ಬೆಂಗಳೂರು:ತಮ್ಮ ಪಕ್ಷದ ನಾಯಕರು, ಕಾರ್ಯಕರ್ತರೊಡನೆ ಸಭೆ ನಡೆಸಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಸರ್ಕಾರ ರಚನೆಯಾಗಿ 50 ದಿನ ಕಳೆದಿದೆ. ಪಕ್ಷವನ್ನು ಹೇಗೆ ಸಂಘಟನೆ ಮಾಡಬೇಕು, ಸರಕಾರದ ವಿರುದ್ಧ ಹೋರಾಟಗಳನ್ನು ಯಾವ ರೀತಿ ಹಮ್ಮಿಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ:ಸ್ಯಾಂಡಲ್​​ವುಡ್​​ನ ಖ್ಯಾತ ನಿರ್ಮಾಪಕ ಕೆ.ಸಿ.ಎನ್ ಮೋಹನ್​ ನಿಧನ
“ನಮ್ಮಲ್ಲಿ ಕಡಿಮೆ ಶಾಸಕರು ಇದ್ದಾರೆ ಎಂದು ನಾವು ಎದೆಗುಂದುವುದಿಲ್ಲ. ಸದನದ ಒಳಗೆ, ಹೊರಗೆ ಹೋರಾಟ ನಡೆಸುತ್ತೇವೆ. ಯಾವ ವಿಷಯಗಳನ್ನು ಕೈಗೆತ್ತಿಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ಮಾಡುತ್ತೇವೆ. ಗ್ಯಾರಂಟಿ ಬಗ್ಗೆ ನಾನು ಸದನದಲ್ಲಿ ಚರ್ಚೆ ಮಾಡಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷವಾಗಿದೆ. ಜನರನ್ನು ಇನ್ನೂ ಎಷ್ಟು ವರ್ಷ ಕೈ ಚಾಚುವಂತೆ ಮಾಡುತ್ತೀರಾ? ಎಂದು ಪ್ರಶ್ನಿಸುತ್ತೇವೆ” ಎಂದು ಹೇಳಿದರು.
ಈ ವೇಳೆ ಎಚ್.ಡಿ. ಕುಮಾರಸ್ವಾಮಿ ಅವರೊಟ್ಟಿಗೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಶಾಸಕಿ ಕರೆಮ್ಮ ನಾಯಕ ಮುಂತಾದವರು ಉಪಸ್ಥಿತರಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fourteen =
Remember me
