ತುಮಕೂರು:ಕಾಂಗ್ರೆಸ್ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾಗ ಗುಂಪಿನಲ್ಲಿದ್ದ ಕಿಡಿಗೇಡಿಯ ಕಲ್ಲೆಸೆತದಿಂದಾಗಿ ಅವರು ಗಾಯಗೊಂಡಿದ್ದಾರೆ.
ಪರಮೇಶ್ವರ್ ಅವರು ಇಂದು ಸಂಜೆ 5.15ರ ಸುಮಾರಿಗೆ ಕೊರಟಗೆರೆ ಕ್ಷೇತ್ರದ ಭೈರನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾಗ ಗುಂಪಿನಲ್ಲಿ ಯಾರೋ ಕಲ್ಲೆಸೆದಿದ್ದು, ತಲೆಗೆ ಬಲವಾದ ಏಟು ಬಿದ್ದಿದೆ.
ಇದನ್ನೂ ಓದಿ:ಭ್ರಷ್ಟ ಅಧಿಕಾರಿಗೆ 15 ವರ್ಷಗಳ ಬಳಿಕ 2 ವರ್ಷ ಸಜೆ, 60 ಲಕ್ಷ ರೂ. ದಂಡ!
ತೀವ್ರ ಗಾಯಗೊಂಡ ಅವರನ್ನು ಬೆಂಬಲಿಗರು ಕೂಡಲೇ ಅಕ್ಕಿರಾಂಪುರದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಸಿದ್ಧಾರ್ಥ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರಮೇಶ್ವರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ಇದನ್ನೂ ಓದಿ:ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!
ಹಿಂದೆಯೂ ನಡೆದಿತ್ತು ಇಂಥದ್ದೇ ಪ್ರಕರಣ:ಈ ಹಿಂದೆ ನಾಮಪತ್ರ ಸಲ್ಲಿಸುವ ವೇಳೆ ಕೂಡ ಕಿಡಿಗೇಡಿಗಳು ಕಲ್ಲು ಎಸೆದಿದ್ದರು. ಆಗ ಕೊರಟಗೆರೆ ತಾಲೂಕು ಕಛೇರಿ ಬಳಿ ಭದ್ರತೆಗೆ ನಿಯೋಜನೆಗೊಂಡಿದ್ದ ಮಹಿಳಾ ಪೊಲೀಸ್ ಪೇದೆಗೆ ಕಲ್ಲು ತಗುಲಿ ಆಕೆ ಸ್ಥಳದಲ್ಲೇ ಕುಸಿದು ಬಿದ್ದಿದ್ದರು.
ಸಿಂಹವನ್ನೇ ಹೋಲುವ ಕರುವಿಗೆ ಜನ್ಮ ನೀಡಿದ ಹಸು!

4 ವರ್ಷ ಕಳೆದರೂ ಕಳವಾದ ಚಿನ್ನದ ಸರ ಪತ್ತೆ ಮಾಡಲಾಗದೆ ಹೊಸ ಸರ ಕೊಡಿಸಿದ ಪೊಲೀಸರು!; ಆಗಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 9 =
Remember me
