ಬೆಂಗಳೂರು:ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ನಾಳೆ (ಮೇ.07) ಎರಡನೇ ಹಂತದ ಮತದಾನ ನಡೆಯಲಿದೆ. ಇನ್ನು ಚುನಾವಣೆಯ ವಿಷಯಕ್ಕಿಂತ ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ರಾಷ್ಟ್ರಮಟ್ಟದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಒಂದೆಡೆ ವಿದೇಶಕ್ಕೆ ಹಾರಿರುವ ಪ್ರಜ್ವಲ್​ ಬೆಂಗಳೂರಿಗೆ ಹಾಜರಾಗುವತ್ತ ಎಸ್​ಐಟಿ ಅಧಿಕಾರಿಗಳು ಏರ್​ಪೋರ್ಟ್​ನಲ್ಲಿ ಕಾದು ಕುಳಿತರೆ, ಮತ್ತೊಂದೆಡೆ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್​ನಲ್ಲಿ ಮೊದಲ ಆರೋಪಿಯಾಗಿರುವ ಅವರ ತಂದೆ, ಮಾಜಿ ಸಚಿವ ಎಚ್‌.ಡಿ. ರೇವಣ್ಣರನ್ನು ಇದೀಗ ಎಸ್‌ಐಟಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ.
ಇದನ್ನೂ ಓದಿ:ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ; ಭಾರತದ ಮೊದಲ ಎದುರಾಳಿ ಯಾರು ಗೊತ್ತೇ?
ಸದ್ಯ ನ್ಯಾಯಾಧೀಶರ ನಿವಾಸದಲ್ಲಿ ಎಚ್​.ಡಿ. ರೇವಣ್ಣ ಪರ ವಕೀಲ ಮತ್ತು ಎಸ್​ಐಟಿ ಅಧಿಕಾರಿಗಳ ನಡುವಿನ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ ಅವರು, ರೇವಣ್ಣರನ್ನು ಮೇ.08ರವರೆಗೆ ಕಸ್ಟಡಿಗೆ ಒಪ್ಪಿಸಿ ಎಂದು ಆದೇಶಿಸಿದರು. ಈ ವೇಳೆ ತಮ್ಮ ಕೈಯಲ್ಲಿ ಮೂರು ನಿಂಬೆಹಣ್ಣು ಹಿಡಿದಿದ್ದ ರೇವಣ್ಣ, ಅದನ್ನು ಹಿಡಿದುಕೊಂಡೇ ವಿಚಾರಣೆಯಲ್ಲಿ ಪಾಲ್ಗೊಂಡಿದ್ದರು. ನ್ಯಾಯಾಧೀಶರ ಮನೆಗೆ ಹೋಗುವ ಮುನ್ನ ಮತ್ತು ವಿಚಾರಣೆಯ ವೇಳೆಯೂ ಅವರ ಕೈಯಲ್ಲಿ ನಿಂಬೆಹಣ್ಣು ಇರುವುದು ಕಂಡುಬಂದಿದೆ.
ವಿಚಾರಣೆಯ ವೇಳೆ ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ರೇವಣ್ಣ, ನನ್ನ ಮೇಲೆ ಬಂದಿರುವುದು ಸುಳ್ಳು ಆರೋಪ. ರಾಜಕೀಯ ಬೆಳವಣಿಗೆ ಸಹಿಸದವರು ಇಂತಹ ಪಿತೂರಿ ಮಾಡಿದ್ದಾರೆ, ನನಗೆ ನ್ಯಾಯ ದೊರಕಿಸಿ ಕೊಡಿ ಎಂದು ಮನವಿ ಮಾಡಿರುವುದು ಮೂಲಗಳಿಂದ ತಿಳಿದುಬಂದಿದೆ. ಈ ಬೆನ್ನಲ್ಲೇ ಪ್ರಜ್ವಲ್​ಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ವಿದೇಶದಿಂದ ಬೆಂಗಳೂರಿಗೆ ಬರುತ್ತಿದ್ದಂತೆ ಅವರನ್ನು ಅರೆಸ್ಟ್​ ಮಾಡಲು ಇದೀಗ ಎಸ್​ಐಟಿ ಅಧಿಕಾರಿಗಳು ಮುಂದಾಗಿದ್ದಾರೆ.
5 ರೂ. ಪಾರ್ಲೆ-ಜಿ ಬಿಸ್ಕತ್​ ಬೆಲೆ ದುಬೈ, ಪಾಕಿಸ್ತಾನ ರಾಷ್ಟ್ರಗಳಲ್ಲಿ ಎಷ್ಟಿದೆ ಗೊತ್ತಾ? ಕೇಳಿದ್ರೆ ದಂಗಾಗ್ತೀರಾ!

ಅವರ ಪ್ರೇಯಸಿಗಾಗಿ ನನ್ನ ಅವಕಾಶ ಕಿತ್ತುಕೊಂಡ್ರು! ಚಿತ್ರರಂಗದ ಕರಾಳ ಸತ್ಯ ಬಿಚ್ಚಿಟ್ಟ ನಟಿ ಪ್ರಿಯಾಂಕಾ ಚೋಪ್ರಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + one =
Remember me
