ಬೆಂಗಳೂರು:“ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ. ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ, ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ” ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಟ್ವೀಟ್​ ಮಾಡಿ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ಹಣಗಿಯಿಂದ ಲಿಂಗಸುಗೂರಿಗೆ ಜೀವದ ಹಂಗು ತೊರೆದು ಪ್ರಯಾಣ
“ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್‌ ಅಲ್ಲ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷ ಇರುತ್ತವೆ. ಇದು ಗೊತ್ತಿಲ್ಲದಷ್ಟು ಅಜ್ಞಾನವೇ? ಪ್ರಶ್ನೆ ಮಾಡಬೇಕು ಎಂತಲೇ ಜನ ನನ್ನನ್ನು ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ. ಇವರನ್ನು ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ತಲೆ ನಿಲ್ಲುತ್ತಿಲ್ಲ. ಚಕ್ರ ತಿರುಗಲು ಶುರುವಾಗಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ. ಸ್ವಲ್ಪ ಸಮಯ ಬೇಕಷ್ಟೇ, ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ” ಎಂದರು.
“ಪಂಚರತ್ನಗಳು ರಾಜ್ಯದ ಸಮಗ್ರ ಅಭಿವೃದ್ಧಿಗೆ ನಾನು ರೂಪಿಸಿದ್ದ ಪಂಚಸೂತ್ರಗಳು. ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ಶಾಶ್ವತ ‘ಆರ್ಥಿಕವೈಕಲ್ಯ’ರನ್ನಾಗಿಸುವ ತಾತ್ಕಾಲಿಕ ತಂತ್ರಗಳಷ್ಟೇ. 75 ವರ್ಷಗಳಿಂದಲೂ ಇದನ್ನೇ ಮಾಡಿದೆ. ಜನರ ಕೈಲಿ ಭಿಕ್ಷಾಪಾತ್ರೆ ಇದ್ದರೆ, ವೋಟಿನ ಜೋಳಿಗೆ ಭರ್ತಿಯಾಗುತ್ತದೆ ಎನ್ನುವ ದುಷ್ಟಬುದ್ಧಿ ಇವರದ್ದು. ಜನರು ಸ್ವಾವಲಂಭಿಗಳಾಗಿ ಗೌರವಯುತ ಜೀವನ ನಡೆಸಬೇಕು ಎನ್ನುವ ಹಂಬಲ ನನ್ನದಾಗಿತ್ತು. ಡೂಪ್ಲಿಕೇಟ್‌ ಸಿಎಂ ಸಹೋದ್ಯೋಗಿ ಸಚಿವರೊಬ್ಬರೇ ಹೇಳಿದ್ದರಲ್ಲ. ‘ಎಲೆಕ್ಷನ್‌ ಗೆಲ್ಲಬೇಕಾದರೆ ಗ್ಯಾರಂಟಿಗಳಂಥ ಚೀಫ್‌ ಗಿಮಿಕ್‌ ಮಾಡಲೇಬೇಕು” ಎಂದು. ಗ್ಯಾರಂಟಿಗಳು ಚೀಫ್‌ ಗಿಮಿಕ್‌ ಎನ್ನುವ ಆ ಸಚಿವರ ಮಾತಿಗೆ ನನ್ನ ಸಹಮತವಿದೆ” ಎಂದರು.
