ಬೆಂಗಳೂರು:ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿರುವ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ವಿಡಿಯೋ ಪ್ರಕರಣ ಇದೀಗ ದಿನೇ ದಿನೇ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಸದ್ಯ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎದ್ದಿದ್ದು, ಮಾಜಿ ಸಿಎಂ, ಜೆಡಿಎಸ್​ ನಾಯಕ ಎಚ್​.ಡಿ. ಕುಮಾರಸ್ವಾಮಿ ಅವರನ್ನು ಈ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ, ಟೀಕಿಸಲಾಗುತ್ತಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಎಚ್​ಡಿಕೆ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಪ್ರಜ್ವಲ್‌ ರೇವಣ್ಣ ಕೇಸ್‌: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಅಂಕೋಲಾದ ಅಶೋಕ ನಾಯ್ಕ
“ಪೆನ್ ಡ್ರೈವ್ ವಿಚಾರವನ್ನು ನನ್ನ ತಲೆಗೆ ಕಟ್ಟಲು ಹೊರಟಿದ್ದೀರಿ. ನಾನೇ ಪ್ರೊಡ್ಯೂಸರ್, ಡೈರೆಕ್ಟರ್, ಕಥಾನಾಯಕ ಎಂದೆಲ್ಲಾ ಹೇಳುತ್ತಿದ್ದೀರಿ. ನಾನು ಸಿನಿಮಾ ನಿರ್ಮಾಣ ಮಾಡಿದ್ದೇನೆ, ಆದರೆ ಆಕ್ಟಿಂಗ್ ಮಾಡಿಲ್ಲ ಅಷ್ಟೇ ಎಂದು ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟ ಅವರು, ಈ ಘಟನೆಗೆ ನನ್ನನ್ನು ಕಥಾನಾಯಕ ಮಾಡಲು ಹೊರಟಿದ್ದೀರಿ ಅಲ್ಲವೇ? ಹಲವಾರು ಸಿನಿಮಾಗಳ ಕಥೆಗಳನ್ನು ನೋಡಿದ್ದೇನೆ, ಕೇಳಿದ್ದೇನೆ. ಅಂತಹ ಸಿನಿಮಾಗಳೇ ಹಿಟ್ ಆಗಿ ಬಿಡುತ್ತಿವೆ. ಕನ್ನಡದಲ್ಲಿ ʼಉತ್ಕರ್ಷʼ, ಮಲೆಯಾಳಂ ರೀಮೇಕ್ ʼದೃಶ್ಯಂʼ ನಂತಹ ಸಿನಿಮಾಗಳು ಬಂದಿರುವುದನ್ನು ನೋಡಿದ್ದೇವೆ” ಎಂದರು.
“ಈ ಪ್ರಕರಣದಲ್ಲಿ ಸರಕಾರ ತನಿಖೆ ನಡೆಸುತ್ತಿರುವ ವರಸೆ ನೋಡಿದರೆ ನನಗೆ ಆ ಸಿನಿಮಾಗಳು ನೆನಪಿಗೆ ಬರುತ್ತಿವೆ. ತಲೆ ಮರೆಸಿಕೊಂಡಿರುವ ಆ ಚಾಲಕನನ್ನು ಮೊದಲು ಹಿಡಿದು ವಿಚಾರಣೆ ನಡೆಸಿ, ಆಗ ಎಲ್ಲಾ ಕಥೆಗಳು ಹೊರಗೆ ಬರುತ್ತವೆ. ಮನೆಮನೆಗೆ ಹೋಗಿ ದೂರು ಕೊಡಿ ಅಂತ ಒತ್ತಾಯ ಮಾಡುವ ಅವಶ್ಯಕತೆ ಇಲ್ಲ. ಕೆಆರ್. ನಗರದಿಂದ ಹುಡುಕಿ ಹುಡುಕಿ ಕರೆದುಕೊಂಡು ಬರ್ತಾ ಇದೀರಲ್ಲ? ಹಾಸನ, ಹೊಳೆನರಸೀಪುರದಲ್ಲಿ ಯಾರೂ ಇಲ್ವಾ? ಯಾಕೆ ಇವತ್ತು ಕೇಂದ್ರ ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ” ಎಂದು ಕಿಡಿಕಾರಿದರು.
ಇದನ್ನೂ ಓದಿ:ಆ್ಯಂಕರ್ ಸುಷ್ಮಾರಂತೆ ಇಮಿಟೇಟ್ ಮಾಡಿದ ನನ್ನಮ್ಮ ಸೂಪರ್​ ಸ್ಟಾರ್​ ಪುಟಾಣಿಗಳು!
“ಸಚಿವರೇ, ತನಿಖೆ ಸರಿಯಾದ ರೀತಿಯಲ್ಲಿ ಆಗದಿದ್ದರೆ ಇನ್ನೂ ಏನೇನು ಆಗುತ್ತದೆಯೋ ಗೊತ್ತಿಲ್ಲ. ನಿಮ್ಮ ನಾಯಕರ ಕೈಗೆ ಈ ವಿಚಾರ ಯಾವಾಗ ಬಂತು? ಪ್ರಜ್ವಲ್ ರೇವಣ್ಣ ಚಾಲಕ ಕಾರ್ತಿಕ್ ಗೌಡ ಈಗ ಶ್ರೇಯಸ್ ಪಟೇಲ್ ಜತೆ ಇದ್ದಾನೆ. ಫೋಟೋಗಳನ್ನು ನೀವೇ ತೋರಿಸ್ತಾ ಇದೀರಾ ಅಲ್ಲವೇ? ಒಂದು ವೇಳೆ ಕಾರ್ತಿಕ್ ಗೌಡ ನನ್ನನ್ನು ಭೇಟಿ ಮಾಡಿ ಎಲ್ಲವನ್ನೂ ಹೇಳಿದ್ದಿದ್ದರೆ ಅಂದೇ ಸರಿ ಮಾಡುತ್ತಿದ್ದೆ” ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.
ಧೋನಿ ಸಹ ಪಾಠ ಕಲಿಸಲು ಸಾಧ್ಯವಿಲ್ಲ… ಶಾಕಿಂಗ್ ಹೇಳಿಕೆ ನೀಡಿದ ಹಾರ್ದಿಕ್ ಪಾಂಡ್ಯ!

ನಯನತಾರ ಸೇರಿದಂತೆ ಟಾಪ್​​ ನಟಿಯರೊಂದಿಗೆ ಲವ್ವಿ-ಡವ್ವಿ​! ಈ ವದಂತಿಗಳಲ್ಲಿ ಸಿಲುಕಿದ್ದ ಸ್ಟಾರ್​ ನಟ ಈತ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 + seventeen =
Remember me
