ಬೆಂಗಳೂರು:ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕು, ಸ್ವತಂತ್ರವಾಗಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಪಣತೊಟ್ಟಿರುವ ದಳಪತಿಗಳು ಅಳೆದು-ತೂಗಿ, ಒಳ್ಳೆಯ ಮುಹೂರ್ತದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು(ಸೋಮವಾರ) ಬಿಡುಗಡೆ ಮಾಡಿದರು.
ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿರುವುದಾಗಿ ಶನಿವಾರ ರಾಮನಗರದಲ್ಲಿ ನಡೆಯುತ್ತಿದ್ದ ಪಂಚರತ್ನ ರಥಯಾತ್ರೆಯಲ್ಲಿ ರಾಮನಗರಕ್ಕೆ ನಿಖಿಲ್​ ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಅನಿತಾಕುಮಾರಸ್ವಾಮಿ ಘೋಷಿಸಿದ್ದರು. ಆದರೆ, ಇಂದು ಎಚ್​.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್​ ಪಕ್ಷದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ನಿಖಿಲ್​ ಹೆಸರು ಮತ್ತು ರಾಮನಗರ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಇಲ್ಲ.
ಹಾಸನ ಜಿಲ್ಲೆಯಲ್ಲಿ ಭವಾನಿ ರೇವಣ್ಣ ಟಿಕೆಟ್​ ಆಕಾಂಕ್ಷಿಯಾಗಿದ್ದು, ಮತ್ತೊಂದೆಡೆ ಶಿವಲಿಂಗೇಗೌಡ ಪಕ್ಷ ಬಿಡುವ ವದಂತಿ ಇದೆ. ಹಾಸನ ಜಿಲ್ಲೆಯ ಅಭ್ಯರ್ಥಿಗಳ ಘೋಷಣೆಯನ್ನು ಎಚ್​ಡಿಕೆ ಕಾಯ್ದಿರಿಸಿದ್ದಾರೆ.ಒಟ್ಟು 93 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮವಾಗಿದೆ. ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡರ ಅನುಮೋದನೆ ಮೇರೆಗೆ ಸಿಎಂ ಇಬ್ರಾಹಿಂ ಸಮ್ಮುಖದಲ್ಲಿ ಕುಮಾರಸ್ವಾಮಿ ಪಟ್ಟಿ ಬಿಡುಗಡೆ ಮಾಡಿದರು.
ಶಾಲಾ ಸಮಯ ಬದಲಾಗಲಿ, ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ನಿಗದಿ ಮಾಡಿ: ಹೃದ್ರೋಗ ತಜ್ಞ ಡಾ.ಸಿ.ಎನ್​.ಮಂಜುನಾಥ್​

ಕೋವಿಡ್​ಗೆ ತಾಯಿ ಬಲಿ… ಒಂದೊತ್ತಿನ ಊಟಕ್ಕೂ ಬೀದಿಬೀದಿ ಅಲೆಯುತ್ತಿದ್ದ 10 ವರ್ಷದ ಬಾಲಕ ರಾತ್ರೋರಾತ್ರಿ ಕೋಟ್ಯಧಿಪತಿಯಾದ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × five =
Remember me