ಇದನ್ನೂ ಓದಿ:ಒಂದೆರಡು ಬೈ ಎಲೆಕ್ಷನ್ ಗೆಲ್ಲಿಸಿದಾಕ್ಷಣ ದೊಡ್ಡ ಸಂಘಟನಾ ಚುತುರ ಎನ್ನಲಾಗದು; ಕೆ.ಎನ್.ರಾಜಣ್ಣ ವ್ಯಂಗ್ಯ
“ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಅನುಮಾನವೇ ಇಲ್ಲ. ಯಾವ ಗ್ಯಾರಂಟಿಯೂ ಸಮರ್ಪಕ ಜಾರಿಯಾಗಿಲ್ಲ. ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಹೊರಡಿಸಿ ಶ್ವೇತಪತ್ರವನ್ನು. ಬನ್ನಿ ಚರ್ಚೆಗೆ, ನಾನು ತಯಾರಿದ್ದೇನೆ. ಅಧಿವೇಶನದಲ್ಲೂ ದಾಖಲೆ ಸಮೇತ ಚರ್ಚೆಗೆ ಸಿದ್ಧನಿದ್ದೇನೆ, ಉತ್ತರಿಸಿ. ಚನ್ನಪಟ್ಟಣದ ನನ್ನ ಜನರೂ ಮಾಹಿತಿ ನೀಡಿದ್ದಾರೆ. ರಾಜ್ಯದ ಉಳಿದ 223 ಕ್ಷೇತ್ರಗಳ ಜನರು ಕೊಟ್ಟ ವಿವರವೂ ನನ್ನಲ್ಲಿದೆ. ನೀವು ಒಳಗೊಳಗೆ ಮಾಡುತ್ತಿರುವ ಗಿಲೀಟುಗಳ ಮಾಹಿತಿಯೂ ಇದೆ. ಚರ್ಚೆ ಮಾಡೋಣ” ಎಂದು ಹೇಳಿದರು.
ಇದನ್ನೂ ಓದಿ:ರಾತ್ರಿಯಲ್ಲಿ ಆಗಾಗ್ಗೆ ಮೂತ್ರ ವಿಸರ್ಜನೆ ಮಾಡುತ್ತಿದ್ದೀರಾ? ಆರೋಗ್ಯದ ಬಗ್ಗೆ ಇರಲಿ ಎಚ್ಚರ…
“ಕೋಟಿ ರೂಪಾಯಿ ಕೊಟ್ಟು ಗ್ಯಾರಂಟಿ ಸ್ಕೀಮುಗಳ ಬಗ್ಗೆ ಸಮೀಕ್ಷೆ ಮಾಡಿಸಿಕೊಂಡರಲ್ಲ, ಚನ್ನಪಟ್ಟಣದ ಜನರು ಏನು ಹೇಳಿದ್ದಾರೆಯೇ ಎಂಬ ಮಾಹಿತಿ ಅದರಲ್ಲಿ ಇದೆಯಾ? ಕೂಸು ಹುಟ್ಟುವ ಮುನ್ನವೇ ಕುಲಾವಿಯೇ? ಗ್ಯಾರಂಟಿ ಜಾರಿಗೆ ಮೊದಲೇ ಸಮೀಕ್ಷೆ ಪ್ಲ್ಯಾನ್‌ ಮಾಡಿಕೊಂಡಿದ್ದರಲ್ಲ, ಯಾಕೆ? ನಿಮ್ಮ ಯೋಗ್ಯತೆಗೆ ಇನ್ನು ‘ಯುವನಿಧಿ’ ಬಂದೇ ಇಲ್ಲ. ಅದು ಬರುತ್ತೋ ಇಲ್ಲವೋ ಗೊತ್ತಿಲ್ಲ. ಅದನ್ನು ಚನ್ನಪಟ್ಟಣದ ಜನರನ್ನೇ ಕೇಳಬೇಕೆ?”” ಎಂದು ಟ್ವೀಟ್​ ಮಾಡಿದ್ದಾರೆ.
ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ.*ಇದು…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)November 13, 2023

“ಇವರ ರಾಜಕೀಯ ಸ್ವಾರ್ಥಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳನ್ನು ಬಲಿಗೊಟ್ಟು, ‘ರಾಮನಗರ’ ಹೆಸರಿಗೆ ಕೊಕ್‌ ಕೊಡಲು ಹೊರಟಿದ್ದಾರೆ. ಆಯ್ಯೋ ದೇವೆರೇ, ಕಾಂಗ್ರೆಸ್​ ಸರಕಾರದಲ್ಲಿ ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ” ಎಂದು ಟ್ವೀಟ್ ಮುಖೇನ ಲೇವಡಿ ಮಾಡಿದ್ದಾರೆ.
ವಿಜಯ್​ ನಟನೆಯ ‘ದಳಪತಿ 68’ನಿಂದ ಹೊರಬಿತ್ತು ಹೊಸ ಅಪ್ಡೇಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 12 =
Remember me
