ಬೆಂಗಳೂರು:ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ಹೆದ್ದಾರಿಯ(Mysuru-Bengaluru Express Way)ಟೋಲ್ ದರದಲ್ಲಿ ಕಂಡುಬಂದ ಹೆಚ್ಚಳದ ಕುರಿತು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ(HD Kumarswamy)ಸರಣಿ ಟ್ವೀಟ್ ಮೂಲಕ ಆರೋಪಿಸಿದ್ದಾರೆ.
ಇದನ್ನೂ ಓದಿ:ನಿಷೇಧಿತ ಪಿಎಫ್​ಐ ಸಂಘಟನೆಯ ಶಸ್ತ್ರಾಸ್ತ್ರ ತರಬೇತುದಾರನನ್ನು ಬಂಧಿಸಿದ ರಾಷ್ಟ್ರೀಯ ತನಿಖಾ ಸಂಸ್ಥೆ
“ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ. ಬಿಜೆಪಿ(BJP)ಮತ್ತು ಕಾಂಗ್ರೆಸ್(Congress)ಸರಕಾರಗಳೆರಡೂ ಜನರ ಮೇಲೆ ಮತ್ತಷ್ಟು ಭಾರ ಹೊರೆಸಿವೆ. ಏಕಾಏಕಿ ಈ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ 30 ರಿಂದ 200 ರೂ.ವರೆಗೆ ಟೋಲ್ ದರ ಹೆಚ್ಚಳ ಮಾಡಿರುವುದು ಸರಿಯಲ್ಲ, ಸಮರ್ಥನಿಯವೂ ಅಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ:ನಿಷೇಧಿತ ಪಿಎಫ್​ಐ ಸಂಘಟನೆಯ ಶಸ್ತ್ರಾಸ್ತ್ರ ತರಬೇತುದಾರನನ್ನು ಬಂಧಿಸಿದ ರಾಷ್ಟ್ರೀಯ ತನಿಖಾ ಸಂಸ್ಥೆ
“ಇಷ್ಟು ದೊಡ್ಡ ಪ್ರಮಾಣದಲ್ಲಿ ಟೋಲ್ ದರ ಹೆಚ್ಚಿಸಿರುವುದು ‘ಹೆದ್ದಾರಿಯಲ್ಲಿ ಹಗಲು ದರೋಡೆ’ಯಷ್ಟೇ. ಎಕ್ಸ್​ಪ್ರೆಸ್ ಹೆದ್ದಾರಿಗೆ ಭೂಮಿ ಕೊಟ್ಟಿದ್ದು ಕರ್ನಾಟಕ ಸರಕಾರ. ಇದ್ದ ನೆಲೆ ಕಳೆದುಕೊಂಡವರು ನಮ್ಮ ರೈತರು. ಈಗ 20% ಸುಲಿಗೆಗೆ ಒಳಗಾಗುತ್ತಿರುವವರು ಕೂಡ ಕನ್ನಡಿಗರೇ. ಕನ್ನಡಿಗರನ್ನು ಕೊಳ್ಳೆ ಹೊಡೆಯುವ ಧೂರ್ತ ನಡೆಗೆ ನಮ್ಮ ಧಿಕ್ಕಾರ” ಎಂದು ಟ್ವೀಟ್ ಮಾಡಿ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + eight =
Remember me
