ವಿಜಯಪುರ:ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಜೆಡಿಎಸ್​ಗೆ ಸ್ಪಷ್ಟ ಬಹುಮತ ಸಿಕ್ಕಿದ್ದೇ ಆದಲ್ಲಿ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುತ್ತೇನೆ. ಹಾಗೊಂದು ವೇಳೆ ನಿಗದಿತ ಅವಧಿಯಲ್ಲಿ ನೀರಾವರಿ ಯೋಜನೆ ಪೂರ್ಣಗೊಳ್ಳದಿದ್ದರೆ ಜೆಡಿಎಸ್ ಪಕ್ಷ ವಿಸರ್ಜನೆ ಮಾಡುವುದಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರತಿಜ್ಞೆಗೈದರು.
ರಾಜ್ಯಾದ್ಯಂತ ಜೆಡಿಎಸ್​ನಿಂದ ಹಮ್ಮಿಕೊಂಡಿರುವ ಜನತಾ ಜಲಧಾರೆ ಸಂಕಲ್ಪ ಯಾತ್ರೆ ಹಿನ್ನೆಲೆ ಶನಿವಾರ ಆಲಮಟ್ಟಿಯಲ್ಲಿ ಗಂಗಾಪೂಜೆ ಸಲ್ಲಿಸಿ ಕಲಶದಲ್ಲಿ ನೀರು ಸಂಗ್ರಹಿಸಿದ ಬಳಿಕ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, 75 ವರ್ಷಗಳಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ನಾಡಿನ ಜನತೆಗೆ ದ್ರೋಹ ಮಾಡಿದ್ದರ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಜನತೆ ನನಗೆ ಪೂರ್ಣ ಬಹುಮತದ ಸರ್ಕಾರ ರಚಿಸುವಂತೆ ಆಶೀರ್ವಾದ ಮಾಡಲಿ, ಐದು ವರ್ಷಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವೆ, ಇದಕ್ಕಾಗಿ ಎಷ್ಟೇ ಲಕ್ಷಕೋಟಿ ಖರ್ಚಾದರೂ ಪರವಾಗಿಲ್ಲ. ಒಂದು ವೇಳೆ ವಿಫಲವಾದರೆ ಪಕ್ಷವನ್ನೇ ವಿಸರ್ಜನೆ ಮಾಡಿ, ರಾಜಕೀಯದಿಂದಲೇ ನಿವೃತ್ತಿ ಹೊಂದುವೆ ಎಂದರು. 123 ಸ್ಥಾನಗಳನ್ನು ನಮಗೆ ನೀಡಿ, ಆಗ ಯಾವ ಪಕ್ಷದ ಹಂಗಿಲ್ಲದೇ ಸ್ವತಂತ್ರ ಸರ್ಕಾರ ರಚನೆ ಮಾಡಲು ಸಾಧ್ಯವಾಗುತ್ತದೆ. ಆಗ ನಾನು ನೀಡಿದ ವಚನ ಈಡೇರಿಸುವೆ, ಇಲ್ಲವಾದರೆ ಮುಂದೆ ಯಾವತ್ತೂ ತಮಗೆ ಮತ ಕೇಳಲು ಬರುವುದಿಲ್ಲ ಎಂದರು.
ಭರವಸೆಗಳ ಮಹಾಪೂರ:ಜೆಡಿಎಸ್ ಅಧಿಕಾರಕ್ಕೆ ಬಂದರೆ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ 1 ರಿಂದ 12ನೇ ತರಗತಿವರೆಗೆ ಆಂಗ್ಲ ಮಾಧ್ಯಮ ಪಬ್ಲಿಕ್ ಶಾಲೆ ತೆರೆಯುತ್ತೇನೆ. 5 ವರ್ಷದಲ್ಲಿ 6 ಸಾವಿರ ಗ್ರಾಪಂನಲ್ಲಿ ಉಚಿತ ಶಿಕ್ಷಣ ನೀಡುತ್ತೇನೆ. ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 30 ಆಕ್ಸಿಜನ್ ಬೆಡ್​ಗಳ ಆಸ್ಪತ್ರೆ ನಿರ್ಮಾಣ ಮಾಡುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.
