ಬೆಂಗಳೂರು:ರಾಜ್ಯ ಕಾಂಗ್ರೆಸ್ ನಾಯಕರನ್ನು ನಿರ್ಲಕ್ಷಿಸಿ ರಾಷ್ಟ್ರ ಮಟ್ಟದ ರಾಜಕಾರಣ ಮಾಡಲು ಮುಂದಾದದ್ದೇ ಜೆಡಿಎಸ್​ಗೆ ಮುಳುವಾಯಿತೆ? ಈ ಪ್ರಶ್ನೆ ರಾಜ್ಯ ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ! ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ಇಟ್ಟ ಹೆಜ್ಜೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮಾತ್ರವಲ್ಲ, ಪಕ್ಷದಲ್ಲೇ ಅಸಮಾಧಾನಕ್ಕೆ ಆಸ್ಪದ ಮಾಡಿಕೊಟ್ಟಿದೆ. ಕುಪೇಂದ್ರ ರೆಡ್ಡಿ ಕಣಕ್ಕಿಳಿಸಿ ಜೆಡಿಎಸ್ ಕಣ್ಣುಬಾಯಿ ಬಿಡುವಂತಾಗಿದೆ. ಕಾಂಗ್ರೆಸ್ ಕಣಕ್ಕಿಳಿಸಿರುವ ಮುಸ್ಲಿಂ ಸಮುದಾಯದ ಅಭ್ಯರ್ಥಿ ಬೆಂಬಲಿಸದಿದ್ದರೆ ಜೆಡಿಎಸ್​ನ ಜಾತ್ಯತೀತತೆ ಪ್ರಶ್ನಾರ್ಥಕವಾಗಿಯೇ ಉಳಿಯುವ ಆತಂಕ ಎದುರಾಗಿದೆ.
ಸಮಸ್ಯೆಗಳೇನು?:ಅಭ್ಯರ್ಥಿ ಕಣಕ್ಕಿಳಿಸುವ ಮುನ್ನ ರಾಜ್ಯ ಕಾಂಗ್ರೆಸ್ ನಾಯಕರನ್ನು ಕಡೆಗಣಿಸಿ ಎಐಸಿಸಿ ಮಟ್ಟದಲ್ಲಿ ಲಾಬಿ ನಡೆಸಿತು. ಅದು ಗೊತ್ತಾದ ಕೂಡಲೇ ಕಾಂಗ್ರೆಸ್ ರಾಜ್ಯ ನಾಯಕರು 2ನೇ ಅಭ್ಯರ್ಥಿ ಕಣಕ್ಕಿಳಿಸಿ ಜೆಡಿಎಸ್​ಗೆ ಸಡ್ಡು ಹೊಡೆದರು. ಇದು ಈಗ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಹೊಂದಾಣಿಕೆ ರಾಜಕಾರಣಕ್ಕೆ ಹುಳಿ ಹಿಂಡಿದೆ. ಅಲ್ಲದೆ, ನಾಮಪತ್ರ ಸಲ್ಲಿಕೆಯ ಕೊನೇ ದಿನಕ್ಕೂ ಒಂದು ದಿನ ಮುನ್ನ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾಡಿದ ಟ್ವೀಟ್ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಗೆ ಕೊನೆಯ ಮೊಳೆ ಹೊಡೆದಿದೆ ಎಂದೇ ಪಕ್ಷದಲ್ಲಿ ಚರ್ಚೆ ನಡೆದಿದೆ. ಕುಮಾರಸ್ವಾಮಿ ನಡೆಯಿಂದ ಪಕ್ಷದಲ್ಲೂ ಕೆಲವು ಶಾಸಕರು ತೀವ್ರ ಅಸಮಾಧಾನಗೊಂಡಿದ್ದಾರೆ. 4-5 ಶಾಸಕರು ಕಾಂಗ್ರೆಸ್ ಪರ, ಒಬ್ಬಿಬ್ಬ ಶಾಸಕರು ಬಿಜೆಪಿ ಪರ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದರೂ ಅಚ್ಚರಿ ಇಲ್ಲದ ಸ್ಥಿತಿ ನಿರ್ವಣವಾಗಿದೆ ಎಂಬ ಆತಂಕ ಪಕ್ಷದ ಮುಖಂಡರಲ್ಲಿದೆ.
9ಕ್ಕೆ ಜೆಡಿಎಸ್ ಶಾಸಕಾಂಗ ಸಭೆ:ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೂ.9 ರಂದು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಜೆ.ಪಿ. ಭವನದಲ್ಲಿ ಅಂದು ಸಂಜೆ 6.30ಕ್ಕೆ ಸಭೆ ನಡೆಯಲಿದ್ದು, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೇತೃತ್ವ ವಹಿಸಲಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಭಾಗವಹಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
