ರಾಮನಗರ:ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ ವಿಚಾರಕ್ಕೆ ಕರೆಂಟ್​ ಕಳ್ಳತನ ಮಾಡಿದ್ದಾರೆ ಎಂದು ಟೀಕಿಸಿದ ಕಾಂಗ್ರೆಸ್​ ವಿರುದ್ಧ ಇದೀಗ ಮಾಜಿ ಸಿಎಂ, ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಡಿ. ಕುಮಾರಸ್ವಾಮಿ ನೇರ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ದೀಪಾವಳಿ ಸಂಭ್ರಮ: ದೆಹಲಿಯಲ್ಲಿ ದಾಖಲೆಯ 121 ಕೋಟಿ ರೂ.ಮದ್ಯ ಮಾರಾಟ!
ಈ ಕುರಿತಂತೆ ಪ್ರತಿಕ್ರಿಯಿಸಿದ ಎಚ್​ಡಿಕೆ, “ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ಸೋಮವಾರ (ನ.13) ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್​ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ” ಎಂದರು.
ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)November 14, 2023

“ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕಾಂಗ್ರೆಸ್​ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕವಿದೆ. ಎಂದರು.
ಇದನ್ನೂ ಓದಿ:ಮಾತು ಕೇಳದ್ದಕ್ಕೆ ಬಾಲಕನನ್ನು ಸರಪಳಿಯಿಂದ ಕಟ್ಟಿ ಅಮಾನುಷವಾಗಿ ಥಳಿಸಿದ ಮದರಸ ಶಿಕ್ಷಕ
“ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ” ಎಂದು ಟ್ವೀಟ್​ ಕೂಡ ಮಾಡಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 11 =
Remember me
