ಬೆಂಗಳೂರು:ಸೆ. 13ರಿಂದ ನಿತ್ಯವೂ 5,000 ಕ್ಯೂಸೆಕ್ ನೀರು ಬಿಡಬೇಕು ಎಂದು ಪ್ರಾಧಿಕಾರ ಆದೇಶ ನೀಡಿದೆ. ಅದನ್ನೇ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಆದ್ರೆ, ಕೋರ್ಟ್ ಆದೇಶಕ್ಕೂ ಮೊದಲು ಪ್ರಾಧಿಕಾರ ಹೇಳಿತು ಎಂದು ವಿದ್ಯುತ್ ವೇಗದಲ್ಲಿ ನೀರು ಬಿಟ್ಟ ಸರಕಾರವು ಈಗ ಸುಪ್ರೀಂಕೋರ್ಟ್ ಹೇಳಿದೆ, ಇನ್ನೇನು ಮಾಡುವುದು ಎಂದು ಕೈ ಚೆಲ್ಲಿದೆ. ಮರು ಪರಿಶೀಲನಾ ಅರ್ಜಿಯನ್ನು ಕೋರ್ಟಿಗೆ ತುರ್ತಾಗಿ ಸಲ್ಲಿಸಬೇಕು ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ:ಸುಪ್ರೀಂ ಕೋರ್ಟ್ ವಾಸ್ತವದ ಆಧಾರದಲ್ಲಿ ಆದೇಶ ಮಾಡಬೇಕು: ಬಸವರಾಜ ಬೊಮ್ಮಾಯಿ
ಪ್ರಾಧಿಕಾರ ಆದೇಶ ಕೊಟ್ಟಷ್ಟು ನೀರನ್ನು ಬಿಡುವಂತೆ ಕಾನೂನು ತಜ್ಞರು ಸಲಹೆ ಮಾಡಿದ್ದರು. ಅಲ್ಲಿಗೆ ಸುಪ್ರೀಂನಲ್ಲಿ ನ್ಯಾಯ ಸಿಗಲಾರದು ಎಂದು ಅವರು ಮೊದಲೇ ಕೈ ಚಲ್ಲಿದಂತೆ ಕಾಣುತ್ತದೆ. ಕೋರ್ಟ್ ಆದೇಶ ಬರುವ ತನಕ ನೀರು ಬಿಡಲು ಸಾಧ್ಯವಿಲ್ಲ ಎಂದು ಸರಕಾರವು ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರಕ್ಕೆ ನೇರವಾಗಿ ಹೇಳಬೇಕಿತ್ತು. ಆದ್ರೆ, ಹಾಗೆ ಹೇಳಲಿಲ್ಲ. ಇದರ ಪರಿಣಾಮ ಈವರೆಗೆ ನಾವು ಸಾಕಷ್ಟು ನೀರು ಹರಿಸಬೇಕಾಯಿತು. ಮುಂದೆಯೂ ಹರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಿದರು.
ಸರಕಾರ ವಕೀಲರು ಹೇಳಿದಂತೆ ಕೇಳಿ ಜನರ ಹಿತ ಕಡೆಗಣಿಸಿದೆ. ಯಾವ ಕಾರಣಕ್ಕೂ ನೀರು ಬಿಡಬಾರದಿತ್ತು. ಕೋರ್ಟ್ ಆದೇಶಕ್ಕೆ ಕಾದು ಕ್ರಮ ಜರುಗಿಸಬೇಕಿತ್ತು. ಊರು ಕೊಳ್ಳೆ ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎನ್ನುವಂತೆ ವರ್ತಿಸಿದೆ ಸರಕಾರ. ವಕೀಲರ ಮಾತುಗಳನ್ನು ಕೇಳಿಕೊಂಡು ನೀರು ಬಿಡುತ್ತಾ ಹೋದರೆ, ಅದಕ್ಕೆ ಕೊನೆ ಮೊದಲು ಇರುವುದಿಲ್ಲ. ಹಾಗಾದ್ರೆ ಸರಕಾರ ಅನ್ನೊದು ಯಾಕೆ? ವಿಷಯ ಎಲ್ಲಿ ಶುರುವಾಯಿತೋ ಮತ್ತೆ ಅಲ್ಲಿಗೆ ಬಂದು ನಿಂತಿರುವುದಕ್ಕೆ ಯಾರು ಹೊಣೆ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ವಿದ್ಯಾಥಿರ್ಗಳು ಸದೃಢ ಆರೋಗ್ಯ ಹೊಂದಬೇಕು: ವೀಣಾ ತಿರ್ಲಾಪೂರ
ಸರಕಾರ ಅನುಸರಿಸಿದ ವಿಳಂಬ ರಾಜಕಾರಣ, ರಾಜ್ಯದ ಹಿತಕ್ಕೆ ಪೆಟ್ಟು ನೀಡಿದೆ. ತಮಿಳುನಾಡು ಸುಪ್ರೀಂಕೋರ್ಟ್​ಗೆ ಹೋದ ಕೂಡಲೇ ರಾಜ್ಯವೂ ಮೊರೆ ಹೋಗಬೇಕಿತ್ತು. ಮೀನಾಮೇಷ ಎಣಿಸುತ್ತಾ ತಡ ಮಾಡಿತು. ತಡ ಮಾಡಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ವಿನಾಕಾರಣ ಕನ್ನಡಿಗರಿಗೆ ಶಿಕ್ಷೆಯಾಗಿದೆ. ಪ್ರಾಧಿಕಾರದ ಆದೇಶ ಬಂದೊಡನೆ ಮಧ್ಯರಾತ್ರಿಯೇ ಸುಪ್ರೀಂಕೋರ್ಟ್​ಗೆ ಹೋಗಿ, ನಮ್ಮ ಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು ಎಂದು ಹೇಳಿದರು.
