ಬೆಂಗಳೂರು:ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಬಿಟ್ಟಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್​ಗೆ ಕರೆ ನೀಡಿವೆ. ಇನ್ನು ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ಕಾಂಗ್ರೆಸ್​ ಪಕ್ಷ ಡಿಎಂಕೆಯ ಬಿ ಟೀಂ. ಕರ್ನಾಟಕದಲ್ಲಿರುವುದು ಸ್ಟಾಲಿನ್​ ಬಾಡಿಗೆ ಸರ್ಕಾರ ಎಂದು ಆರೋಪಿಸಿದ್ದಾರೆ.
ಇದೆಂಥಾ ಚೋದ್ಯ ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕಾಂಗ್ರೆಸ್​ ಸರ್ಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ ಎಂದು ಪ್ರಶ್ನಿಸಿದ್ದಾರೆ.
ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು@INCKarnatakaಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ,…
ಇದನ್ನೂ ಓದಿ:ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್; ವಿವಾದ ಸೃಷ್ಟಿಸಿದ ಮಗಳ ಹೆಸರು
ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗಾರರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರಕಾರವೋ ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ ಎಂದು ಕಿಡಿಕಾರಿದ್ದಾರೆ.
ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − two =
Remember me
