೇಟು ನೀಡಿದ್ದಾರೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 9 =
Remember me