ರಾತ್ರೋರಾತ್ರಿ ಪಿಟಿಷನ್ ಹಾಕಬೇಕಿತ್ತು. ಅದನ್ನು ಮಾಡದೇ ನೀರು ಬಿಡುತ್ತಾ ಕೂತಿತು ಸರಕಾರ. ನೀರು ಇಲ್ಲ ಎನ್ನುತ್ತಿದ್ದವರೂ ಈವರೆಗೆ ಹೇಗೆ ಬಿಟ್ಟಿರಿ ಎಂದು ಕೋರ್ಟ್ ಪ್ರಶ್ನೆ ಮಾಡುತ್ತದೆ ಎನ್ನುವ ಸಾಮಾನ್ಯ ಜ್ಞಾನವೂ ಸರಕಾರಕ್ಕೆ ಇರಲಿಲ್ಲ. ಕೆಆರ್​ಎಸ್​ನಲ್ಲಿ ಈಗ ಇರುವುದೇ 20 ಟಿಎಂಸಿಗೂ ಕಡಿಮೆ ನೀರು. 3 ದಿನಕ್ಕೆ ಒಂದು ಟಿಎಂಸಿ ಹರಿದು ಹೋಗುತ್ತದೆ. ದಿನಕ್ಕೆ 5,000 ಕ್ಯೂಸೆಕ್ ಹರಿದರೆ 15 ದಿನಕ್ಕೆ 7 ಟಿಎಂಸಿ ಖಾಲಿ. ಆಗ ಉಳಿಯುವುದು 13 ಟಿಎಂಸಿ ಮಾತ್ರ. ಇದರಲ್ಲಿ ಡೆಡ್ ಸ್ಟೋರೇಜ್ 7 ಟಿಎಂಸಿ ಇರಬೇಕು. ಇನ್ನು ಉಳಿಯೋದು ಎಷ್ಟು? ಎಂದು ಕೇಳಿದ್ದಾರೆ.
ಇದನ್ನೂ ಓದಿ:ಚಿತ್ರೀಕರಣದ ದೃಶ್ಯಗಳು ಸೋರಿಕೆ!; ಪಬ್ಲಿಕ್​ಗೆ ಎಚ್ಚರಿಸಿದ ‘ಕಲ್ಕಿ 2898 AD’ ಚಿತ್ರತಂಡ
ಬೆಂಗಳೂರಿಗೆ ಇನ್ನೂ 9 ತಿಂಗಳಿಗೆ ಕುಡಿಯಲಿಕ್ಕೆ ಕನಿಷ್ಠ 13 ಟಿಎಂಸಿ ಬೇಕು. ಎಲ್ಲಿಂದ ಬರುತ್ತೆ ಆ ನೀರು? ಆದೇಶ ಪಾಲಿಸಲು ಕರ್ನಾಟಕ, ಅನುಭವಿಸಲು ತಮಿಳುನಾಡು ಎನ್ನುವ ಮಾತು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆಲ್ಲ ಕಾಂಗ್ರೆಸ್​ ಸರ್ಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ಎಚ್​ಡಿಕೆ ವಾಗ್ದಾಳಿ ನಡೆಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶ ನಿಜಕ್ಕೂ ದುರದೃಷ್ಟಕರ; ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲ: ಎಚ್​ಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
