ಮೈಸೂರು:ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ ಎಚ್.ಡಿ. ರೇವಣ್ಣ ಮಂಗಳವಾರ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇದನ್ನೂ ಓದಿ:ಇಬ್ಬರು ಬಾಲಕಿಯರ ಮೇಲೆ ಬಾಲಕರಿಂದ ಸಾಮೂಹಿಕ ಅತ್ಯಾಚಾರ, 9 ಮಂದಿ ಪೊಲೀಸ್ ವಶಕ್ಕೆ
ಪೆನ್‌ಡ್ರೈವ್ ಪ್ರಕರಣದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಕುಟುಂಬದ ಪ್ರತಿ ಸದಸ್ಯರ ಹೆಸರಿನಲ್ಲಿ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬದ ಪ್ರತಿಯೊಬ್ಬರ ಹೆಸರು ಹಾಗೂ ನಕ್ಷತ್ರ ಹೇಳಿ ರೇವಣ್ಣ ಅರ್ಚನೆ ಮಾಡಿಸಿದರು.

ಸಂಕಷ್ಟಗಳು ಬಾರದೆ ಇರಲಿ ಎಂದು ಬಲಗೈಗೆ ರಕ್ಷಾಸೂತ್ರ ಕಣ್ಣಿಸಿಕೊಂಡರು. ಈ ಸಂದರ್ಭ ಮನಸ್ಸಿನಲ್ಲಿ ದೇವರನ್ನು ನೆನೆಯುತ್ತಾ ಪ್ರಾರ್ಥಿಸಿದರು. ನಂತರ ದೇವಾಲಯದಲ್ಲಿ 10 ನಿಮಿಷ ಏಕಾಂಗಿಯಾಗಿ ಕುಳಿತು ಕಷ್ಟಗಳನ್ನು ದೂರ ಮಾಡುವಂತೆ ತಾಯಿ ಶ್ರೀ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿದರು.
ತಾಯಿ ಶ್ರೀ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ತಾಯಿ ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದಿದ್ದೇನೆ. ದೇವರು ಹಾಗೂ ರಾಜ್ಯದ ಜನರ ಮೇಲೆ ನನಗೆ ನಂಬಿಕೆ ಇದೆ. 40 ವರ್ಷದ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಇದೇ ಪ್ರಥಮ ಬಾರಿಗೆ ಪ್ರಕರಣ ದಾಖಲಾಗಿರುವುದು. ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದ್ದು, ಪ್ರಕರಣದಲ್ಲಿ ನನಗೆ ನ್ಯಾಯ ದೊರೆಯುವ ವಿಶ್ವಾಸವಿದೆ. ತಾಯಿ ಚಾಮುಂಡೇಶ್ವರಿ ಏನು ಕರುಣೆ ತೋರಿಸುತ್ತಾಳೆ ನೋಡೋಣ ಎಂದು ಹೇಳಿದರು.
ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆ ವಿಚಾರವನ್ನು ತಾಯಿಗೆ ಬಿಟ್ಟಿದ್ದೇನೆ. ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ ಹೆಚ್ಚು ಮಾತನಾಡಲು ಬಯಸುವುದಿಲ್ಲ ಎಂದರು.
ಪ್ರಧಾನಿ ಮೋದಿ ಬಳಿ ಇರೋದು 52 ಸಾವಿರ ರೂಪಾಯಿ ನಗದು, ಬಿಡಿಗಾಸಿನ ಸ್ಥಿರಾಸ್ತಿಯೂ ಇಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + eighteen =
Remember me
