ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಪಕ್ಷ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕ್​ ಸ್ಕೂಟರ್​ಗಳನ್ನು ಕೊಡಲಾಗುವುದು ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಚೇನಹಳ್ಳಿಯಲ್ಲಿ ಪಂಚರತ್ನ ರಥಯಾತ್ರೆ ಕಾರ್ಯಕ್ರವನ್ನು ಉದ್ದೇಶಿಸಿ ಮಾತನಾಡಿದ ಎಚ್​.ಡಿ.ಕೆ ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಜೆಡಿಎಸ್​ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಎಲೆಕ್ಟ್ರಿಕ್​ ಸ್ಕೂಟರ್​ಗಳನ್ನು ಸರ್ಕಾರದ ವತಿಯಿಂದ ಕೊಡಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಬಿಜೆಪಿಗೆ ಕರ್ನಾಟಕದ ಅಸ್ಮಿತೆಯ ಬಗ್ಗೆ ಯಾವ ಕಾಳಜಿಯೂ ಇಲ್ಲ: ಪ್ರಿಯಾಂಕ್​​ ಖರ್ಗೆ
ಎರಡು ರಾಷ್ಟ್ರೀಯ ಪಕ್ಷ್ಗಳ ವಿರುದ್ಧ ನಾನು ಏಕಾಂಗಿಯಾಗಿ ಹೋರಾಟ ಮಾಡುತ್ತಿದ್ದೇನೆ. ಪಂಚರತ್ನ ಕಾರ್ಯಕ್ರಮಗಳನ್ನು ನಾನು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ.
ಚುನಾವಣೆ ಕುರಿತ ಕೆಲಸ ಇದ್ದ ಕಾರಣ ನಾನು ಬರಲು ಸ್ವಲ್ಪ ತಡವಾಯಿತು ಎಂದು ಭಾಷಣ ಮಾಡುವ ವೇಳೆ ಬಿಸಿಲು ಜಾಸ್ತಿ ಇದ್ದ ಕಾರಣ ಪ್ರಚಾರದ ವಾಹನವನ್ನು ಚಾಲಕ ನೆರಳಿಗೆ ನಿಲ್ಲಿಸಲು ಮುಂದಾದರು. ಈ ವೇಳೆ ಕಳೆದ ನಾಲ್ಕು ತಿಂಗಳ ಬಿಸಿಲಿನಲ್ಲಿಯೇ ಇದ್ದೇನೆ ನೆರಳಿಗೆ ಹಾಕಬೇಡಿ ಏನು ಆಗಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 3 =
Remember me
