ಮೈಸೂರು:ಹಾಸನ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ಕುರಿತು ಬಿಜೆಪಿಯವರು ಗೊಂದಲ ಸೃಷ್ಟಿಸುತ್ತಿದ್ದಾರೆ. ಈ ಬಗ್ಗೆ ನಮ್ಮ ಕುಟುಂಬದಲ್ಲಿ ಸಮಸ್ಯೆ ಇಲ್ಲ. ಟಿಕೆಟ್​ ಹಂಚಿಕೆಯಲ್ಲಿ ಮೊದಲ ಆದ್ಯತೆ ಕಾರ್ಯಕರ್ತರಿಗೆ, ನಂತರ ನಮ್ಮ ಕುಟುಂಬದವರಿಗೆ. ಎಲ್ಲರಿಗೂ ಇರುವಂತೆ ಭವಾನಿ ರೇವಣ್ಣ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಆಸೆ ಇದೆ. ಇದು ಸಹಜ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಅರಕಲಗೂಡು ಕ್ಷೇತ್ರದ ಎ.ಟಿ.ರಾಮಸ್ವಾಮಿ, ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಜೆಡಿಎಸ್​ನಿಂದ ಹೊರಹೋಗಬಹುದು. ಇದು 2 ವರ್ಷದಿಂದ ನಡೆಯುತ್ತಿರುವ ಪ್ರಕ್ರಿಯೆ. ಇದು ಹೊಸದಲ್ಲ. ಸಮಯಕ್ಕೆ ತಕ್ಕಂತೆ ರಾಜಕೀಯ ಅನುಕೂಲಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
“ಟಿಪ್ಪುವನ್ನು ಕೊಂದವರು ಉರಿಗೌಡ ಮತ್ತು ದೊಡ್ಡನಂಜೇಗೌಡ’ ಎಂದು ಬಿಜೆಪಿಯವರು ಹೇಳುವ ಮೂಲಕ ಹೊಸ ಇತಿಹಾಸ ಸೃಷ್ಟಿಸಲು ಹೊರಟಿದ್ದಾರೆ. ಹಳೇ ಚರಿತ್ರೆಯನ್ನು ಗೋರಿ ಮಾಡಿದ್ದು, ಈ ರೀತಿಯ ಸುಳ್ಳಿನ ಕಥೆ ಅವರಿಗೆ ಮುಳುವಾಗಲಿದೆ. ಉರಿಗೌಡ ಮತ್ತು ದೊಡ್ಡ ನಂಜೇಗೌಡ ಕುರಿತು ನಾನೂ ಸಂಶೋಧನೆ ಮಾಡುವೆ ಎಂದು ಲೇವಡಿ ಮಾಡಿದರು.
ಇದನ್ನೂ ಓದಿ:ಸಾಧು ಕೋಕಿಲ ಕೆಪಿಸಿಸಿ ಸಾಂಸ್ಕೃತಿಕ ಘಟಕದ ನೂತನ ಅಧ್ಯಕ್ಷ; ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎಂದ ಡಿಕೆಶಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
