ಬೆಂಗಳೂರು:ಕರೊನಾ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ವಿದ್ಯಾಗಮ ಶಿಕ್ಷಣದ ಹೆಸರಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಸಾವಿನ ಕಂದಕಕ್ಕೆ ನೂಕುತ್ತಿರುವ ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ? ಸರ್ಕಾರಕ್ಕೆ ಕನಿಷ್ಠ ಪರಿಜ್ಞಾನ ಬೇಡವೇ? ಎಂದು ಪ್ರಶ್ನಿಸಿದ್ದ ಮಾಜಿ ಸಿಎಂ ಎಚ್.​ಡಿ. ಕುಮಾರಸ್ವಾಮಿ, ನನ್ನ ಜೀವ ಹೋದರೂ ಪರವಾಗಿಲ್ಲ. ವಿದ್ಯಾಗಮ ಸ್ಥಗಿತಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುವೆ ಎಂದು ಎಚ್ಚರಿಕೆ ನೀಡಿದ್ದರು. ಇದೀಗ ಸರ್ಕಾರ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಿದ್ದು, ಈ ನಿರ್ಧಾರವನ್ನು ಅಬಿನಂದಿಸಿರುವ ಎಚ್​ಡಿಕೆ, ಎಸ್ಸೆಸ್ಸೆಲ್ಸಿ ವರೆಗೆ ಎಲ್ಲ ಮಕ್ಕಳನ್ನೂ ಪಾಸ್​ ಮಾಡಬೇಕು ಎಂದು ಸರ್ಕಾರಕ್ಕೆ ಮತ್ತೊಂದು ಪ್ರಮುಖ ಬೇಡಿಕೆ ಇಟ್ಟರು.
ಎಸ್​ಎಸ್​ಎಲ್​ಸಿ ವರೆಗೂ ಎಲ್ಲ ಮಕ್ಕಳನ್ನೂ ಪಾಸ್​ ಮಾಡಿ. ಕರೊನಾ ಹಿನ್ನೆಲೆ ಪ್ರಸಕ್ತ ಸಾಲಿನ ಶೈಣಿಕ ವರ್ಷಕ್ಕೆ ರಿಯಾಯಿತಿ ನೀಡಿ ಎಂದು ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ಒತ್ತಾಯಿಸಿದರು.
ಈಗಾಗಲೇ ಅಕ್ಟೋಬರ್​ ತಿಂಗಳಲ್ಲಿದ್ದೇವೆ. ಶೈಕ್ಷಣಿಕ ವರ್ಷ ಅರ್ಧ ಮುಗಿದಿದೆ. ಕರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಕೂಡ ಏರಿಕೆ ಆಗುತ್ತಿದೆ. ಈ ಸಂದರ್ಭದಲ್ಲಿ ಶಾಲೆಯನ್ನು ತಕ್ಷಣಕ್ಕೆ ತೆರೆಯುವುದು ಬೇಡ ಎಂದು ಸರ್ಕಾರಕ್ಕೆ ಮನವಿ ಮಾಡಿದ ಎಚ್​ಡಿಕೆ, ಕರೊನಾ ವಾರಿಯರ್ಸ್​ಗೆ ನೀಡುವ ಪರಿಹಾರವನ್ನು ಮೃತ ಶಿಕ್ಷಕರಿಗೂ ನೀಡಬೇಕು ಎಂದರು. ಈ ಬಗ್ಗೆ ಸಿಎಂಗೆ ಮನವಿ ಮಾಡುವುದಾಗಿ ತಿಳಿಸಿದರು.
ವಿದ್ಯಾಗಮ ಯೋಜನೆ ಜಾರಿ ಮಾಡುವಂತೆ ಸರ್ಕಾರ ಸೂಚನೆ ನೀಡುವ ಮೂಲಕ ಈ ಕಾರ್ಯಕ್ರಮವನ್ನು ಬಲವಂತವಾಗಿ ಶಿಕ್ಷಕರ ಮೇಲೆ ಹೇರಿತ್ತು. ಮಾಧ್ಯಮಗಳು ಅಭಿಯಾನ ಶುರು ಮಾಡಿದ ಮೇಲೆ ಸರ್ಕಾರ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳು, ಸಿಎಂ, ಸಚಿವರು ಹಾಗೂ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಅಭಿನಂದನೆ ಸಲ್ಲಿಸುವೆ ಎಂದು ಹೇಳಿದರು.
ವಿದ್ಯಾಗಮ ತಾತ್ಕಾಲಿಕ ಸ್ಥಗಿತ!

ಮಟಮಟ ಮಧ್ಯಾಹ್ನ ಒಂದೇ ಕುಟುಂಬದ ಮೂರು ಮಕ್ಕಳ ಪ್ರಾಣ ಹೊತ್ತೊಯ್ದ ಜವರಾಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 5 =
Remember me
