ಚನ್ನಪಟ್ಟಣ:ರಾಮನಗರ(Ramnagara)ಜಿಲ್ಲೆಯ ಚನ್ನಪಟ್ಟಣ ತಾಲೂಕು ವಿರೂಪಾಕ್ಷ ಪುರ ಹೋಬಳಿ ವಿರೂಪಸಂದ್ರ ಗ್ರಾಮದಲ್ಲಿ ಮಾವಿನ ತೋಟ ಕಾಯುತ್ತಿದ್ದ ವೀರಭದ್ರ ಎಂಬ ವ್ಯಕ್ತಿ ಕಾಡಾನೆ ದಾಳಿಗೆ ಸಿಲುಕಿ ಇಂದು ಮೃತಪಟ್ಟಿದ್ದಾರೆ.
ಇದನ್ನೂ ಓದಿ:ವೀರ ಸಾವರ್ಕರ್ ಹೆಸರಿನ ಕಾರ್ಯಕ್ರಮಕ್ಕೆ ಸರ್ಕಾರದಿಂದ ತಡೆ?; ಕೊನೆಗೂ…
ಘಟನೆ ಬಗ್ಗೆ ಮಾಹಿತಿ ಪಡೆದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ(JDS Leader)ಹೆಚ್.ಡಿ. ಕುಮಾರಸ್ವಾಮಿ(HD Kumarswamy), “ಚನ್ನಪಟ್ಟಣ ಕ್ಷೇತ್ರದ ವಿರೂಪಸಂದ್ರ ಗ್ರಾಮದಲ್ಲಿ ಮಾವಿನ ತೋಟ ಕಾಯುತ್ತಿದ್ದ ಶ್ರೀ ವೀರಭದ್ರಯ್ಯ ಅವರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ವಾರ್ತೆ ಕೇಳಿ ಬಹಳ ದುಃಖ ಉಂಟಾಯಿತು. ಮೃತ ರೈತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಆ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪ(Condolences)ಸೂಚಿಸಿದ್ದಾರೆ.

“ಅರಣ್ಯ ಸಂರಕ್ಷಣೆ ಜತೆಗೆ ಕಾಡಿನ ಅಕ್ಕಪಕ್ಕ ಬೇಸಾಯ ಮಾಡುವ ರೈತರ ಹಿತವೂ ಮುಖ್ಯ. ರೈತಾಪಿ ಜನರ ಜೀವ ಅಮೂಲ್ಯ. ಈ ಕಾರಣಕ್ಕಾಗಿ ಅರಣ್ಯ ವಲಯದಲ್ಲಿ ವೈಜ್ಞಾನಿಕ ಬೇಲಿ ನಿರ್ಮಾಣ ಮಾಡಬೇಕು ಎಂದು ನಾನು ಅನೇಕ ಸಲ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದೇನೆ. ಈ ಬಗ್ಗೆ ಇನ್ನಷ್ಟು ವಿಳಂಬ ಮಾಡಬಾರದು. ಚನ್ನಪಟ್ಟಣ ಮಾತ್ರವಲ್ಲದೆ, ರಾಮನಗರ ಜಿಲ್ಲೆಯ ನಾನಾ ಭಾಗಗಳಲ್ಲಿ ಜನರ ಮೇಲೆ ಕಾಡುಪ್ರಾಣಿಗಳು ದಾಳಿ ನಡೆಸುವ ಪ್ರಕರಣಗಳು ಮರುಕಳಿಸುತ್ತಲೇ ಇವೆ” ಎಂದು ಟ್ವೀಟ್​ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ:ರೈಲ್ವೆ ಸಚಿವರು ಶೀಘ್ರವೇ ರಾಜೀನಾಮೆ ಕೊಡಬೇಕು: ಅಭಿಷೇಕ್ ಬ್ಯಾನರ್ಜಿ
“ಅರಣ್ಯ ಸಚಿವರಾದ ಶ್ರೀ ಈಶ್ವರ್ ಖಂಡ್ರೆ(Eshwar Khandre)ಅವರು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎನ್ನುವುದು ನನ್ನ ಆಗ್ರಹ. ಸಚಿವರು ಈಗಾಗಲೇ ಘೋಷಿಸಿರುವಂತೆ, ಕೂಡಲೇ ನೊಂದ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ಹಸ್ತಾಂತರ ಮಾಡಬೇಕು ಹಾಗೂ ಕಾಡಂಚಿನಲ್ಲಿ ಎಲ್ಲಾ ಸುರಕ್ಷಿತ ಕ್ರಮಗಳನ್ನು ವಹಿಸಿ ಜನರ ಮೇಲೆ ಕಾಡುಪ್ರಾಣಿಗಳ ದಾಳಿ ಆಗದಂತೆ ಶಾಶ್ವತವಾಗಿ ತಡೆಯುವ ಎಲ್ಲಾ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 12 =
Remember me
