ಬೆಂಗಳೂರು:ರಾಜ್ಯದಿಂದ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವ ಬಗ್ಗೆ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್​ ಹೇಳಿಕೆಯನ್ನು ವಿರೋಧಿಸಿ ಟ್ವೀಟ್​ ಮಾಡಿರುವ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ತಾಕತ್ತಿದ್ದರೆ ಕೋರ್ಟಿಗೆ ಹೋಗಿ ಎಂದು ರೈತರಿಗೆ ಉಪ ಮುಖ್ಯಮಂತ್ರಿಗಳು ಹೇಳಿರುವುದು ದರ್ಪ, ದುರಹಂಕಾರದ ಪರಾಕಾಷ್ಠೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:‘ಹೆಂಡತಿ ಸೀರೆ ಕದ್ದ’ ಎಂದು ಆರೋಪಿಸಿ ನೆರೆಮನೆಯ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ
“ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ, ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ ಎಂಬುದನ್ನು  ಸ್ಪಷ್ಟಪಡಿಸಬೇಕಿದೆ. ಕಾವೇರಿ ಕೀಲಿ ಕೇಂದ್ರ ಬಳಿ ಇದೆ ಎಂದಾದರೆ, ಇವರ ಹೊಣೆ ಏನು? ಆ ಕೀಲಿ ಈಗ ಸ್ಟಾಲಿನ್ ಕೈಯ್ಯಲ್ಲಿದೆಯೋ ಅಥವಾ ಸೋನಿಯಾ ಗಾಂಧಿ ಕೈಯ್ಯಲ್ಲಿದೆಯೋ? ತಾಕತ್ತಿದ್ದರೆ ಕೋರ್ಟಿಗೆ ಹೋಗಿ ಎಂದು ರೈತರಿಗೆ ಡಿಸಿಎಂ ಹೇಳಿರುವುದು ದರ್ಪ, ದುರಹಂಕಾರದ ಪರಾಕಾಷ್ಠೆ. ನಿತ್ಯವೂ ಸಾವಿರಾರು ಕ್ಯೂಸೆಕ್ ಕಾವೇರಿ ನೀರು ನೆರೆರಾಜ್ಯಕ್ಕೆ ಹರಿದು ಹೋಗುತ್ತಿದೆ. ಇನ್ನೂ 10 ಟಿಎಂಸಿ ಬಿಡುತ್ತೇವೆ ಎಂದು ಅವರು ಹೇಳಿರುವುದು ಸರಿಯಲ್ಲ?” ಎಂದು ಹೇಳಿದ್ದಾರೆ.
ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿವರ್ಯರು, ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ಅವರು ಸ್ಪಷ್ಟಪಡಿಸಬೇಕಿದೆ. ಕಾವೇರಿ ಕೀಲಿ ಕೇಂದ್ರ ಬಳಿ ಇದೆ ಎಂದಾದರೆ ಇವರ ಹೊಣೆ ಏನು? ಆ ಕೀಲಿ ಈಗ ಸ್ಟಾಲಿನ್ ಅವರ ಕೈಯ್ಯಲ್ಲಿದೆಯೋ ಅಥವಾ ಸೋನಿಯಾ ಗಾಂಧಿ ಅವರ ಕೈಯ್ಯಲ್ಲಿದೆಯೋ? 6/9
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)August 17, 2023

“ಕನ್ನಡಿಗರು ಕೊಟ್ಟ ಪೆನ್ ಈಗ ಗನ್ ರೂಪ ತಳೆದಿದೆಯಾ ಹೇಗೆ? ಕನ್ನಡಿಗರನ್ನು ಕೇಳಿ ಕೇಳಿ ಪಡೆದುಕೊಂಡ ಪೆನ್ ಈಗ ಪೆಚ್ಚಗೆ, ತೆಪ್ಪಗೆ ಮಲಗಿದೆಯಾ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರವೇ ರಾಜ್ಯದ ಜಲ ಸಂಕಷ್ಟದ ಬಗ್ಗೆ ಸಭೆಯಲ್ಲೇ ಅಂಕಿ-ಅಂಶ ಸಮೇತ ಹೇಳಿದೆ. ಪಾಪ.. ಜಲ ಸಂಪನ್ಮೂಲ ಸಚಿವರಿಗೆ ಈ ಬಗ್ಗೆ ಮಾಹಿತಿ ಇಲ್ಲವೇ?” ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:VIDEO| ಮಹಿಳೆಯನ್ನು 500 ಮೀಟರ್ ಎಳೆದೊಯ್ದ ಕಾರು ಚಾಲಕ..ಆಕೆಯನ್ನು ರಕ್ಷಿಸಲು ಓಡಿದ ಜನ!
ಕಾವೇರಿ ವಿಷಯದಲ್ಲಿ ಕಾಂಗ್ರೆಸ್ಸಿನದು ಸದಾ ಎರಡು ನಾಲಿಗೆ! ಕಾವೇರಿ ಪಾಲಿಗೆ ಆ ಪಕ್ಷ ನಯವಂಚನೆ,ನಂಬಿಕೆ ದ್ರೋಹದ ಪ್ರತೀಕ.ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿ ಇಡುವ ಕೆಲಸ ಮಾಡಿಬಿಟ್ಟಿದೆ.ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ.ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಸಂಕಷ್ಟಸೂತ್ರದ ಪಾಲನೆಗೆ ಒತ್ತಡ ಹೇರಬೇಕು.9/9
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)August 17, 2023

“ಕಾವೇರಿ ವಿಷಯದಲ್ಲಿ ಕಾಂಗ್ರೆಸ್ಸಿನದು ಸದಾ ಎರಡು ನಾಲಿಗೆ. ಕಾವೇರಿ ಪಾಲಿಗೆ ಆ ಪಕ್ಷ ನಯವಂಚನೆ, ನಂಬಿಕೆ ದ್ರೋಹದ ಪ್ರತೀಕ. ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿಯಿಡುವ ಕೆಲಸ ಮಾಡಿಬಿಟ್ಟಿದೆ. ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಸಂಕಷ್ಟ ಸೂತ್ರದ ಪಾಲನೆಗೆ ಒತ್ತಡ ಹೇರಬೇಕು” ಎಂದು ಕಾಂಗ್ರೆಸ್​ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್​ ವಿರುದ್ಧ ಎಚ್​ಡಿಕೆ ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ರಸ್ತೆ ಅಪಘಾತದಲ್ಲಿ ಆಟೋ ಜರ್ನಲಿಸ್ಟ್​ ಸುವಿಲ್ ಸುಸ್ವಿರ್ಕರ್ ದುರ್ಮರಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
