ವಿಜಯಪುರ:ಮರಳು ಮಾಫಿಯಾಗೆ ಹೆಡ್​​ ಕಾನ್ಸ್​ಟೆಬಲ್ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಹತ್ಯೆ ಆರೋಪಿ ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಲ್ಲದೆ, ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದರಿಂದ ಆತನ ಮೇಲೆ ಗುಂಡು ಹಾರಿಸಬೇಕಾದ ಪ್ರಸಂಗ ಸೃಷ್ಟಿಯಾಗಿತ್ತು.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪುರ ಬಳಿ ಗುರುವಾರ ತಡರಾತ್ರಿ ಮರಳು ಅಕ್ರಮ ಸಾಗಾಣಿಕೆಯನ್ನು ತಡೆಯಲು ಯತ್ನಿಸಿದ್ದ ಹೆಡ್​ ಕಾನ್ಸ್​ಟೆಬಲ್ ಮಯೂರ್ ರಾಠೋಡ್ (51) ಮೇಲೆ ಟ್ರ್ಯಾಕ್ಟರ್ ಹರಿಸಿ ಸಾಯಿಬಣ್ಣ ಕರ್ಜಗಿ ಸಾಯಿಸಿದ್ದ. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಟ್ರ್ಯಾಕ್ಟರ್​ ಮಾಲೀಕ ಸಾಯಿಬಣ್ಣ ಕರ್ಜಗಿಯನ್ನು ವಿಜಯಪುರ ಜಿಲ್ಲೆಯಲ್ಲಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದರು.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ಆರೋಪಿಯನ್ನು ವಿಜಯಪುರದಿಂದ ಕಲಬುರಗಿಯ ಜೇವರ್ಗಿ ಕಡೆಗೆ ಕರೆದುಕೊಂಡು ಬರುತ್ತಿದ್ದಾಗ ಜೇವರ್ಗಿ ತಾಲೂಕಿನ ಮಂದೇವಾಲ ಮತ್ತು ಜೇರಟಗಿ ಮಧ್ಯದ ಪ್ರದೇಶದಲ್ಲಿ ಮೂತ್ರವಿಸರ್ಜನೆಗಾಗಿ ವಾಹನ ನಿಲ್ಲಿಸುವಂತೆ ಕೋರಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ವಾಹನ ನಿಲ್ಲಿಸಿದ್ದು, ಮೂತ್ರವಿಸರ್ಜನೆಗೆಂದು ತೆರಳಿದ್ದ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ.
ಇದನ್ನೂ ಓದಿ:‘ಅಜ್ಜಯ್ಯ’ನಿಗಾಗಿ ಮೀಸೆ ತೆಗೆದ್ರು ನಿರ್ದೇಶಕ ಯೋಗರಾಜ್ ಭಟ್!
ಆಗ ಪೊಲೀಸರು ಬೆನ್ನಟ್ಟಿ ಹಿಡಿಯಲು ಮುಂದಾದಾಗ ಪೊಲೀಸರ ಮೇಲೆ ಹಲ್ಲೆ ಮಾಡಲು ಬಂದಿದ್ದ. ಬಟನ್ ಚಾಕು ಹಿಡಿದು ಯಡ್ರಾಮಿ ಪಿಎಸ್ಐ ಮೈಮೇಲೆರಗಲು ಬಂದಿದ್ದ. ಆ ಸಂದರ್ಭದಲ್ಲಿ ಅವರು ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆ ಬಳಿಕವೂ ತಪ್ಪಿಸಿಕೊಂಡು ಓಡಿಹೋಗುತ್ತಿದ್ದ ಆರೋಪಿಯ ಕಾಲಿಗೆ ಪಿಎಸ್​ಐ ಗುಂಡು ಹಾರಿಸಿದ್ದು, ಗಾಯಗೊಂಡ ಆರೋಪಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದು ದೇಶದಲ್ಲಷ್ಟೇ ಅಲ್ಲ, ದಕ್ಷಿಣ ಏಷ್ಯಾದಲ್ಲೇ ಪ್ರಥಮ: ಈ ಆಸ್ಪತ್ರೆಯ ವೈದ್ಯರು ದೇಹದೊಳಗೇ ಓಡಾಡಿ ಪರೀಕ್ಷಿಸುತ್ತಾರೆ!

ಈ ಕಾರ್ ‘ರೇಂಜೇ’ ಬೇರೆ!: ಬ್ಯಾಟರಿ ಫುಲ್ ಚಾರ್ಜ್ ಮಾಡಲು ಹತ್ತೇ ನಿಮಿಷ, ಒಮ್ಮೆ ಚಾರ್ಜ್​ ಮಾಡಿದ್ರೆ 1,200 ಕಿ.ಮೀ. ಪ್ರಯಾಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 6 =
Remember me
