ತುಮಕೂರು:ಗ್ಯಾರಂಟಿಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವ ಹೇಳಿಕೆ ಸಂಬಂಧ ಇದೀಗ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಕಾರ್ಯಕ್ರಮಕ್ಕೂ ಬಿಸಿ ತಟ್ಟಿದೆ.
ಇದನ್ನೂ ಓದಿ:ಎಲ್ಲರೂ ಪಶ್ಚಾತ್ತಾಪ ಪಡುತ್ತಾರೆ: ಚುನಾವಣಾ ಬಾಂಡ್ ರದ್ದತಿ ಬಗ್ಗೆ ಪ್ರಧಾನಿ ಮೋದಿ ಟೀಕೆ
ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಕುಂಚಿಟಿಗರ ಸಮುದಾಯ ಭವನದಲ್ಲಿ ನಡೆಯುತ್ತಿದ್ದ ಮೈತ್ರಿ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರಿಂದ ಹೈಡ್ರಾಮಾ ಮಾಡಲಾಗಿದೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆಗೆ ಇಬ್ಬರು ಕಾಂಗ್ರೆಸ್​ ಕಾರ್ಯಕರ್ತರು ಆಗಮಿಸಿ ಧಿಕ್ಕಾರ ಕೂಗುವ ಮೂಲಕ ಪ್ರಚಾರ ಸಭೆಯಲ್ಲಿ ಕೆಲ ಕಾಲ ಗೊಂದಲ ಉಂಟು ಮಾಡಿದರು.
ಈ ಘಟನೆ ಕುರಿತು ತುಮಕೂರು ಮೈತ್ರಿ ಅಭ್ಯರ್ಥಿ ವಿ ಸೋಮಣ್ಣ ಮಾತನಾಡಿ, ಹತಾಶ ಮನೋಭಾವನೆಯಿಂದ ಹೀಗೆ ಮಾಡಿದ್ದಾರೆ, ಎಷ್ಟರ ಮಟ್ಟಿಗೆ ಸರಿ. ಮಾಜಿ ಸಿಎಂ H.D.ಕುಮಾರಸ್ವಾಮಿ ಅವರೇ ಬೆಳಗ್ಗೆಯೇ ಸ್ಪಷ್ಟನೆ ಕೊಟ್ಟಿದ್ದಾರೆ. ಯಾರೋ ಹೆಣ್ಣು ಮಕ್ಕಳನ್ನ ಕಳಿಸಿ ಹೀಗೆ ಮಾಡಿದ್ದಾರೆ ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಹೀಗೆ ಮಾಡಿದ್ದಾರೆ, ಇದೆಲ್ಲಾ ಆಗಬಾರದು. ಬೇಕೆಂತಲೇ ಮಹಿಳೆಯರನ್ನು ಕಳಿಸಿದಾಗ ಪೊಲೀಸರು ಏನು ಮಾಡೋಕ್ಕೆ ಸಾಧ್ಯ. ನಾವೂ ಎಚ್ಚರ ವಹಿಸುತ್ತೇವೆ, ಪೊಲೀಸರು ಈ ಬಗ್ಗೆ ಗಮನಹರಿಸಲಿ ಎಂದು ಹೇಳಿದರು.
ಲೋಕಸಮರ: ಚುನಾವಣಾ ಆಯೋಗದಿಂದ ಈವರೆಗೆ ಒಟ್ಟು 4,650 ರೂ. ಕೋಟಿಗೂ ಅಧಿಕ ನಗದು, ವಸ್ತುಗಳು ಜಪ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
