ಬೆಂಗಳೂರು:ಸರಣಿ ಟ್ವೀಟ್​ ಮುಖೇನ ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಡಿ. ಕುಮಾರಸ್ವಾಮಿ, “ಅಬ್ಬಬ್ಬಾ..ಬಾಯಿ ತೆರೆದರೆ ಭಗವದ್ಗೀತೆ, ನಾಲಿಗೆ ಮೇಲೆ ನೈತಿಕತೆಯ ನಾಟ್ಯ, ಮಾತು ಮಾತಿನಲ್ಲೂ ಮೌಲ್ಯಗಳದ್ದೇ ಮಥನ! ಕೊನೆಗೆ, ಝಣ ಝಣ ಕಾಂಚಾಣ. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ. ನಾಚಿಕೆಯಾಗಬೇಕು” ಎಂದರು.
ಇದನ್ನೂ ಓದಿ:ನಿದ್ದೆ ಮಂಪರಿನಲ್ಲಿ ವಾಹನ ಚಾಲನೆ; ಮದುವೆ ಮುಗಿಸಿ ವಾಪಸ್​ ಆಗುತ್ತಿದ್ದವರು ಸೇರಿದ್ದು ಮಸಣಕ್ಕೆ
“ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ?ಓಹ್, ಒಂದು ಸರಕಾರ, ವಿಸ್ಮಯಗಳ ಆಗರ. ಡೂಪ್ಲಿಕೇಟ್‌ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ ಸಿಎಸ್​ಆರ್​ ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ” ಎಂದು ಹೇಳಿದರು.
“ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? ‘ಬರ್ಮುಡಾ ಟ್ರ್ಯಾಂಗಲ್’ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು. ಅದು ನಿಮ್ಮ ದುರ್ವಿಧಿ. ಆನ್ಸರ್‌ ಮಾಡಿ ಸಿದ್ದರಾಮಯ್ಯನವರೇ?” ಎಂದು ಪ್ರಶ್ನಿಸಿದರು.
ಇದನ್ನೂ ಓದಿ:success story; ಒಂದು ಕಾಲದಲ್ಲಿ ವಾಚ್‌ಮ್ಯಾನ್ ಈಗ ಖ್ಯಾತ ಬಾಲಿವುಡ್ ನಟ
“ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ 71 ಪೊಲೀಸ್‌ ಇನಸ್ಪೆಕ್ಟರ್‌ಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ ‘ಸುಲಿಗೆಪುತ್ರ’ನ ಕೆಚ್ಚು. ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ?” ಎಂದರು.
“ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್‌’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ. 6 ತಿಂಗಳ ಭರ್ಜರಿ ಅತೀಂದ್ರೀಯ ಅಟ್ಟಹಾಸ. ‘ಕಾಸಿಗಾಗಿ ಹುದ್ದೆ ಮತ್ತು ಕಾಂಗ್ರೆಸ್‌ ಹುಂಡಿ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್‌ ಸಿಎಂ-DCM ನಿರ್ದೇಶಕ.. ಹೇಗಿದೆ?” ಎಂದು ಲೇವಡಿ ಮಾಡಿದರು.
ಇದನ್ನೂ ಓದಿ:ನೂರಾರು ಉದ್ಯೋಗಿಗಳನ್ನು ವಜಾ ಮಾಡಲು ಹೊರಟ ಅಮೆಜಾನ್; ಇದರ ಎಫೆಕ್ಟ್ ಭಾರತದ ಮೇಲೂ ಬೀರುತ್ತಾ?
“ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್‌ ಅಂಡ್​ ರನ್‌ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ” ಎಂದ ಎಚ್​ಡಿಕೆ ಸರಣಿ ಟ್ವೀಟ್​ ಮಾಡಿ ಸಿಎಂ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್‌ & ರನ್‌ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ.6/6— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)November 18, 2023
ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್‌ & ರನ್‌ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ.6/6
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 + ten =
Remember me
