ರಾಮನಗರ:ಇಂದು ನಡೆದ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ, ಜಾತ್ಯಾತೀತ ಜನತಾದಳ ನಾಯಕ ಎಚ್​.ಡಿ. ಕುಮಾರಸ್ವಾಮಿ, ಮೈತ್ರಿ ಬಗ್ಗೆ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದೆ. ಮುಂದಿನ ಒಂದು ತಿಂಗಳೊಳಗೆ 31 ಜಿಲ್ಲೆಗಳಲ್ಲೂ ಸಭೆ ಮಾಡುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ:ದೇಶದಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ-ಜೆಡಿಎಸ್ ಒಂದಾಗಿದೆ: ನಿಖಿಲ್​ ಕುಮಾರಸ್ವಾಮಿ
“ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಕೆಲಸವಾಗಲಿದೆ. ಮೈತ್ರಿಯಿಂದ ನಮ್ಮ ಅಭ್ಯರ್ಥಿಗಳಿಗೆ ಟಿಕೆಟ್ ಸಮಸ್ಯೆಗಳು ಉಂಟಾಗುವುದಿಲ್ಲ. ಈ ಬಗ್ಗೆ ನಾನು ಭರವಸೆ ಕೊಡುತ್ತೇನೆ. ಅದರ ಬಗ್ಗೆ ಕುಳಿತು ಮುಕ್ತವಾಗಿ ಚರ್ಚಿಸುತ್ತೇವೆ. ಹೊಂದಾಣಿಕೆಯಿಂದ ಯಾರ ರಾಜಕೀಯ ಭವಿಷ್ಯವನ್ನೂ ಹೊಸಕಿ ಹಾಕಲ್ಲ. ಜಿಟಿಡಿ ನೇತೃತ್ವದ ಕೋರ್ ಕಮಿಟಿ ಮೂಲಕ ಸಂಘಟನೆ ಮಾಡಲಿದ್ದೇವೆ” ಎಂದು ಹೇಳಿದರು.
“ಕಾಂಗ್ರೆಸ್ ನಾಯಕರು ನನ್ನ ಬಗ್ಗೆ ಏನು ಬೇಕಾದರೂ ಅವಹೇಳನ ಮಾಡಲಿ. ಇದಕ್ಕೆ ನನ್ನ ಕಾರ್ಯಕರ್ತರು, ನಾಡಿನ ಜನತೆ ತಕ್ಕ ಉತ್ತರ ಕೊಡುತ್ತಾರೆ. ಇನ್ಮುಂದೆ ಅವರ ಯಾವ ಟೀಕೆಗೂ ಉತ್ತರಿಸುವುದಿಲ್ಲ. 17 ಜನ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಎಚ್​.ಡಿ. ದೇವೇಗೌಡ ಅವರ ತೀರ್ಮಾನಕ್ಕೆ ಎಲ್ಲರ ಸಹಮತ ವ್ಯಕ್ತಪಡಿಸಿದ್ದಾರೆ. ಮುಸಲ್ಮಾನ ಬಂದುಗಳು ಎಚ್ಚರಿಕೆಯಿಂದ ಇರಬೇಕು. ಕೆಲ ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಹೇಳಿದರು.
ಇದನ್ನೂ ಓದಿ:ಪಟಾಕಿ ಮಾರಾಟ ಸುರಕ್ಷತಾ ಕ್ರಮ ಅನುಸರಿ ಡಿ.ಸಿ ಸಿ.ಸತ್ಯಭಾಮ ಸೂಚನೆ
“ಮತಕ್ಕಾಗಿ ಒಂದು ಸಮಾಜವನ್ನು ಓಲೈಕೆ ಮಾಡುವ ಅವಶ್ಯಕತೆಯಿಲ್ಲ. ಮುಸಲ್ಮಾನ ಬಂದುಗಳ ಬಗ್ಗೆ ನನ್ನ ಕಮಿಟ್​ಮೆಂಟ್ ಏನು ಎಂಬುದು ತಿಳಿದಿದೆ. ಕಳೆದ ಬಾರಿ ಉಂಟಾದ ಸಮಸ್ಯೆ ಬಗ್ಗೆ ಧ್ವನಿ ಎತ್ತಿ ಅವರ ಪರವಾಗಿ ನಿಂತಿದ್ದು ನಾನು. ಹಾಗಾಗಿ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡಬೇಡಿ” ಎಂದು ಸಭೆಯಲ್ಲಿ ಎಚ್​.ಡಿ. ಕುಮಾರಸ್ವಾಮಿ ಹೇಳಿದರು.
ತೆನೆ ಹೊತ್ತ ಕಮಲ: ಎಚ್​ಡಿಕೆ ನಡೆಗೆ ಬೇಸತ್ತ ಅಲ್ಪಸಂಖ್ಯಾತ ಮುಖಂಡರಿಂದ ಜೆಡಿಎಸ್​ಗೆ ಸಾಮೂಹಿಕ ರಾಜೀನಾಮೆ ನಿರ್ಧಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 8 =
Remember me
