ಬೆಂಗಳೂರು:ರಾಜ್ಯ ವಿಧಾನಸಭೆ ಅಧಿವೇಶನ ಶುರುವಾಗಿ ವಾರ ಕಳೆದಿದ್ದು, ದಿನದಿಂದ ದಿನಕ್ಕೆ ಆಡಳಿತ ಪಕ್ಷ ಕಾಂಗ್ರೆಸ್​ ವಿರುದ್ಧ ವಿಪಕ್ಷಗಳ ಬಿಜೆಪಿ-ಜೆಡಿಎಸ್​ ಸದಸ್ಯರು ಮುಗಿ ಬೀಳುತ್ತಿದ್ದು, ಈ ಮಧ್ಯೆ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿಕೆಯೊಂದನ್ನು ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಬಿಜೆಪಿ ಪರ ಬ್ಯಾಟ್​ ಬೀಸುತ್ತಿರುವ ಮಾಜಿ ಸಿಎಂ ಎಚ್​ಡಿಕೆ 2018ರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಆಫರ್​ ಕುರಿತು ಸದನದಲ್ಲಿ ಪ್ರಸ್ತಾಪಿಸಿದ್ದಾರೆ.
ಇದನ್ನೂ ಓದಿ:ಭ್ರಷ್ಟಾಚಾರ ದಾಖಲೆ ಸಿಎಂಗೆ ನೀಡುವೆ: ಸದನದಲ್ಲಿ ಕುಮಾರಸ್ವಾಮಿ ಹೇಳಿಕೆ; ಎಲೆಕ್ಷನ್ ಸೋಲು ಹೊಸದಲ್ಲವೆಂದ ಮಾಜಿ ಸಿಎಂ
ಸದನದಲ್ಲಿ ಮಾತನಾಡುವ ವೇಳೆ ಸಿಎಂ ಸಿದ್ದರಾಮಯ್ಯ ಕುಮಾರಸ್ವಾಮಿ ಯಾಕೋ ಬಿಜೆಪಿ ಜೊತೆ ಸೇರಿದ್ದೀಯಾ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಎಚ್​ಡಿಕೆ 2018ರಲ್ಲಿ ಚುನಾವಣೆ ಫಲಿತಾಂಶದ ಬಳಿಕ ಪ್ರಧಾನಿ ಮೋದಿ ಒಂದುವರೆ ಘಂಟೆಗಳ ಕಾಲ ಚರ್ಚಿಸಿದ ಬಗ್ಗೆ ಹೇಳಿದ್ದರು.
ಬಳಿಕ ಬಿಜೆಪಿ-ಜೆಡಿಎಸ್​ ಮೈತ್ರಿ ಕುರಿತು ಸ್ಪಷ್ಟನೆ ನೀಡಿದ ಎಚ್​ಡಿಕೆ ಪ್ರಧಾನಿ ಮೋದಿ ಗುಟ್ಟಾಗಿ ಆಫರ್ ಕೊಟ್ಟಿದ್ದನ್ನು ವಿಧಾನಸಭೆಯಲ್ಲಿ ಬಹಿರಂಗಪಡಿಸಿದ್ದಾರೆ. ನಮ್ಮ ಪಕ್ಷವನ್ನು ಉಳಿಸುವ ನಿಟ್ಟಿನಲ್ಲಿ ನಾನು ಆ ದಿನ ಬಿಜೆಪಿಯೊಂದಿಗೆ ಸೇರಲಿಲ್ಲ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಸದನದಲ್ಲಿ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
