ಬೆಂಗಳೂರು:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ಜೆಡಿಎಸ್​ ನಾಯಕ ಎಚ್​.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದಿದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಈ ಆಹಾರ ಪದಾರ್ಥಗಳನ್ನು ತಪ್ಪದೇ ಸೇವಿಸಿ ನಿದ್ರೆಗೆ ಭಂಗ ತರುವ ಗೊರಕೆಗೆ ಗುಡ್​ಬೈ ಹೇಳಿ!
ಘಟನೆ ಕುರಿತಂತೆ ಟ್ವೀಟ್​ ಮಾಡಿದ ಅವರು, “ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತ ಸಾವು ಕಂಡಿರುವ ಘಟನೆಯ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ. ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ” ಎಂದು ಹೇಳಿದರು.
ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತ ಸಾವು ಕಂಡಿರುವ ಘಟನೆಯ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ.
ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ.…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)October 8, 2023

“ಜೀವ ಕಳೆದುಕೊಂಡ ಎಲ್ಲಾ ನತದೃಷ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದಿದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ” ಎಂದರು.
ಇದನ್ನೂ ಓದಿ:ಇಸ್ರೇಲ್​-ಹಮಾಸ್​ ಸಂಘರ್ಷ: ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿದ ಬಾಲಿವುಡ್​ ನಟಿ, ಸಿಗದ ಸಂಪರ್ಕ ಹೆಚ್ಚಿದ ಆತಂಕ
“ಈ ಬಗ್ಗೆ ರಾಜ್ಯ ಸರಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು. ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರಕಾರ ಆಸರೆಯಾಗಿ ನಿಲ್ಲಬೇಕು” ಎಂದು ಟ್ವೀಟ್​ ಮುಖೇನ ಹೇಳಿದ್ದಾರೆ.
ನಿಖಿಲ್​ ಕುಮಾರಸ್ವಾಮಿ ಹೊಸ ಚಿತ್ರದ ಶೂಟಿಂಗ್​ ಸೆಟ್​ಗೆ ‘ಯುವ’ ಎಂಟ್ರಿ; ಸರ್ಪ್ರೈಸ್ ಭೇಟಿಗೆ ಕಾರಣ ಹೀಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
