ರಾಮನಗರ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬುಧವಾರ ನಿಖಿಲ್ ಮದುವೆಗಾಗಿ ಜಾನಪದ ಲೋಕದ ಬಳಿ ಗುರುತಿಸಿರುವ ಜಾಗವನ್ನು ಎರಡನೇ ಬಾರಿ ವೀಕ್ಷಣೆ ಮಾಡಿ ಪರಿಶೀಲಿಸಿದರು.
ನಿಖಿಲ್-ರೇವತಿ ವಿವಾಹ ಏ17ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೀಗರಾದ ಮಂಜುನಾಥ್ ಜತೆ ಆಗಮಿಸಿ, 54 ಎಕರೆ ಜಾಗ ವೀಕ್ಷಿಸಿದರು. ಈ ಸ್ಥಳ ರಾಮನಗರದಿಂದ 5 ಕಿ.ಮೀ, ಚನ್ನಪಟ್ಟಣದಿಂದ 8 ಕಿ.ಮೀ ದೂರದಲ್ಲಿದೆ. ಮೈಸೂರು-ಬೆಂಗಳೂರು ಹೆದ್ದಾರಿ ಪಕ್ಕದಲ್ಲಿಯೇ ಇರುವುದರಿಂದ ಸಮಾರಂಭಕ್ಕೆ ಸೂಕ್ತ ಸ್ಥಳ ಎಂದು ಕುಮಾರಸ್ವಾಮಿ ಹೇಳಿದರು.
ನಾವೆಲ್ಲ ಸಂಪ್ರದಾಯಸ್ಥ ಕುಟುಂಬದವರಾಗಿದ್ದು, ಇನ್ನೆರಡು ದಿನಗಳಲ್ಲಿ ಈ ಜಾಗಕ್ಕೆ ಜ್ಯೋತಿಷಿಗಳು ಭೇಟಿ ನೀಡಿ, ಕಲ್ಯಾಣ ಮಂಟಪ ಎಲ್ಲಿರಬೇಕು, ಧಾರ್ವಿುಕ ಕಾರ್ಯ ಎಲ್ಲಿ ನಡೆಸಬೇಕು ಎಂಬುದನ್ನು ಗುರುತಿಸಲಿದ್ದಾರೆ ಎಂದು ತಿಳಿಸಿದರು.
ಇದು ಅದ್ದೂರಿ ಮದುವೆ ಅಲ್ಲ. ಗಣ್ಯರು ಆಗಮಿಸುವುದರಿಂದ ವಿಶಾಲ ಪ್ರದೇಶ ಆಯ್ಕೆ ಮಾಡಿಕೊಂಡಿದ್ದೇವೆ. ಪಾರ್ಕಿಂಗ್​ಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಸುತ್ತಲಿನ ಮಾಲೀಕರೊಂದಿಗೆ ಮಾತುಕತೆ ನಡೆಸಲಾಗಿದೆ. ನನ್ನೆಲ್ಲ ಜನರಿಗೆ ಆಮಂತ್ರಣ ನೀಡಲಾಗುವುದು. ಆಹ್ವಾನ ಪತ್ರಿಕೆ ಸಹ ಸರಳವಾಗಿರಲಿದೆ. ಭೋಜನ ಹಾಗೂ ವಾಹನಗಳ ನಿಲುಗಡೆಗಾಗಿಯೇ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದರು.
ಜಾನಪದ ಲೋಕದ ಬಳಿಯ ಸ್ಥಳವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಬೀಗರಾದ ಮಂಜುನಾಥ್ ವೀಕ್ಷಣೆ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
