ಬೆಂಗಳೂರು:ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು ನಿಮ್ಮ ಯೋಗ್ಯತೆಗೆ ತಕ್ಕುದಲ್ಲ ಸಿದ್ದರಾಮಯ್ಯನವರೇ. ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆಯೂ ನಿಮಗಿದೆ ಎಂದು ನನಗೆ ಅನಿಸುವುದಿಲ್ಲ ಎಂದು ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಇದನ್ನೂ ಓದಿ:ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ: ಕೇಂದ್ರ ಸಚಿವ ಎಚ್‌ಡಿಕೆಗೆ ಸಿಎಂ ಸಿದ್ದರಾಮಯ್ಯ ಸವಾಲು
“ಮೂಡಾದವರು ನನಗೆ ನಿವೇಶನ ಹಂಚಿದ್ದಾರೆ, ನಿಜ. ಸ್ವಾಧೀನ ಪತ್ರವವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ. ಹಾಗಾದರೆ, ಇದರಲ್ಲಿ ‘ಸಿದ್ದರಾಮಯ್ಯ ಮಾಡಿದ ಸಂಶೋಧನೆ ಏನಿದೆ?’ ‘ಸುಳ್ಳು ಸಂಶೋಧಕ ಸಿದ್ದರಾಮಯ್ಯ’ನವರೇ, ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕೊಳಕನ್ನು ನನ್ನ ಮೇಲೆ, ಇನ್ನಿತರರ ಮೇಲೆ ಸಿಡಿಸಲು ಹೊರಟು ಲಜ್ಜೆಗೇಡಿತನದ ಪರಮಾವಧಿ ಮೆರೆದಿದ್ದೀರಿ” ಎಂದರು.
“ಮೂಡಾ ಭೂಮಿಯನ್ನು ಮುಖ್ಯಮಂತ್ರಿ ಕುಟುಂಬ ಮುಕ್ಕಿ ತಿಂದಿದೆ ಎಂದು ಇಡೀ ದೇಶ ಮಾತನಾಡುತ್ತಿದೆ. ದಾಖಲೆಗಳು ಹಾದಿಬೀದಿಯಲ್ಲಿ ಹೊರಳಾಡುತ್ತಿವೆ! ನಿಮ್ಮ ಸಮಾಜವಾದಿ ಮುಖವಾಡ, ಅಹಿಂದಾ ಅಲಂಕಾರ, ಸತ್ಯವಂತನ ಸಿಂಗಾರ. ಇದೆಲ್ಲವೂ ಕಳಚಿಬಿದ್ದಿದೆ. ಅಸಹ್ಯವಾಗುವಷ್ಟು ಅನಾಚಾರ ಮಾಡಿ ಅಹಿಂದ ರಕ್ಷಣೆ ಪಡೆಯಲು ಯತ್ನಿಸುತ್ತಿರುವ ನಿಮ್ಮ ಅಸಹಾಯಕತೆ ನನಗೆ ಅರ್ಥವಾಗುತ್ತದೆ. ಪಾಪ, ನಿಮ್ಮ ಪಕ್ಷದವರೇ ನಿಮಗೆ ಶರಪಂಜರ ಸೃಷ್ಟಿಸುತ್ತಿದ್ದಾರೆ” ಎಂದು ಹೇಳಿದರು.
ಇದನ್ನೂ ಓದಿ:ಪ್ಯಾರಿಸ್​ ಒಲಿಂಪಿಕ್ಸ್: ಕಂಚಿನ ಪದಕ ಗೆದ್ದ ಮನು-ಸರಬ್ಜೋತ್ ಸಿಂಗ್​ಗೆ ‘ನಮೋ’ ಅಭಿನಂದನೆ
“ಕುಮಾರಸ್ವಾಮಿ ರಾಜ್ಯಕ್ಕೆ ಕೈಗಾರಿಕೆ ತರಲಿ, ರಾಜ್ಯಕ್ಕೆ ಒಳ್ಳೆಯದು ಮಾಡಲಿ ಎನ್ನುತ್ತೀರಿ. ಅದು ನನಗೆ ಗೊತ್ತಿದೆ. ನಾನು ಕೇಂದ್ರ ಸಚಿವನಾಗಿ ಇನ್ನೂ ಎರಡು ತಿಂಗಳಾಗಿಲ್ಲ. ರಾಜ್ಯದ ಕೆಲಸ ಮಾಡೋಣ ಎಂದರೆ ನಿಮ್ಮ ಅಸಹಕಾರ, ಅಸೂಯೆ ಅಡ್ಡಿ. ಒಂದು ನಾಲಿಗೆ ಮೇಲೆ ಸಹಕಾರ, ಅಸಹಕಾರ. ಇದು ಹೇಗೆ ಸಾಧ್ಯ ಸಿದ್ದರಾಮಯ್ಯನವರೇ? ಎರಡು ಮುಖ, ಎರಡು ನಾಲಿಗೆ, ಎರಡು ವ್ಯಕ್ತಿತ್ವ, ಎರಡು ನೀತಿ ನಿಮ್ಮ ಐಡಿಯಾಲಜಿ. ಆ ಸಿದ್ಧಾಲಜಿ ನನಗೆ ಗೊತ್ತಿಲ್ಲದಲ್ಲ ಸಿದ್ದರಾಮಯ್ಯನವರೇ.. ರಾಜ್ಯಕ್ಕೆ ಒಳ್ಳೆಯದಾಗಲಿ ಎನ್ನುವ ಆಶಯ ಇರಲಿ, ನನ್ನ ಮೇಲೆ ಅಸೂಯೆ ಏಕೆ? ನಿಮ್ಮ ಸಕಲ ಗುಣಗಳ #Siddalogy ನನಗೆ ಚೆನ್ನಾಗಿಯೇ ಗೊತ್ತಿದೆ” ಎಂದು ವ್ಯಂಗ್ಯವಾಡಿದರು.
ಪ್ಯಾರಿಸ್​ ಒಲಿಂಪಿಕ್ಸ್: ಇತಿಹಾಸ ಬರೆದ ಮನು ಭಾಕರ್! ಭಾರತಕ್ಕೆ ​ಮತ್ತೊಂದು ಪದಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + three =
Remember me