ರಾಜ್ಯದ 15 ಕಡೆಗಳಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇವೆ. ಮೇ 8ರವರೆಗೂ ನಡೆಯಲಿರುವ ಜಲಧಾರೆ ಕಾರ್ಯಕ್ರಮದಲ್ಲಿ ಒಟ್ಟು 94 ಕಡೆ ಜಲ ಸಂಗ್ರಹ ಮಾಡಿ ಕೊಂಡು ಬೆಂಗಳೂರು ತಲುಪಲಾಗುತ್ತದೆ.
|ಕೆ.ಎನ್.ತಿಪ್ಪೇಸ್ವಾಮಿವಿಧಾನ ಪರಿಷತ್ ಸದಸ್ಯ
ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಅನುಷ್ಟಾನಕ್ಕೆ ಸಂಕಲ್ಪ ಮಾಡಿ ಜಾತ್ಯತೀತ ಜನತಾದಳ ಹಮ್ಮಿಕೊಂಡಿರುವ ‘ಜನತಾ ಜಲಧಾರೆ-ಗಂಗಾ ರಥಯಾತ್ರೆ’ಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಮಾಜಿ ಪಿಎಂ ಎಚ್.ಡಿ.ದೇವೇಗೌಡ ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಲಮಟ್ಟಿಯ ಲಾಲ್ ಬಹಾದ್ದೂರ್​ಶಾಸ್ತ್ರಿ ಜಲಾಶಯದಲ್ಲಿ ಜಲಸಂಗ್ರಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಸನ ಜಿಲ್ಲೆಯ ಹೇಮಾವತಿಯಲ್ಲಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಚಿಕ್ಕಬಳ್ಳಾಪುರ ಜಿಲ್ಲೆಯ ವಿಧುರಾಶ್ವತ್ಥದ ಉತ್ತರ ಪಿನಾಕಿನಿ ನದಿಯಲ್ಲಿ ಜಲ ಸಂಗ್ರಹ ಮಾಡಿದರು. ಶಾಸಕಿ ಅನಿತಾ ಕುಮಾರಸ್ವಾಮಿ, ಶಾಸಕ ಎ.ಮಂಜುನಾಥ್ ಮತ್ತಿತರ ಮುಖಂಡರು ಮೇಕೆದಾಟುನಲ್ಲಿ ಕಾವೇರಿ ನದಿ ನೀರು ಸಂಗ್ರಹ ಮಾಡಿದರು. ಮಾಂಜ್ರಾ ನದಿಯಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ, ಭೀಮಾ ನದಿಯಲ್ಲಿ ನಾಗನಗೌಡ ಕಂದಕೂರು, ಶರಣ ಗೌಡ ಪಾಟೀಲ ಕಂದುಕೂರು, ತುಂಗಭದ್ರಾ ಜಲಾಶಯದಲ್ಲಿ ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಶಾಸಕ ರಾಜಾ ವೆಂಕಟಪ್ಪ ನಾಯಕ, ಮಾಜಿ ಸಚಿವ ಎನ್.ಎಂ.ನಬಿ, ಹೇಮಾವತಿ ನದಿ ಉಗಮ ಸ್ಥಾನ ಜವಳಿಯಲ್ಲಿ ಮಾಜಿ ಸಚಿವ ಬಿ.ಬಿ.ನಿಂಗಯ್ಯ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಅಜಿತ್ ರಂಜನ್, ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿಯಲ್ಲಿ ಗಣಪಯ್ಯ ಹೆಗಡೆ, ಶಶಿ ಭೂಷಣ ಹೆಗಡೆ, ಯೋಗೇಶ್ ಶೆಟ್ಟಿ, ಸುಧಾಕರ್ ಶೆಟ್ಟಿ, ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಯೋಗೇಶ್ ಶೆಟ್ಟಿ, ಕೊಡಗಿನ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಜಿಲ್ಲೆಯ ಅನೇಕ ಮುಖಂಡರು ಜಲ ಸಂಗ್ರಹ ಮಾಡಿಕೊಂಡರು.
ರಾಜ್ಯಾಧ್ಯಕ್ಷರಾಗಿ ಇಬ್ರಾಹಿಂ ಪದಗ್ರಹಣ ಇಂದು:ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಭಾನುವಾರ ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ತಿಳಿಸಿದರು. ಭಾನುವಾರ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತಿತರರು ಭಾಗವಹಿಸಲಿದ್ದಾರೆ.
ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಎದುರೇ ಕಲ್ಲು ತೂರಾಟ; ವಾಹನ ಪಲ್ಟಿ ಮಾಡಿ ಆಕ್ರೋಶ, ಪರಿಸ್ಥಿತಿ ಉದ್ವಿಗ್ನ..

ಬಾಲಿವುಡ್​ ಮೇಲೆ ಅಣುಬಾಂಬ್​!; ನಿರ್ದೇಶಕ ರಾಮ್​ಗೋಪಾಲ್​ ವರ್ಮಾ ಹೀಗಂದಿದ್ದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + eleven =
Remember me
