ಬೆಂಗಳೂರು:ರಾಜ್ಯದಿಂದ ಶಬರಿಮಲೆಗೆ ತೆರಳಲಿರುವ ಶ್ರೀಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಆರೋಗ್ಯ ಇಲಾಖೆ ಮಹತ್ವದ ಸಲಹೆಯೊಂದನ್ನು ನೀಡಿದ್ದು, ಎಚ್ಚರಿಕೆ ವಹಿಸಬೇಕು ಎಂಬ ಕಿವಿಮಾತನ್ನೂ ಹೇಳಿದೆ. ಉಸಿರಾಟದ ತೊಂದರೆ, ಹೃದ್ರೋಗ, ಅಸ್ತಮಾ ಸೇರಿ ಗಂಭೀರ ಅನಾರೋಗ್ಯ ಸಮಸ್ಯೆ ಹೊಂದಿರುವವರು ಬೆಟ್ಟ ಏರಬಾರದು ಎಂದು ಶಬರಿಮಲೆ ಯಾತ್ರಾರ್ಥಿಗಳಿಗೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಜ್ವರ, ಕೆಮ್ಮು, ಉಸಿರಾಟದ ತೊಂದರೆ, ಗಂಟಲು ನೋವಿನಂತಹ ರೋಗ ಲಕ್ಷಣಗಳನ್ನು ಹೊಂದಿರುವ ಯಾತ್ರಾರ್ಥಿಗಳು ಹೆಚ್ಚು ಪ್ರಯಾಣ ಮಾಡಬಾರದು. ಮಧುಮೇಹ, ಅಧಿಕ ರಕ್ತದೊತ್ತಡ ಸೇರಿ ವಿವಿಧ ಕಾಯಿಲೆಗಳನ್ನು ಹೊಂದಿರುವವರು ವೈದ್ಯರು ಸೂಚಿಸಿದ ಔಷಧಗಳು ಮತ್ತು ಚಿಕಿತ್ಸಾ ದಾಖಲೆಗಳನ್ನು ತಮ್ಮೊಂದಿಗೆ ಸದಾ ಹೊಂದಿರಬೇಕು ಎಂದು ಇಲಾಖೆ ಸೂಚಿಸಿದೆ.
ತೀರ್ಥಯಾತ್ರೆಯ ಸಮಯದಲ್ಲಿ ನಿಯಮಿತವಾಗಿ ಔಷಧಗಳನ್ನು ಸೇವಿಸಬೇಕು. ಆರೋಗ್ಯಕ್ಕೆ ಸಂಬಂಧಿತ ಸಮಸ್ಯೆ ಇರುವ ಯಾತ್ರಾರ್ಥಿಗಳು ತೀರ್ಥಯಾತ್ರೆಗೆ ಮುಂಚಿತವಾಗಿ ವೈದ್ಯರ ಸಲಹೆ ಪಡೆದುಕೊಳ್ಳಬೇಕು. ಬೆಟ್ಟ ಏರಲಿಕ್ಕೆ ದೈಹಿಕ ಸದೃಢತೆಯನ್ನು ಹೊಂದಲು ಯಾತ್ರೆಯ ಎರಡು ವಾರ ಮೊದಲು ದಿನಕ್ಕೆ ಕನಿಷ್ಠ ಅರ್ಧ ಗಂಟೆ ಓಟ ಅಥವಾ ನಡಿಗೆ ರೂಢಿಸಿಕೊಳ್ಳುವುದು ಉತ್ತಮ ಎಂದು ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ; ವಸತಿ ನಿಲಯದಲ್ಲೇ ಸಾವು..

23 ವರ್ಷಗಳ ಕಾಲ ನಾಪತ್ತೆಯಾಗಿದ್ದ ತಂದೆ; ಸತ್ತು ಹೋಗಿದ್ದರೆಂದು ಭಾವಿಸಿದ್ದ ಮಕ್ಕಳಿಗೆ ಕೊನೆಗೂ ಸಿಕ್ಕ ಅಪ್ಪ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
