ಬೆಂಗಳೂರು:ಲೈಂಗಿಕ ಕಿರುಕುಳ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳದ (SIT) ವಶದಲ್ಲಿರುವ ಮಾಜಿ ಸಚಿವ, ಜೆಡಿಎಸ್​ ಶಾಸಕ ಎಚ್.ಡಿ. ರೇವಣ್ಣಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ವಶದಲ್ಲಿರುವ ರೇವಣ್ಣ ಅವರಿಗೆ ನ್ಯಾಯಾಲಯ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣರನ್ನು ನ್ಯಾಯಾಲಯ ಮೂರು ದಿನಗಳ ಕಾಲ ಎಸ್​ಐಟಿ ವಶಕ್ಕೆ ನೀಡಿತ್ತು. ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ ರೇವಣ್ಣರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣರನ್ನು ಅಧಿಕಾರಿಗಳು ಎಸ್​ಐಟಿ ಕಚೇರಿಯಿಂದ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಿದ್ದಾರೆ. ಕೆ.ಆರ್‌.ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರನ್ನು 7 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ  ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ಪ್ರಕಟಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 4 =
Remember me
