ಬೆಂಗಳೂರು:ಮುಂಬರುವ ಲೋಕಸಭೆ, ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ಹಾಗೂ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಸೆ.10ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಜೆಡಿಎಸ್ ಸಮಾವೇಶ ನಡೆಯಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮಾಜಿ ಪ್ರಧಾನಿ ಎಚ್,ಡಿ.ದೇವೇಗೌಡ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಮಾಜಿ ಶಾಸಕರು, ಹಿರಿಯ ಮುಖಂಡರು, ಸಾವಿರಾರು ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದ್ದಾರೆ. ಅರಮನೆ ಮೈದಾನದ ನಲಪಾಡ್ ಪೆವಿಲಿಯನ್‌ನಲ್ಲಿ ಭಾನುವಾರ ಬೆಳಗ್ಗೆ 10.30ರಿಂದ ಸಭೆ ಆರಂಭವಾಗಲಿದೆ ಎಂದಿದ್ದಾರೆ.
ದೃಢ ಹೆಜ್ಜೆ ಇಡೋಣನನ್ನ ಆರೋಗ್ಯ ಅತ್ಯುತ್ತಮವಾಗಿ ಸುಧಾರಿಸಿದೆ. ಜೆಡಿಎಸ್ ಚಟುವಟಿಕೆಗಳಲ್ಲಿ ಮತ್ತೆ ಸಕ್ರಿಯವಾಗಿ ಭಾಗಿಯಾಗುತ್ತಿದ್ದೇನೆ. ನಾವೆಲ್ಲರೂ ಪಣತೊಟ್ಟು ಹೊರಡೋಣ, ಪಕ್ಷವನ್ನು ಚೈತನ್ಯಶೀಲವಾಗಿ ಮರಳಿ ಕಟ್ಟೋಣ ಎಂದು ತಿಳಿಸಿದ್ದಾರೆ.ಕರ್ನಾಟಕ ಸಂಕಷ್ಟದಲ್ಲಿದೆ. ತೀವ್ರ ಬರ-ನೆರೆ, ಅನಧಿಕೃತ ಲೋಡ್ ಶೆಡ್ಡಿಂಗ್, ಕಾವೇರಿ ಬಿಕ್ಕಟ್ಟಿನಿಂದ ತತ್ತರಿಸುತ್ತಿದೆ. ಅನ್ನ ಕೊಡುವ ರೈತರನ್ನು, ತೆರಿಗೆ ತೆರುವ ನಾಗರಿಕರನ್ನು ಕಾಲ ಕಸದಂತೆ ಕಡೆಗಣಿಸಲಾಗಿದೆ. ಈ ದುರಿತ ದಿನಗಳಲ್ಲಿ ನಾವು ಜನರ ಜತೆ ಬದ್ಧತೆಯಿಂದ ನಿಲ್ಲಬೇಕು. ಜನಪರ ನಿಲುವು, ಹೋರಾಟ ನಮ್ಮೆಲ್ಲರ ಹೊಣೆ, ನೈತಿಕ ಜವಾಬ್ದಾರಿ ಎಂದು ಕಾರ್ಯಕರ್ತರು, ಮುಖಂಡರಿಗೆ ಒತ್ತಿ ಹೇಳಿದ್ದಾರೆ.
ಸೋತಿದ್ದೇವೆ, ಸೋಲೇ ಕೊನೆಯಲ್ಲಸೋತಿದ್ದೇವೆ, ನಿಜ.ಸೋಲೇ ಕೊನೆಯಲ್ಲ. ಹೋರಾಟದ ಹಾದಿಯಲ್ಲಿ ನಾವೆಲ್ಲರೂ ಸ್ಥೈರ್ಯ,ಅರ್ಪಣಾಭಾವದಿಂದ ಹೆಜ್ಜೆ ಹಾಕಲೇಬೇಕು. ನಾನೂ ಸೇರಿ ಪ್ರತಿಯೊಬ್ಬರೂ ಪಕ್ಷದ ಕಟ್ಟಾಳುಗಳೇ ಎನ್ನವುದನ್ನು ಯಾರೂ ಮರೆಯುವಂತಿಲ್ಲ. ಪಕ್ಷದ ಉಳಿವು, ಗೆಲುವಿಗಾಗಿ ಅವಿರತವಾಗಿ ಶ್ರಮಿಸೋಣ ಎಂದು ಹೇಳಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − 11 =
Remember me
