ಬೆಂಗಳೂರು: ಕರೋನಾ ವೈರಸ್​ Covid19 ಸೋಂಕು ವ್ಯಾಪಿಸುತ್ತಿರುವ ಕಾರಣ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಿರುವ ಸರ್ಕಾರ ಮುಂದಿನ ಒಂದು ವಾರ ಕಾಲ ಆರೋಗ್ಯ ತುರ್ತುಪರಿಸ್ಥಿತಿಯ ಕ್ರಮಗಳನ್ನು ತೆಗೆದುಕೊಂಡಿದೆ. ಒಂದು ವಾರ ಕಾಲ ಕರ್ನಾಟಕ ಸಂಪೂರ್ಣ ಬಂದ್ ಆಗಿರಲಿದ್ದು, ಸಾರ್ವಜನಿಕರು ಸೇರುವಂತಹ ಕಾರ್ಯಕ್ರಮಗಳನ್ನು ನಿಷೇಧ ಹೇರಿದೆ. ಈ ವಿಷಯದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.ಕರೊನಾ ವೈರಸ್ ಸೋಂಕಿನಿಂದ ಕಲಬುರಗಿಯ ವ್ಯಕ್ತಿಯೊಬ್ಬರು ದುರದೃಷ್ಟವಶಾತ್ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಹಾಗೂ ಡಾ. ದೇವಿ ಶೆಟ್ಟಿ ಹಾಗೂ ವಿವಿಧ ವೈದ್ಯಕೀಯ ಸಂಘಟನೆಗಳೊಂದಿಗೆ ಸಭೆ ನಡೆಸಿದ ನಂತರ ಮುಖ್ಯಮಂತ್ರಿಗಳು ಈ ನಿರ್ಧಾರವನ್ನು ಪ್ರಕಟಿಸಿದರು.ಈ ಸಂಬಂಧ ಪತ್ರಿಕಾಗೋಷ್ಠಿ ನಡೆಸಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ ವಿಷಯಗಳ ಸಾರ ಇಲ್ಲಿದ್ದು, ನಾಳೆಯಿಂದ ಒಂದು ವಾರದ ಅವಧಿಗೆ ಏನಿರತ್ತೆ ಏನಿರಲ್ಲ ಎಂಬುದರ ಮಾಹಿತಿ ಇಲ್ಲಿದೆ.
ಬ್ರೇಕಿಂಗ್ ನ್ಯೂಸ್​: ಒಂದು ವಾರ ಕರ್ನಾಟಕ ಬಂದ್​- ಆರೋಗ್ಯ ತುರ್ತುಪರಿಸ್ಥಿತಿ: ಸಿಎಂ ಯಡಿಯೂರಪ್ಪ ಅವರ ಪತ್ರಿಕಾಗೋಷ್ಠಿ ವಿಡಿಯೋ ಇಲ್ಲಿದೆ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 + 12 =
Remember me
