ಬೆಂಗಳೂರು:ಕರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈಗಿರುವ ಮೂರ್ನಾಲ್ಕು ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲು ಬೆಡ್​ಗಳಿಲ್ಲ, ವೆಂಟಿಲೇಟರ್ ಕೊರತೆ ಕಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ಈ ಸಮಸ್ಯೆಗೆ ಸ್ವಯಂ ಪ್ರೇರಿತ ಲಾಕ್​ಡೌನ್ ಒಂದೇ ಪರಿಹಾರ ಎಂದಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ನಿವಾಸಿಗಳಿಗೆ ಕೋವಿಡ್​19 ನಿಂದ ಪಾರಾಗಲು ಉಳಿದಿರುವುದು ಒಂದೇ ಒಂದು ದಾರಿ ಎಂದರೆ, ಮನೆಯಲ್ಲೇ ಉಳಿದು ಸ್ವಯಂ ಘೋಷಿತ ಬಂದ್ ಆಚರಿಸಿ. ಪ್ರಾಣಕ್ಕಿಂತ ಹಣ ಮುಖ್ಯವಲ್ಲ.‌ ಜೀವ ಇದ್ದರೆ ಹೇಗಾದರೂ ಬದುಕಬಹುದು. ನಿಮ್ಮ ಜೀವ-ಜೀವನ ನಿಮ್ಮ ಕೈಯಲ್ಲೇ ಇದೆ. ರಾಜ್ಯ ಸರ್ಕಾರ ಕೂಡ ಪರೋಕ್ಷವಾಗಿ ಇದನ್ನೇ ಹೇಳುತ್ತಿದೆ. ಕರೊನಾ ವೈರಸ್ ಸಮೂಹ ಪ್ರಸರಣದ ಈಗಿನ ಸ್ಥಿತಿಯಲ್ಲಿ ಮನೆಯಲ್ಲಿರುವುದೇ ‘ಮನೆ ಮದ್ದು’ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿರಿಮತ್ತೆ 20 ದಿನ ದೇಶಾದ್ಯಂತ ಕಂಪ್ಲೀಟ್​ ಲಾಕ್​ಡೌನ್​?
ಈ ಸೋಂಕಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸರ್ಕಾರ ನಿಗದಿಪಡಿಸಿರುವುದು ದಿನಕ್ಕೆ 10-15 ಸಾವಿರ ರೂಪಾಯಿ. ಈ ದರ ಬಡವರಿಗಿರಲಿ, ಮೇಲ್ಮಧ್ಯಮ ವರ್ಗದವರಿಗೂ ಭರಿಸಲು ಸಾಧ್ಯವಾಗದು ಎಂದು ಎಚ್​ಡಿಕೆ ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ನಿವಾಸಿಗಳೇ, ನೀವು COVID-19 ನಿಂದ ಪಾರಾಗಲು ಈಗ ಉಳಿದಿರುವುದು ಒಂದೇ ದಾರಿ. ಮನೆಯಲ್ಲೇ ಉಳಿದು ನೀವೇ ಸ್ವಯಂ ಘೋಷಿತ ಬಂದ್ ಆಚರಿಸಿ. ಪ್ರಾಣಕ್ಕಿಂತಲೂ ಹಣ ಮುಖ್ಯವಲ್ಲ.‌ ಜೀವ ಇದ್ದರೆ ಹೇಗಾದರೂ ಬದುಕಬಹುದು. ನಿಮ್ಮ ಜೀವ ಜೀವನ ಈಗ ನಿಮ್ಮ ಕೈಯಲ್ಲಿದೆ.2/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)June 24, 2020

ಒಂದು ಕುಟುಂಬದ ನಾಲ್ಕು ಜನರಿಗೆ ಕರೊನಾ ಬಂದರೆ ಖಾಸಗಿ ಆಸ್ಪತ್ರೆಯಲ್ಲಿ 15 ದಿನಗಳ ಚಿಕಿತ್ಸೆಗೆ ಸರ್ಕಾರ ನಿಗದಿ ಪಡಿಸಿರುವ ದರದ ಪ್ರಕಾರ 5-6 ಲಕ್ಷ ರೂ. ಬೇಕು. ಬಡವರು ಮಧ್ಯಮ ವರ್ಗದವರು ಎಲ್ಲಿಂದ ತರುತ್ತಾರೆ? ಸರ್ಕಾರ ಕೈಚೆಲ್ಲಿ ಕುಳಿತಿರುವಾಗ ನಮ್ಮ ಜೀವ ನಾವೇ ಉಳಿಸಿಕೊಳ್ಳಬೇಕು. ದಯಮಾಡಿ ಜಾಗ್ರತೆಯಿಂದ ಇರಿ. ಇದು ರಾಜ್ಯದ ಜನತೆಗೆ ನನ್ನ ಕಳಕಳಿಯ ಮನವಿ ಎಂದು ಕುಮಾರಸ್ವಾಮಿ ಕೋರಿದ್ದಾರೆ.
ಕೋರ್ಟ್​ ಸಿಬ್ಬಂದಿಗೆ ಕರೊನಾ ಪಾಸಿಟಿವ್​, ನ್ಯಾಯಾಧೀಶರಿಗೂ ಟೆನ್ಷನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
