ಬೆಂಗಳೂರು:ದಿನದಿಂದ ದಿನಕ್ಕೆ ಕಾಂಗ್ರೆಸ್​ ಸರ್ಕಾರದ ಭ್ರಷ್ಟಚಾರವೂ ಪ್ಯಾನ್​ ಇಂಡಿಯಾ ಸಿನಿಮಾದಂತೆ ಹಲವು ಭಾಗಗಳಲ್ಲಿ ತೆರೆದುಕೊಳ್ಳುತ್ತಿದೆ. ಪ್ರತಿ ಚಿತ್ರಕ್ಕೂ ಕ್ಲೈಮ್ಯಾಕ್ಸ್​ ಇರುವಂತೆ ಕಾಂಗ್ರೆಸ್​​ನ ಲಂಚಾವತಾರಕ್ಕೆ ಶೀಘ್ರವೇ ಕೊನೆ ಬೀಳಲಿದೆ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಮಾಡಿ ಮಾತನಾಡಿದಿ ಮಾಜಿ ಸಿಎಂ ಎಚ್​.ಡಿ.ಕೆ ಕಾಂಗ್ರೆಸ್​ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.
ನನಗೆ ಬುದ್ಧಿಭ್ರಮಣೆಯಾಗಿದೆ ಎಂದು ಕಾಂಗ್ರೆಸ್​ ನಾಯಕರೊಬ್ಬರು ಹೇಳಿದ್ದಾರೆ. ನನ್ನ ಬಗ್ಗೆ ಅವರು ಹೆಚ್ಚಾಗಿ ಚಿಂತಿಸುವುದು ಬೇಡ. ನಮ್ಮ ಕುಟುಂಬದಲ್ಲಿ ಸಾಕಷ್ಟು ಜನ ವೈದ್ಯರಿದ್ದಾರೆ ಅವರ ಬಳಿ ತೋರಿಸಿಕೊಳ್ಳುತ್ತೇನೆ. ಆದರೆ, ನೀವುಗಳು ಮತ ಹಾಕಿದ ಜನರಿಗೆ ಬುದ್ಧಿಭ್ರಮಣೆ ಮಾಡುವುದು ಬೇಡ ಎಂದಿದ್ದಾರೆ.
ಕಾಂಗ್ರೆಸ್​ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಹಾಗೂ ಡಿಸಿಎಂ ತಮ್ಮ ಭಾಷಣದಲ್ಲಿ ವೀರಾವೇಶದ ಮಾತುಗಳನ್ನಾಡಿದ್ದಾರೆ. ಪೆನ್​ಡ್ರೈವ್​ಗೆ ಪ್ರತಿಯಾಗಿ ಮುಖ್ಯಮಂತ್ರಿಗಳು ಪೆನ್​ ತೋರಿಸುತ್ತಾ ಅಣಕಿಸಿದ್ದಾರೆ. ನಾನು ಕೊಡುವ ಸಾಕ್ಷ್ಯಕ್ಕೆ ಪ್ರತಿಯಾಗಿ ಆರೋಪಿತರ ವಿರುದ್ಧ ಕ್ರಮ ಜರುಗಿಸುವ ಎದೆಗಾರಿಕೆ ಮುಖ್ಯಮಂತ್ರಿಗಳಿಗೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.
ಗುತ್ತಿಗೆದಾರರು ಕಾಂಗ್ರೆಸ್​ ಬಗ್ಗೆ ಇದು 40% ಸರ್ಕಾರ ಎಂದು ಹೇಳುತ್ತಿದ್ದಾರೆ. ಬೆಂಕಿಯಿಂದ ಬಾಣಲೆಗೆ ಬಿದ್ದೆವು ಎಂದವರೇ ಈಗ ಉಲ್ಟಾ ಹೊಡೆದಿದ್ದಾರೆ. ಗುತ್ತಿಗೆದಾರರು ಗಟ್ಟತನದಿಂದ ದೈರ್ಯವಾಗಿ ಮಾತನಾಡಬೇಕು. ನಾನು ವಿದೇಶ ಪ್ರವಾಸಕ್ಕೆ ಹೋಗುವ ಮುನ್ನ ನಮ್ಮ ಮನೆಗೆ ಬಂದು ನೋವನ್ನು ತೋಡಿಕೊಂಡರು. ಅವರಿಗೆ ಬೆಂಬಲ ನೀಡುವುದಾಗಿ ನಾನು ಭರವಸೆ ಕೊಟ್ಟಿದ್ದೆ.
ಈಗ ಅವರ ವರಸೆ ಬದಲಾಗಿದ್ದು, ಅಜ್ಜಯ್ಯನ ಮೇಲೆ ಪ್ರಮಾಣ ಮಾಡಿ ಎಂದವರು ಈಗ ತಣ್ಣಗಾಗಿದ್ದಾರೆ. ಅವರ ಮೇಲೆ ಒತ್ತದ ಹಾಕಿ ಸುಮ್ಮನಾಗಿಸಲು ಮಧ್ಯಸ್ಥಿಕೆ ವಹಿಸಿದ್ದು ಯಾರು. ಆತ್ಮಹತ್ಯೆ ಪ್ರಕರಣದಲ್ಲಿ ದುಡ್ಡು ಕೊಟ್ಟು ಸರಿಪಡಿಸಲಾಗಿದೆ ಎಂದು ಮಾಜಿ ಶಾಸಕರು ಆರೋಪಿಸಿದ್ದಾರೆ. ಕಾಂಗ್ರೆಸ್​ನವರು ದುಡ್ಡಿನಿಂದ ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದಾರೆ.
ಇದನ್ನೂ ಓದಿ:ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನಿವೃತ್ತ ಪಿಎಸ್ಐ ಅರೆಸ್ಟ್​
ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕನಾಗಿದ್ದಾಗ ಆರೋಪ ಮಾಡಿದ್ದಾರಷ್ಟೇ ಹೊರತು ಯಾವುದೇ ದಾಖಲೆ ಬಿಡುಗಡೆ ಮಾಡಲಿಲ್ಲ. ಅಂತಹವರು ಇನ್ನೊಬ್ಬರ ಯೋಗ್ಯತೆ ಬಗ್ಗೆ ಮಾತನಾಡುತ್ತಿದ್ದಾರೆ. ಗ್ಯಾರಂಟಿಗಳ ಬಗ್ಗೆ ದಿನ ಬೆಳಗಾದರೆ ಹೇಳಿಕೊಳ್ಳುವ ಕಾಂಗ್ರೆಸ್​ ನಾಯಕರು ಯೋಜನೆಗೆ ಅವರ ಪಕ್ಷದ ದುಡ್ಡನ್ನು ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ಉಪಮುಖ್ಯಮಂತ್ರಿಗಳು ನೋಡಿದರೆ ನಮ್ಮ ಅಜ್ಜಯ್ಯನ ಶಕ್ತಿ ಇವರಿಗೆ ತಿಳಿದಿಲ್ಲ ಎಂದು ಹೇಳುತ್ತಿದ್ದಾರೆ. ಇವರೊಬ್ಬರಿಗೆ ಅಲ್ಲ ನಮ್ಮ ಮೇಲೂ ಅಜ್ಜಯ್ಯನ ಆಶೀರ್ವಾದ ಇದೆ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಕಾಂಗ್ರೆಸ್​ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fifteen =
Remember me
