ಬಳ್ಳಾರಿ:2008ರಲ್ಲಿ ಎಲ್ಲರೂ ಸೇರಿಕೊಂಡ ನನ್ನನ್ನು ದಾರಿ ತಪ್ಪಿಸಿದರು. ನೆನಪಿರಲಿ, 2028ರಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳನ್ನು ಜನರೇ ತಿರಸ್ಕಾರ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಅವರು ಬಳ್ಳಾರಿ ಜಿಲ್ಲೆಯ ಕುರೆಕೊಪ್ಪ ಗ್ರಾಮದಲ್ಲಿ ಮಾತನಾಡುತ್ತಾ, ನನಗೆ ಎರಡೂ ಪಕ್ಷದ ಜತೆಗೆ ಸಮ್ಮಿಶ್ರ ಸರಕಾರ ನಡೆಸಿ ಅನುಭವ ಇದೆ. ಸಮ್ಮಿಶ್ರ ಸರಕಾರದ ಆಡಳಿತದಿಂದ ಬಡತನ ಹೋಗಲಾಡಿಸಲು ಸಾಧ್ಯವಿಲ್ಲ. 2018ರಲ್ಲಿ ಕಾಂಗ್ರೆಸ್ ಜತೆಗೆ ಸಮ್ಮಿಶ್ರ ಸರಕಾರವೆಂದು ಹೋದಾಗ ನನ್ನನ್ನು ಗುಲಾಮನಂತೆ ನಡೆಸಿಕೊಂಡರು ಎಂದು ಹೇಳಿದರು.
ಬಳ್ಳಾರಿಯಲ್ಲಷ್ಟೇ ಅಲ್ಲ, ಎಲ್ಲಾ ಇಲ್ಲೆಯಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ರಾಷ್ಟ್ರೀಯ ಪಕ್ಷಗಳು ಹೈಜಾಕ್ ಮಾಡುತ್ತಾರೆ. ಇನ್ನೊಂದು ವಾರದಲ್ಲಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇನೆ. 2018ರಲ್ಲಿ ಷರತ್ತು ಹಾಕು ಕಾಂಗ್ರೆಸ್ ನನಗೆ ಅಧಿಕಾರ ವಹಿಸಿತು. ಸ್ವತಂತ್ರವಾಗಿ ನನಗೆ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಬಾರಿ ಸಮ್ಮಿಶ್ರ ಸರ್ಕಾರ ಮಾಡಿ‌ ಕಾಂಗ್ರೆಸ್​ನವರು ಕುತ್ತಿಗೆ ಕೊಯ್ದರು. ಕಾಂಗ್ರೆಸ್ ಬೆಂಬಲ ಕೊಡದೇ ನಿಖಿಲ್ ಕುಮಾರಸ್ವಾಮಿ ಸೋತರು. ಅಂದು ದೇವೇಗೌಡರು ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿ ಮಾಡಿ, ಎಲ್ಲಾ ಪಕ್ಷಕ್ಕೂ ಅಸ್ತಿತ್ವ ಕೊಟ್ಟಿದ್ದರು. ಮುಖ್ಯಮಂತ್ರಿ ಆಗಲೆಂದೇ ಸಿದ್ದರಾಮಯ್ಯ ಕಾಂಗ್ರೆಸ್​ಗೆ ಹೋಗಿರುವುದು ಎಂದು ಟೀಕಿಸಿದರು.
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:5 × 4 =
Remember me
