ರಾಯಚೂರು: ಚುನಾವಣಾ ಸಮಯ ಹತ್ತಿರುವಾಗುತ್ತಿದ್ದಂತೆ ಹಾಸನ ವಿಧಾಸಭಾ ಕ್ಷೇತ್ರ ಜೆಡಿಎಸ್ ಕಾರಣದಿಂದ ಇದೀಗ ತೀವ್ರ ಕುತೂಹಲ ಕೆರಳಿಸುತ್ತಿದ್ದೆ. ಈ ಬಗ್ಗೆ ರಾಜ್ಯ ಮಟ್ಟದಲ್ಲಿ ಹಲವು ಚರ್ಚೆಗಳಾಗುತ್ತಿವೆ. ಯಾವಾಗ ಕಾರ್ಯಕ್ರಮ ವೇದಿಕೆಯೊಂದರಲ್ಲಿ ಭವಾನಿ ರೇವಣ್ಣ, ಸದ್ಯದಲ್ಲೇ ಹಾಸನ ಕ್ಷೇತ್ರದ ಅಭ್ಯರ್ಥಿಯನ್ನಾಗಿ ನನ್ನ ಹೆಸರನ್ನು ಘೋಷಿಸಿಲಿದ್ದಾರೆ ಎನ್ನುತ್ತಿದ್ದಂತೆ ತೆರೆಮರೆಯಲ್ಲಿ ಸದ್ದಿಲ್ಲದೆ ಏನೋ ನಡೆಯುತ್ತಿದೆ ಎಂಬ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬಂದಿದ್ದವು.
ನಂತರದಲ್ಲಿ ಹಾಸನಕ್ಕೆ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಆಗ್ರಹ ಕೇಳಿ ಬಂದಿತ್ತು. ಇದೀಗ ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಈಗಾಗಲೇ ನಾಲ್ಕು ಜನ ಮಹಿಳೆಯರಿಗೆ ಟಿಕೇಟ್ ಘೋಷಣೆ ‌ಮಾಡಿದ್ದೇವೆ. ಈ ವಿಚಾರವಾಗಿ ಏನು ಹೇಳಬೇಕೋ ಅದನ್ನು ಹೇಳಿ ಆಗಿದೆ. ನಾಲ್ಕೈದು ಜನ ಹೇಳಿದ ತಕ್ಷಣ ಟಿಕೆಟ್ ನೀಡಲು ಆಗುವುದಿಲ್ಲ. ಸಮರ್ಥ ಅಭ್ಯರ್ಥಿಗಳು ಇದ್ದಾಗ, ನಾವು ಕುಟುಂಬದಿಂದ ಯಾರನ್ನು ಸ್ಪರ್ಧೆಗೆ ಇಳಿಸುವುದಿಲ್ಲ ಎಂದು ಹೇಳಿದರು.
ಕೆಲವರು ವೈಯಕ್ತಿಕ ಪ್ರೀತಿ, ವಿಶ್ವಾಸದಿಂದ ಮಾತನಾಡುತ್ತಾರೆ. ಅಭಿಮಾನದಿಂದ ಮಾತನಾಡಿದ್ದೆಲ್ಲವನ್ನು ಅಭಿಪ್ರಾಯವೆಂದು ತೀರ್ಮಾನಿಸಲು ಸಾಧ್ಯವಿಲ್ಲ. ಎಂದರು. ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆಗೆ ಬೆಂಬಲಿಸಿ, ಬಿ.ಫಾರ್ಮ್ ದೇವೇಗೌಡರೇ ಕೊಡುವುದು. ಪ್ರಜ್ವಲ್ ಹೇಳಿಕೆಯಲ್ಲಿ ಯಾವುದೇ ತಪ್ಪು ಇಲ್ಲ. ಅಂತಿಮವಾಗಿ ಪಕ್ಷದ ನಾಯಕರು ತೀರ್ಮಾನ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 12 =
Remember me
