ಬೆಂಗಳೂರು:ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಬಜೆಟ್​ ಅಧಿವೇಶನದಲ್ಲಿ ಭಾಗಿಯಾಗಲಿರುವ ಜೆಡಿಎಸ್​ ಪಕ್ಷದ ಶಾಸಕರಿಗೆ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಲಾಗಿದೆ.
ಸಭೆಯನ್ನುದ್ದೇಶಿಸಿ ಮಾತನಾಡಿದ ಎಚ್​ಡಿಡಿ ಕಾಲವೂ ಕೂಡಿ ಬರುತ್ತದೆ, ರಾಜ್ಯದಲ್ಲಿ ಜೆಡಿಎಸ್ ಸರಕಾರವೂ ಬರುತ್ತದೆ. ಪಕ್ಷದಲ್ಲಿ ನಿಷ್ಠರಾಗಿ ಉಳಿಯುವ ಎಲ್ಲರಿಗೂ ಅಧಿಕಾರ, ಜನರ ಸೇವೆ ಮಾಡುವ ಅವಕಾಶ ಸಿಗುತ್ತದೆ ಎಂದು ಹೇಳಿದ್ದಾರೆ.
ವಿಧಾನಮಂಡಲ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ಸಮರ್ಥವಾಗಿ ಎದುರಿಸುವ ಕುರಿತು ಶಾಸಕರಿಗೆ ಟಿಪ್ಸ್​ ನೀಡಿದ ಎಚ್​ಡಿಡಿ ಪತಿಕ್ರೆಗಳನ್ನು ಗಂಭೀರವಾಗಿ ಓದುವಂತೆ, ಸುದ್ದಿ ಮಾಧ್ಯಮಗಳನ್ನು ಗಮನಿಸುವಂತೆ ಸಲಹೆ ನೀಡಿದ್ದಾರೆ.
ಜನರ ಸಮಸ್ಯೆಗಳನ್ನು ಸರಕಾರದ ಮುಖಕ್ಕೆ ಹಿಡಿಯಿರಿ. ಹೋರಾಡುವುದಕ್ಕೆ ಅಂಜಿಕೆ, ಅಳಲು ಏಕೆ. ಇವತ್ತಿನ ರಾಜ್ಯ ಮತ್ತು ದೇಶದ ರಾಜಕಾರಣ ಗೊಂದಲಮಯವಾಗಿದೆ. ನಾವು ಜನನಿಷ್ಠರಾಗಿ ಅವರ ಜತೆ ನಿಲ್ಲೋಣ ಎಂದು ಶಾಸಕರನ್ನು ಹುರಿದುಂಬಿಸಿದ್ದಾರೆ.
ಇದನ್ನೂ ಓದಿ:VIDEO| ಇದು ಗೂಗ್ಲಿಯಲ್ಲ ದೊಡ್ಡ ಡಕಾಯಿತಿ: ಶರದ್​ ಪವಾರ್​
ಯಾರೂ ಎದೆಗುಂದಬೇಕಿಲ್ಲ. ಪಕ್ಷ ಕಟ್ಟಿ. ಸೋಲಿನಿಂದ ಹತಾಶರಾಗುವುದು ಬೇಡ. ಛಲವಿದ್ದರೆ ಗೆಲುವು ಖಚಿತ. ಅಧೈರ್ಯವೇ ಅವಸಾನಕ್ಕೆ ನಾಂದಿ ಆಗುತ್ತದೆ ಎಚ್ಚರ ಇರಲಿ. ಪಕ್ಷವನ್ನು ಉಳಿಸಲೇಬೇಕು, ಈ ನಿಟ್ಟಿನಲ್ಲಿ ನಾವೆಲ್ಲರೂ ಸೇರಿ ಮಾಡೋಣ ಎಂದು ಹೇಳಿದ್ದಾರೆ.
ವಿಧಾನಮಂಡಲ ಅಧಿವೇಶನ, ಪಕ್ಷದ ಬಲವರ್ಧನೆ, ತಾಲೂಕು, ಜಿಲ್ಲಾ ಹಾಗೂ ರಾಜ್ಯ ಘಟಕಗಳ ಪುನಾರಚನೆ, ನೂತನ ಕೋರ್ ಕಮಿಟಿ ರಚನೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಕುರಿತು ಸಭೆಯಲ್ಲಿ ಪಕ್ಷದ ಮುಖಂಡರಿಗೆ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಹಲವು ಸಲಹೆಗಳನ್ನು ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 19 =
Remember me
