ಬೆಂಗಳೂರು:ರಾಜ್ಯದಲ್ಲಿ ಈ ಬಾರಿ ಜೆಡಿಎಸ್​ ಪಕ್ಷ ಅಧಿಕಾರಕ್ಕೆ ಬಂದರೆ ಅಡುಗೆ ಅನಿಲದ ಸಿಲಿಂಡರ್​ಗಳ ಮೇಲೆ ಶೇ.50ರಷ್ಟು ಸಬ್ಸಿಡಿಯನ್ನು ನೀಡಲಾಗುವುದು ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಎಚ್​​.ಡಿ.ಕುಮಾರಸ್ವಾಮಿ ಕೇಂದ್ರ ಸರ್ಕಾರ ಉಚಿತ ಗ್ಯಾಸ್​ ಸಿಲಿಂಡರ್ಗಳನ್ನು ನೀಡಲಾಗುವುದು ಎಂದು ಹೇಳಿ ಉಜ್ವಲ ಯೋಜನೆಯನ್ನ ಜಾರಿಗೆ ತಂದಿದೆ. ಆದರೆ, ಇದನ್ನು ನಂಬಿದ ಮಹಿಳೆಯರಿಗೆ ಒಂದು ಸಿಲಿಂಡರ್ ಕೊಟ್ಟ ಮೇಲೆ ಸರ್ಕಾರ ಬೆಲೆ ಏರಿಕೆಯ ಶಾಕ್​ ನೀಡಿತ್ತು.
ಇದನ್ನೂ ಓದಿ:ಡಿ.ಕೆ.ಶಿವಕುಮಾರ್​ಗೆ ಬಂಡೆ ಹಾರ; ಎಚ್​ಡಿಕೆಗೆ ವಿಶೇಷ ಹಾರ ಹಾಕಿ ಸ್ವಾಗತಿಸಿದ ಕಾರ್ಯಕರ್ತರು
ಈಗ ಸಿಲಿಂಡರ್​ ಬೆಲೆ ಸಾವಿರ ರೂಪಾಯಿ ದಾಟಿದ್ದು ಬಡವರು ಜೀವನ ಸಾಗಿಸುವುದು ಕಷ್ಟಕರವಾಗಿದೆ. ನಮ್ಮಲ್ಲಿ ಅಡುಗೆ ಅನಿಲದ ಯೋಜನೆ ಹೊರತುಪಡಿಸಿ ಹಲವು ಯೋಜನೆಗಳಿವೆ. ಆಟೋ ಚಾಲಕರಿಗೆ ಮಾಸಿಕ ಎರಡು ಸಾವಿರ ರೂಪಾಯಿಯನ್ನು ನೀಡಲಾಗುವುದು. ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳನ್ನ ಈಡೇರಿಸಲಾಗುವುದು ಎಂದು ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡುವ ವೇಳೆ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
