ಬೆಂಗಳೂರು:ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವ ವಿಚಾರ ಕುರಿತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿರುವ ಮಾಜಿ ಸಿಎಂ, ಜೆಡಿಎಸ್​ ನಾಯಕ ಎಚ್​.ಡಿ. ಕುಮಾರಸ್ವಾಮಿ, ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ರಣಬೀರ್- ರಶ್ಮಿಕಾ ಮಂದಣ್ಣ ಲಿಪ್‌ಲಾಕ್; ವಿಡಿಯೋ ವೈರಲ್​​​..! ವಿಜಯ್​​​ ಕಾಲೆಳೆದ ನೆಟ್ಟಿಗರು
ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿಯಾಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ನಮ್ಮದು ಎಂದು ಹೇಳಿದರು.
ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದ ರೈತರ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ.
ಇದನ್ನೂ ಓದಿ:ಎನ್‌ಇಪಿ ಹಿಂಪಡೆದರೆ ವಿದ್ಯಾರ್ಥಿಗಳಿಗೆ ಮಾರಕ -ಮಾಜಿ ಎಂಎಲ್‌ಸಿ ಕ್ಯಾ.ಗಣೇಶ್ ಕಾರ್ಣಿಕ್
ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು. ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ. ಈ ಆದೇಶವನ್ನು ದಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ. ಜನರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು, ಜನರ ಜತೆ ನಾವಿದ್ದೇವೆ, ನಮ್ಮ ಪಕ್ಷವೂ ಇದೆ.
ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)October 11, 2023

ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ. ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ರಾಜ್ಯ ಕಾಂಗ್ರೆಸ್​ ಸರಕಾರವಿದೆ ಎಂದು ಹೇಳಿದ್ದಾರೆ.
ಅಮಿತಾಬ್ ಬಚ್ಚನ್ 81ನೇ ಜನ್ಮದಿನ: ಹೊಸ ಅಪ್ಡೇಟ್​ ಕೊಟ್ಟ​ ‘ಕಲ್ಕಿ 2898 AD’ ಚಿತ್ರತಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
