ಬೆಂಗಳೂರು:ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ಹೆಡ್​ ಕಾನ್ಸ್​ಟೇಬಲ್​ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಚಂದ್ರಾ ಲೇಔಟ್​ ಪೊಲೀಸ್​ ಠಾಣೆ ವ್ಯಾಪ್ತಿಯ ಅತ್ತಿಗುಪ್ಪೆಯಲ್ಲಿ ನಡೆದಿದೆ.
ಮೃತರನ್ನು ಹಾಸನ ಮೂಲದ ನವೀನ್​ ಎಂದು ಗುರುತಿಸಲಾಗಿದ್ದು, ಇವರು ವಿಜಯನಗರ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಹೆಡ್​ ಕಾನ್ಸ್​ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೊದಲಿಗೆ ಇವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿತ್ತು.
ಇದನ್ನೂ ಓದಿ:ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 80ಕ್ಕೂ ಹೆಚ್ಚು ಗರ್ಭಿಣಿಯರಿಗೆ ತಗುಲಿದ ಏಡ್ಸ್​ ಸೋಂಕು
ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ನವೀನ್ ಶುಕ್ರವಾರ ಕರ್ತವ್ಯ ಮುಗಿಸಿಕೊಂಡು ಬಂದ ನಂತರ​ ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷ ಬೆರೆಸಿದ ಮದ್ಯ ಹಾಗೂ ಕೂಲ್​ಡ್ರಿಂಕ್ಸ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಕೆಲ ಹೊತ್ತಿಗೂ ಮುಂಚೆ ವಾಟ್ಸ್​ಆ್ಯಪ್​ ಸ್ಟೇಟಸ್​ನಲ್ಲಿ ನೋವಿನ ನುಡಿಗಳನ್ನು ಸಹ ಹಂಚಿಕೊಂಡಿದ್ದರು.
ಶನಿವಾರ ಬೆಳಗ್ಗೆ ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳ ಕರೆ ಸ್ವೀಕರಿಸದೆ ಇದ್ದಾಗ ಅನುಮಾನಗೊಂಡು ಮನೆಯ ಬಾಗಿಲು ಮುರಿದು ಪರಿಶೀಲಿಸಿದಾಗ ನವೀನ್​ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಮೊದಲಿಗೆ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಚಂದ್ರಾಲೇಔಟ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + sixteen =
Remember me
