ಬೆಂಗಳೂರು:ರಾಜ್ಯ ಸರ್ಕಾರದ ವಿರುದ್ಧ ಸರಣಿ ಟ್ವೀಟ್​ ಮುಖೇನ ಆರೋಪ ಎಸಗಿರುವ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ಕಾಂಗ್ರೆಸ್​ ಸರ್ಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ರಿಷಿಕೇಶದಲ್ಲಿ ಗಂಗೆಯ ಉಗ್ರ ರೂಪ… ಮುಚ್ಚಿದ ರಾಮ್ ಝುಲಾ ಸೇತುವೆ, ಇದರ ಇತಿಹಾಸ, ಮಹತ್ವವೇನು?
“ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ, ಕನ್ನಡಿಗರ ತಲೆ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ ‘I.N.D.I.A’ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. ಅಂದುಕೊಂಡಿದ್ದೇ ಆಗಿದ್ದು, ನಮ್ಮ ಭಯ ನಿಜವಾಗಿದೆ. ಕಾಂಗ್ರೆಸ್​ಸರಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ” ಎಂದು ಹೇಳಿದರು.
ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ, ಕನ್ನಡಿಗರ ತಲೆ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. ಅಂದುಕೊಂಡಿದ್ದೇ ಆಗಿದ್ದು,ನಮ್ಮ ಭಯ ನಿಜವಾಗಿದೆ.@INCKarnatakaಸರಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ.1/9#ಕಾವೇರಿ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)August 17, 2023

“ಮಳೆ ಅಭಾವದಿಂದ ಜಲಾಶಯಗಳು ತುಂಬಿಲ್ಲ. ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ. ನಮ್ಮ ಹೊಟ್ಟೆಗೇ ಹಿಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟಿದೆ ಸರಕಾರ. ಕನ್ನಡಿಗರಿಗೆ ವಂಚಿಸಿ ರಾಜಾರೋಷವಾಗಿ ನೀರು ಹರಿಸುವ ಮೂಲಕ ತಮಿಳುನಾಡು ಜತೆ ರಾಜಕೀಯ ಚೌಕಾಬಾರ ಆಡುತ್ತಿದೆ! ಇದೇನು ಇನ್ನೊಂದು ಗ್ಯಾರಂಟಿನಾ?” ಎಂದು ಟ್ವೀಟ್​ನಲ್ಲಿ ಹೇಳಿದರು.
ಇದನ್ನೂ ಓದಿ:ಈ ದಿನದಂದು ರಿ-ರಿಲೀಸ್​ ಆಗಲಿವೆ ತಲೈವಾ ನಟನೆಯ 2 ಬ್ಲಾಕ್​​ಬಸ್ಟರ್​ ಚಿತ್ರಗಳು!
“2024ರ ಲೋಕಸಭೆ ಗೆಲುವಿಗೆ ಕಾವೇರಿ ಹಿತವನ್ನು ನೆರೆರಾಜ್ಯಕ್ಕೆ ಅಡವಿಟ್ಟಿದೆ ಹಸ್ತಪಕ್ಷ ಸರಕಾರ! ತಮಿಳುನಾಡಿಗೆ ಬೆದರಿ ಶರಣಾಗಿದೆ. ಕಾವೇರಿ ಜಲನಿರ್ವಹಣಾ ಪ್ರಾಧಿಕಾರದ ಸಭೆಯಿಂದಲೇ ಹೊರನಡೆದ, ರಾಜ್ಯದ ವಿರುದ್ಧ ಸುಪ್ರೀಂಕೋರ್ಟ್ಗೆ ಅರ್ಜಿ ಹಾಕಿದ ರಾಜ್ಯದೆದುರು ದೈನೇಸಿಯಾಗಿ ಮಂಡಿಯೂರಿದ್ದು, ಕನ್ನಡಿಗರ ಸ್ವಾಭಿಮಾನಕ್ಕೆ ಕೊಟ್ಟ ಕೊಡಲಿಪೆಟ್ಟು” ಎಂದು ಹೇಳಿದರು.
ಮಳೆ ಅಭಾವದಿಂದ ಜಲಾಶಯಗಳು ತುಂಬಿಲ್ಲ. ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ. ನಮ್ಮ ಹೊಟ್ಟೆಗೇ ಹಿಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟಿದೆ ಸರಕಾರ. ಕನ್ನಡಿಗರಿಗೆ ವಂಚಿಸಿ ರಾಜಾರೋಷವಾಗಿ ನೀರು ಹರಿಸುವ ಮೂಲಕ ತಮಿಳುನಾಡು ಜತೆ ರಾಜಕೀಯ ಚೌಕಾಬಾರ ಆಡುತ್ತಿದೆ! ಇದೇನು ಇನ್ನೊಂದು ಗ್ಯಾರಂಟಿನಾ?2/9
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)August 17, 2023

“1962 ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಮಾಜಿ ಪ್ರದಾನಿ ಎಚ್​.ಡಿ. ದೇವೇಗೌಡರು ಅವರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸೆಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂಕೋರ್ಟ್​​ಗೆ ಅರ್ಜಿ ಹಾಕಿದ ಕ್ಷಣ ಬೆದರಿ ಕೈ ಚೆಲ್ಲಿದೆ. ಸಂಕಷ್ಟ ಸ್ಥಿತಿಯ ಬಗ್ಗೆ ಕಾಂಗ್ರೆಸ್​ ಸರಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಿಲ್ಲ, ಯಾಕೆ? ಕಾನೂನು ತಜ್ಞರ ಜತೆ, ಪ್ರತಿಪಕ್ಷ ಮುಖಂಡರ ಜತೆ ಸಮಾಲೋಚನೆ ನಡೆಸದೇ ವಾಯುವೇಗದಲ್ಲಿ ತಮಿಳುನಾಡಿಗೆ ನೀರು ಹರಿಸಿದ ಒಳಗುಟ್ಟೇನು? ಜನತೆಗೆ ಗೊತ್ತಾಗಬೇಕಿದೆ” ಎಂದು ಟ್ವೀಟ್​ ಮುಖೇನ ಪ್ರಶ್ನಿಸಿದ್ದಾರೆ.
ಹೆಲ್ಮೆಟ್​ ಕಳ್ಳತನವಾಗಿದೆ ಹುಡುಕಿಕೊಡಿ ಎಂದು ಪೊಲೀಸ್​ ಠಾಣೆ ಮೆಟ್ಟಿಲೇರಿದ ವ್ಯಕ್ತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 19 =
Remember me
