ಬೆಂಗಳೂರು:ಕಾಂಗ್ರೆಸ್ ಸರ್ಕಾರದಲ್ಲಿ ಈಗಾಗಲೇ ಆಡಳಿತ ಹಳಿತಪ್ಪಿದೆ. ಒಂದು ಸರಕಾರ, ಹತ್ತಾರು ಮುಖ್ಯಮಂತ್ರಿಗಳು ಎಂದು ಹೇಳುವಂತ ಪರಿಸ್ಥಿತಿ ಸೃಷ್ಟಿಯಾಗಿದೆ. ಸಿದ್ದರಾಮಯ್ಯ (Siddaramaiah) ಅವರು ಒಬ್ಬರೇ ಮುಖ್ಯಮಂತ್ರಿ ಅಲ್ಲ. ಇಲಾಖೆಗೆ ಒಬ್ಬ ಸಿಎಂ ಇದ್ದಾರೆ. ಒಬ್ಬೊಬ್ಬರು ಕೂಡ ಸಿಎಂ ರೀತಿಯಲ್ಲೇ ಹೇಳಿಕೆ ನೀಡುತ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ (HD Kumarswamy) ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಮಹಾರಾಷ್ಟ್ರ ರಾಜಕೀಯ; ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ
“ಇಲ್ಲಿ ಸಿದ್ದರಾಮಯ್ಯ ಒಂದು ಹೇಳುತ್ತಾರೆ, ಸತೀಶ್ ಜಾರಕಿಹೊಳಿ ಇನ್ನೊಂದು ಹೇಳುತ್ತಾರೆ. ಹಾಗಾದರೆ, ಇಲ್ಲಿ ಎಷ್ಟು ಜನ ಮುಖ್ಯಮಂತ್ರಿಗಳು ಇದ್ದಾರೆ? ಇದನ್ನು ಸರ್ಕಾರ ಅಂತ ಕರೆಯಬೇಕಾ? ಇಲ್ಲೇನಾದರೂ ಪಾರದರ್ಶಕತೆ ಅನ್ನೋದು ಇದೆಯಾ?” ಎಂದು ಹೇಳಿದರು.
“ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ (BJP) ವಿರೋಧ ಪಕ್ಷಗಳ ಸಭೆಗೆ ನಮ್ಮ ಪಕ್ಷಕ್ಕೆ ಆಹ್ವಾನ ಕೊಟ್ಟಿಲ್ಲ, ನಮ್ಮನ್ನು ಯಾರೂ ಕರೆದಿಲ್ಲ. ಹಾಗಾಗಿ ಆ ಸಭೆಗೆ ನಾವು ಹೋಗುವುದಿಲ್ಲ. ನಮ್ಮದು ಸಣ್ಣ ಪಕ್ಷ, ಅದನ್ನು ಬೆಳೆಸುತ್ತೇವೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಅದಕ್ಕಾಗಿ ಸರಣಿ ಸಭೆಗಳನ್ನು ಹಮ್ಮಿಕೊಂಡಿದ್ದೇವೆ” ಎಂದು ಹೇಳಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
